Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಭಿನಯ ಜೀವನ ಕೌಶಲ್ಯ, ಎಲ್ಲ ಕ್ಷೇತ್ರಗಳಲ್ಲೂ ಅಗತ್ಯ: ವಿವೇಕ್ ಆಳ್ವ
    alvas nudisiri

    ಅಭಿನಯ ಜೀವನ ಕೌಶಲ್ಯ, ಎಲ್ಲ ಕ್ಷೇತ್ರಗಳಲ್ಲೂ ಅಗತ್ಯ: ವಿವೇಕ್ ಆಳ್ವ

    Updated:07/07/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ
    : ಆಳ್ವಾಸ್ ಕಾಲೇಜು (ಸ್ವಾಯತ್ತ) ಹಾಗೂ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ, ರಂಗಭೂಮಿ, ಸಿನಿಮಾ, ಧಾರಾವಾಹಿ ಮತ್ತು ಕಿರುಚಿತ್ರಗಳಲ್ಲಿ ಅಭಿನಯಿಸಲು ಆಸಕ್ತಿ ಹೊಂದಿರುವವರಿಗಾಗಿ ಆಯೋಜಿಸಲಾದ ಎರಡು ದಿನಗಳ ಅಭಿನಯ ಸೂಕ್ಷ್ಮತೆಗಳ ತರಬೇತಿ ಕಾರ್ಯಾಗಾರಕ್ಕೆ ಸೋಮವಾರ ಆಳ್ವಾಸ್ ರಂಗ ಅಧ್ಯಯನ ಕೇಂದ್ರದಲ್ಲಿ ಚಾಲನೆ ದೊರೆಯಿತು.

    Click Here

    Call us

    Click Here

     
    ಕೇಂದ್ರದ ನಿರ್ದೇಶಕ ಡಾ. ಜೀವನ್‌ರಾಮ್ ಸುಳ್ಯರವರ ಮಾರ್ಗದರ್ಶನದಲ್ಲಿ ಜುಲೈ 6 ಮತ್ತು 7ರಂದು ನಡೆಯಲಿರುವ ಈ ಕಾರ್ಯಾಗಾರದಲ್ಲಿ ಅಭಿನಯದ ವಿವಿಧ ಆಯಾಮಗಳ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ.
    ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ಅಭಿನಯವು ಕೇವಲ ರಂಗಭೂಮಿ ಅಥವಾ ಸಿನಿಮಾಕ್ಕೆ ಸೀಮಿತವಾಗಿಲ್ಲ. ಶಿಕ್ಷಕರು, ವೃತ್ತಿಪರರು, ಆಡಳಿತಗಾರರು ಸೇರಿದಂತೆ ಪ್ರತಿಯೊಬ್ಬರ ಬದುಕಿನಲ್ಲೂ ಪರಿಣಾಮಕಾರಿ ಅಭಿವ್ಯಕ್ತಿಗೆ ಅಭಿನಯದ ಕೌಶಲ್ಯ ಅತ್ಯಗತ್ಯ. ಇಂದಿನ ಯುವಜನರಲ್ಲಿ ದೇಹದ ಚಲನವಲನವು ಸಹಜತೆಯನ್ನು ಕಳೆದುಕೊಂಡು ಬಿಗಿತ ಹೆಚ್ಚಾಗಿದೆ. ಅದನ್ನು ನಿವಾರಿಸಿ ದೇಹಭಾಷೆ, ಆತ್ಮವಿಶ್ವಾಸ ಹಾಗೂ ಅಭಿವ್ಯಕ್ತಿ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಲು ಇಂತಹ ಕಾರ್ಯಾಗಾರಗಳು ಸಹಕಾರಿಯಾಗುತ್ತವೆ. ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಬೇಕಾದರೆ ಪ್ರತಿಭೆಯ ಜೊತೆಗೆ ಪ್ಯಾಷನ್, ಸಂಪೂರ್ಣ ತೊಡಗಿಸಿಕೊಳ್ಳುವಿಕೆ ಹಾಗೂ ಅಭಿರುಚಿಯೂ ಮುಖ್ಯ ಎಂದು ಹೇಳಿದರು.

    ಡಾ. ಜೀವನ್‌ರಾಮ್ ಸುಳ್ಯರವರು ಅತ್ಯುತ್ತಮ ತರಬೇತುದಾರರಾಗಿದ್ದು, ಅವರ ಮಾರ್ಗದರ್ಶನದಲ್ಲಿ ಅನೇಕ ಕಲಾವಿದರು ರಂಗಭೂಮಿ ಹಾಗೂ ಚಿತ್ರರಂಗದಲ್ಲಿ ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ. ರಂಗಕಲೆಯ ಎಲ್ಲಾ ಆಯಾಮಗಳನ್ನು ವ್ಯವಸ್ಥಿತವಾಗಿ ಕಲಿಯಲು ಈ ಕಾರ್ಯಾಗಾರ ಉತ್ತಮ ವೇದಿಕೆಯಾಗಿದ್ದು, ತರಗತಿ ಕೊಠಡಿಯಲ್ಲಿ ದೊರೆಯುವ ಸೈದ್ಧಾಂತಿಕ ಕಲಿಕೆಗೆ ಹೋಲಿಸಿದರೆ ಪ್ರಾಯೋಗಿಕ ಅನುಭವದಿಂದ ಹತ್ತು ಪಟ್ಟು ಹೆಚ್ಚಿನ ಅರಿವು ದೊರೆಯುತ್ತದೆ ಎಂದರು. ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಬೆಳವಣಿಗೆಯಲ್ಲಿ ಡಾ. ಜೀವನ್‌ರಾಮ್ ಸುಳ್ಯ ರವರ ಕೊಡುಗೆ ಅಪಾರವಾಗಿದೆ ಎಂದು ಶ್ಲಾಘಿಸಿದರು.

    ಕಾರ್ಯಾಗಾರದ ನಿರ್ದೇಶಕ ಡಾ. ಜೀವನ್‌ರಾಮ್ ಸುಳ್ಯ ಮಾತನಾಡಿ, ಅಭಿನಯವು ವೈಯಕ್ತಿಕ ಪ್ರದರ್ಶನವಲ್ಲ, ಅದು ಸಮೂಹದೊಂದಿಗೆ ಬೆಳೆಯುವ ಕಲೆಯಾಗಿದೆ. ಕಲಾವಿದನು ಯಾವ ಪಾತ್ರವನ್ನು ನೀಡಿದರೂ ಅದನ್ನು ಸಮರ್ಥವಾಗಿ ನಿರ್ವಹಿಸುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು. ಈ ಕಾರ್ಯಾಗಾರದಲ್ಲಿ ಭಾಗವಹಿಸುವವರಿಗೆ ದೇಹಭಾಷೆ, ಧ್ವನಿ ನಿಯಂತ್ರಣ, ಭಾವಾಭಿವ್ಯಕ್ತಿ, ಪಾತ್ರ ವಿಶ್ಲೇಷಣೆ ಹಾಗೂ ತಂಡದೊಂದಿಗೆ ಕಾರ್ಯನಿರ್ವಹಿಸುವ ಕೌಶಲ್ಯಗಳನ್ನು ಪ್ರಾಯೋಗಿಕವಾಗಿ ಕಲಿಸಲಾಗುತ್ತಿದೆ ಎಂದರು.

    ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ನಾಟಕವೆಂದರೆ ಕೇವಲ ರಂಗಭೂಮಿಗೆ ಸೀಮಿತವಾದ ಕಲೆಯಲ್ಲ. ಬದುಕಿನಲ್ಲಿ ಪ್ರತಿಯೊಬ್ಬರೂ ತಮ್ಮ ಭಾವನೆ, ಆಲೋಚನೆ ಮತ್ತು ವ್ಯಕ್ತಿತ್ವವನ್ನು ಪರಿಣಾಮಕಾರಿಯಾಗಿ ಅಭಿವ್ಯಕ್ತಪಡಿಸುವುದನ್ನು ಕಲಿಯಬೇಕು. ಆ ನಿಟ್ಟಿನಲ್ಲಿ ಅಭಿನಯ ತರಬೇತಿ ಮಹತ್ವದ ಪಾತ್ರ ವಹಿಸುತ್ತದೆ ಎಂದರು. ಕಲೆಯನ್ನು ಕೇವಲ ನೋಡುವವರಾಗದೆ ಅದನ್ನು ಆಸ್ವಾದಿಸುವವರಾಗಬೇಕು. ರಂಗಭೂಮಿ ಭಾಷಾ ಪ್ರೌಢಿಮೆ, ಅಭಿವ್ಯಕ್ತಿ, ಆತ್ಮವಿಶ್ವಾಸ ಹಾಗೂ ಸಂವಹನ ಕೌಶಲ್ಯಗಳನ್ನು ವೃದ್ಧಿಸುತ್ತದೆ ಎಂದರು.

    ಎರಡು ದಿನಗಳ ಈ ಕಾರ್ಯಾಗಾರದಲ್ಲಿ ರಂಗಭೂಮಿ, ಸಿನಿಮಾ, ಧಾರಾವಾಹಿ ಹಾಗೂ ಕಿರುಚಿತ್ರಗಳಲ್ಲಿ ಅಭಿನಯಿಸಲು ಅಗತ್ಯವಾದ ಮೂಲಭೂತ ಮತ್ತು ಉನ್ನತ ಮಟ್ಟದ ಅಭಿನಯ ತಂತ್ರಗಳನ್ನು ಪ್ರಾಯೋಗಿಕ ಚಟುವಟಿಕೆಗಳ ಮೂಲಕ ತರಬೇತಿ ನೀಡಲಾಗುತ್ತಿದೆ.
     ಕರ‍್ಯಕ್ರಮದಲ್ಲಿ ಆಳ್ವಾಸ್ ಪದವಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ದಿವ್ಯಾ ಭಂಡಾರಿ ಇದ್ದರು. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    07/07/2026

    ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ

    06/07/2026

    ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪ.ಪೂ ಕಾಲೇಜು ವಿದ್ಯಾರ್ಥಿಗಳ ಸಾಧನೆ

    06/07/2026
    Leave A Reply Cancel Reply

    eleven + 10 =

    Call us

    Click Here

    Call us

    Call us

    Call us
    Highest Viewed Recently
    • ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ
    • ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ
    • ಜಾನುವಾರುಗಳ ಸಂಖ್ಯೆ ಗಣನೀಯ ಇಳಿಕೆ ಆಗಿರುವುದು ಆತಂಕ ಪಡುವ ವಿಚಾರ: ಶಾಸಕ ಗುರುರಾಜ್‌ ಗಂಟಿಹೊಳೆ
    • ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ
    • ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.