ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ವಿದ್ಯಾರ್ಥಿ ದೆಸೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ತೊಡಗಿಸಿಕೊಂಡರೆ ವ್ಯಕ್ತಿತ್ವ ವಿಕಸನ ನಾಯಕತ್ವ ಗುಣ ಸಹಕಾರ ಭ್ರಾತೃತ್ವ ಮೈಗೂಡಿಸಿಕೊಂಡರೆ ಮುಂದಿನ ಬದುಕು ಸುಮಧುರವಾಗುವುದು ಎಂದು ರೋಟರಿ ಕ್ಲಬ್ ಕುಂದಾಪುರ ಅಧ್ಯಕ್ಷ ನಾಗರಾಜ್ ಶೆಟ್ಟಿ ಹೇಳಿದರು.
ಅವರು ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಪದವಿ ಪೂರ್ವ ವಿಭಾಗ, ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಸಿಯೇಶನ್ ಪ್ರಾಯೋಜಿತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿದ್ದ ಬೈಂದೂರು ವಲಯದ ಅರಣ್ಯ ಉಪ ವಿಭಾಗಾಧಿಕಾರಿ ಕೆ. ಸದಾಶಿವ ಅವರು, ಪರಿಸರದ ಕಾಳಜಿಯನ್ನು ಬೆಳೆಸಿಕೊಂಡರೆ ಮುಂದಿನ ಭವಿಷ್ಯ ಉತ್ತಮವಾಗಿರುವುದು. ಪರಿಸರದ ನಾಶವನ್ನು ಮಾಡಿದರೆ ಮನಕುಲದ ನಾಶ ಕಂಡಿತ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ವಹಿಸಿದ್ದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ ಶುಭಾಶಂಸನೆಗೈದರು. ಕಾಲೇಜಿನ ಸಂಚಾಲಕ ಎನ್. ಸದಾಶಿವ ನಾಯಕ್, ವಿದ್ಯಾರ್ಥಿ ಪ್ರತಿನಿಧಿಗಳಾದ ಪ್ರಾರ್ಥನಾ ಪೈ ಹಾಗೂ ಆದಿತ್ಯs ಪೂಜಾರಿ ಉಪಸ್ಥಿತರಿದ್ದರು.
ಕಾರ್ಯಕ್ರಮಾಧಿಕಾರಿ, ಉಪನ್ಯಾಸಕಿ ಸುಗುಣ ಆರ್.ಕೆ. ಪ್ರಾಸ್ತಾವಿಕ ಮಾತುಗಳನ್ನಾಡಿ, ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ದೀಪಾಲಿ ಪ್ರಾರ್ಥಿಸಿ, ಅದಿತಿ ಪ್ರತಿಜ್ಞಾವಿಧಿ ಬೋಧಿಸಿದರು. ವೈಷ್ಣವಿ ಬಿಲ್ಲವ ಮತ್ತು ಪ್ರಾರ್ಥನಾ ಪೈ ಅತಿಥಿಗಳನ್ನು ಪರಿಚಯಿಸಿ, ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಅಕ್ಷಯ ಆರ್. ಕಾರ್ಯಕ್ರಮ ನಿರ್ವಹಿಸಿ, ಆಂಗ್ಲ ಭಾಷಾ ಉಪನ್ಯಾಸಕಿ ಸುಪ್ರೀತಾ ಆಚಾರ್ ವಂದಿಸಿದರು.
















