ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಇಲ್ಲಿನ ಮರವಂತೆ ಗ್ರಾಮದ ಮಾರುತಿ ಕಾಂಪ್ಲೆಕ್ಸ್‌ನಲ್ಲಿ ಮಾಂಗಲ್ಯ ಎಂಬ ಚಿನ್ನದ ಅಂಗಡಿಗೆ ಶನಿವಾರ ರಾತ್ರಿ ವೇಳೆ ನುಗ್ಗಿದ ಕಳ್ಳರು, ಲಕ್ಷಾಂತರ ರೂ. ಮೌಲ್ಯದ ಬೆಳ್ಳಿ ಗಟ್ಟಿ, ನಗದು ಕಳವಾಗಿರುವ ಘಟನೆ ಬೆಳಕಿಗೆ ಬಂದಿದೆ.
ಮರವಂತೆ ಗ್ರಾಮದ ಹರಿಶ್ಚಂದ್ರ ರಸ್ತೆಯ ಚಳ್ಳಿಕಳ್ಳಿ ನಿವಾಸಿ ವಿಶ್ವನಾಥ (35) ಅವರು ಈ ಅಂಗಡಿಯನ್ನು ನಡೆಸುತ್ತಿದ್ದು, ಜುಲೈ 4ರಂದು ರಾತ್ರಿ 9.00 ಗಂಟೆಯಿಂದ ಜುಲೈ 5ರಂದು ಬೆಳಿಗ್ಗೆ 5.40 ಗಂಟೆಯ ನಡುವಿನ ಅವಧಿಯಲ್ಲಿ ಕಳ್ಳರು ಅಂಗಡಿಯ ಶಟರ್ ಮುರಿದು ಒಳನುಗ್ಗಿದ್ದಾರೆ. ಬಳಿಕ ಅಂಗಡಿಯ ಡ್ರಾವರ್ ಹಾಗೂ ಕ್ಯಾಬಿನ್‌ನಲ್ಲಿದ್ದ ಸುಮಾರು 600 ಗ್ರಾಂ ಬೆಳ್ಳಿಗಟ್ಟಿ (ಅಂದಾಜು ಮೌಲ್ಯ ₹1,44,000) ಹಾಗೂ ₹1,000 ನಗದನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ.
ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ











