ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಮಹಿಳಾ ಆರೋಪಿಗಳನ್ನು ಕೊಲ್ಲೂರು ಪೊಲೀಸರು ಪ್ರಕರಣ ದಾಖಲಾದ 24 ಗಂಟೆ ಒಳಗಡೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ನೇತ್ರಾವತಿ (33), ಶಾರದ (50) ಹಾಗೂ ದುರ್ಗಮ್ಮ (44) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜೋಶ್ ಹಾಗೂ ಅವರ ಪತ್ನಿ ನಿಮಿಶಾ ಎಂಬವರು ಜು.5ರಂದು ಬೆಳಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಬಂದಿದ್ದು, ದೇವಸ್ಥಾನದ
ಒಳಗೆ ದೇವರ ದರ್ಶನ ಪಡೆದು ಹೊರಾಂಗಣಕ್ಕೆ ಬಂದರು. ಆಗ ನಿಮಿಶಾ ತನ್ನ ಬಳಿ ಇದ್ದ ವ್ಯಾನಿಟಿ ಬ್ಯಾಗ್ ನೋಡಿದಾಗ ದೇವರ ದರ್ಶನ ಪಡೆದು ಹೊರಾಂಗಣಕ್ಕೆ ಬಂದರು. ಆಗ ನಿಮಿಶಾ ತನ್ನ ಬಳಿ ಇದ್ದ ವ್ಯಾನಿಟಿ ಬ್ಯಾಗ್ ನೋಡಿದಾಗ ಬ್ಯಾಗ್‌ನ ಜಿಪ್ ತೆರೆದುಕೊಂಡಿದ್ದು, ಅದರಲ್ಲಿದ್ದ 80,000ರೂ. ಹಣವಿದ್ದ ಪರ್ಸ್ ಕಳವಾಗಿರುವುದು ಕಂಡುಬಂತು.
ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
















