Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೆದುಳು ನಿಷ್ಕ್ರಿಯಗೊಂಡ 76ನೇ ವಯಸ್ಸಿನ ಗಂಗೊಳ್ಳಿಯ ಮಹಿಳೆಯ ಅಂಗಾಂಗ ದಾನ, ಸಾವಿನಲ್ಲೂ ಸಾರ್ಥಕತೆ
    ಉಡುಪಿ ಜಿಲ್ಲೆ

    ಮೆದುಳು ನಿಷ್ಕ್ರಿಯಗೊಂಡ 76ನೇ ವಯಸ್ಸಿನ ಗಂಗೊಳ್ಳಿಯ ಮಹಿಳೆಯ ಅಂಗಾಂಗ ದಾನ, ಸಾವಿನಲ್ಲೂ ಸಾರ್ಥಕತೆ

    Updated:07/07/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ,ಜು.07:
    ಅಂಗಾಂಗ ದಾನವು ಯುವಜನರಿಗೆ ಮಾತ್ರ ಸೀಮಿತ ಎಂಬುದು ಸಮಾಜದಲ್ಲಿರುವ ಸಾಮಾನ್ಯ ಕಲ್ಪನೆ. ಆದರೆ ಕರಾವಳಿ ಕರ್ನಾಟಕದ 76 ವರ್ಷದ ಮಹಿಳೆಯೊಬ್ಬರು ಆ ನಂಬಿಕೆಯನ್ನು ಸುಳ್ಳೆಂದು ಸಾಬೀತುಪಡಿಸಿ, ಜೀವ ಉಳಿಸಲು ವಯಸ್ಸು ಎಂದಿಗೂ ಅಡ್ಡಿಯಲ್ಲ ಎಂಬ ಸ್ಪೂರ್ತಿದಾಯಕ ಸಂದೇಶವನ್ನು ಸಾರಿದ್ದಾರೆ.

    Click Here

    Call us

    Click Here

    ಗಂಗೊಳ್ಳಿಯ ನಿವಾಸಿಯಾಗಿದ್ದ 76 ವರ್ಷದ ಜೆನ್ನಿ ಡಿ’ಸೋಜಾ ಎಂಬುವವರು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಿಧನರಾದ ಬಳಿಕ, ಅವರ ಕುಟುಂಬವು ಅತ್ಯಂತ ಮಾನವೀಯ ಹಾಗೂ ಮಾದರಿಯಾದ ನಿರ್ಧಾರ ಕೈಗೊಂಡು ಅವರ ಅಂಗಾಂಗಗಳನ್ನು ದಾನ ಮಾಡಲು ಒಪ್ಪಿಗೆ ನೀಡಿತು.
    ಹಠಾತ್ ತಲೆಸುತ್ತು ಕಾಣಿಸಿಕೊಂಡು ಕೆಲವೇ ಗಂಟೆಗಳಲ್ಲಿ ಅವರು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಅವರನ್ನು ತುರ್ತಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯಕೀಯ ಪರೀಕ್ಷೆಗಳಲ್ಲಿ ಅವರಿಗೆ ಮೆದುಳಿನಲ್ಲಿ ತೀವ್ರ ರಕ್ತಸ್ರಾವ ಆಗಿರುವುದು ದೃಢಪಟ್ಟಿತು. ವೈದ್ಯರ ತಂಡವು ಅವರನ್ನು ಉಳಿಸಲು ಎಲ್ಲ ರೀತಿಯ ಚಿಕಿತ್ಸಾ ಪ್ರಯತ್ನಗಳನ್ನು ನಡೆಸಿದರೂ ಫಲಕಾರಿಯಾಗಲಿಲ್ಲ. ನಿಗದಿತ ವೈದ್ಯಕೀಯ ಮಾರ್ಗಸೂಚಿಗಳು ಮತ್ತು ಪ್ರೋಟೋಕಾಲ್‌ಗಳಂತೆ ನಡೆಸಲಾದ ಎಲ್ಲ ಪರೀಕ್ಷೆಗಳ ಬಳಿಕ, ಅವರನ್ನು ಮೆದುಳು ನಿಷ್ಕ್ರಿಯಗೊಂಡ (Brain Dead) ರೋಗಿ ಎಂದು ಅಧಿಕೃತವಾಗಿ ಪ್ರಮಾಣೀಕರಿಸಲಾಯಿತು.

    ತಮ್ಮ ಆತ್ಮೀಯರನ್ನು ಕಳೆದುಕೊಂಡ ದುಃಖದ ನಡುವೆಯೂ, ಜೆನ್ನಿ ಡಿ’ಸೋಜಾ ಅವರ ಕುಟುಂಬವು ಅತ್ಯಂತ ಮಾನವೀಯ ಮತ್ತು ಸ್ಪೂರ್ತಿದಾಯಕ ನಿರ್ಧಾರ ಕೈಗೊಂಡಿತು. ವೈದ್ಯರ ಸಲಹೆಯ ಮೇರೆಗೆ ಅಂಗಾಂಗ ದಾನಕ್ಕೆ ಸಮ್ಮತಿ ಸೂಚಿಸಿದ ಕುಟುಂಬವು, ಜೀವ ಉಳಿಸಲು ವಯಸ್ಸು ಎಂದಿಗೂ ಅಡ್ಡಿಯಾಗುವುದಿಲ್ಲ ಎಂಬುದನ್ನು ಸಾಬೀತುಪಡಿಸಿತು. ಈ ಮಹತ್ತರ ನಿರ್ಧಾರದ ಫಲವಾಗಿ, ಅವರ ಯಕೃತ್ತು (ಲಿವರ್)ಅನ್ನು ಯಕೃತ್ತಿನ ವೈಫಲ್ಯದಿಂದ ಬಳಲುತ್ತಿದ್ದ ರೋಗಿಯೊಬ್ಬರಿಗೆ ಹೊಸ ಬದುಕಿನ ಆಶಾಕಿರಣವಾಯಿತು. ಅವರ ನೇತ್ರಗಳು ದೃಷ್ಟಿಹೀನರಿಗೆ ಬೆಳಕನ್ನು ನೀಡಲಿದ್ದು, ಚರ್ಮವು ಸುಟ್ಟ ಗಾಯಗಳಿಂದ ಬಳಲುತ್ತಿರುವ ರೋಗಿಗಳ ಚಿಕಿತ್ಸೆಗೆ ನೆರವಾಗಲಿದೆ.

    ಈ ಘಟನೆಯು ಅಂಗಾಂಗ ದಾನದ ಕುರಿತು ಸಮಾಜದಲ್ಲಿರುವ ಹಲವು ತಪ್ಪು ಕಲ್ಪನೆಗಳನ್ನು ದೂರ ಮಾಡುವಂತಿದೆ. ಅಂಗಾಂಗ ದಾನ ಮಾಡಲು ವಯಸ್ಸು ಅಡ್ಡಿಯಲ್ಲ ಎಂಬುದನ್ನು ಸಾಬೀತುಪಡಿಸಿದೆ. ಒಬ್ಬ ವ್ಯಕ್ತಿಯು ಎಷ್ಟು ವರ್ಷ ಬದುಕಿದ್ದಾರೆ ಎಂಬುದಕ್ಕಿಂತ, ತಮ್ಮ ಅಂತಿಮ ಕ್ಷಣದಲ್ಲೂ ಮತ್ತೊಬ್ಬರ ಬದುಕಿಗೆ ಆಶಾಕಿರಣವಾಗುವ ಮನಸ್ಸು ಹೊಂದಿರುವುದೇ ಹೆಚ್ಚು ಮಹತ್ವದ್ದಾಗಿದೆ. ಈ ಅಂಗಾಂಗ ದಾನ ಪ್ರಕ್ರಿಯೆಯು ಕರ್ನಾಟಕ ಸರ್ಕಾರದ ರಾಜ್ಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ ಜೀವಸಾರ್ಥಕತೆಯ ಸಹಯೋಗದೊಂದಿಗೆ ಯಶಸ್ವಿಯಾಗಿ ನೆರವೇರಿತು.

    ತಮ್ಮ ಅಪಾರ ದುಃಖದ ನಡುವೆಯೂ ಅಂಗಾಂಗ ದಾನಕ್ಕೆ ಸಮ್ಮತಿ ನೀಡಿ ಮಾನವೀಯತೆಯ ಅತ್ಯುನ್ನತ ಉದಾಹರಣೆಯನ್ನು ನೀಡಿದ ಅವರ ಕುಟುಂಬಕ್ಕೆ ಆಸ್ಪತ್ರೆಯು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದೆ. ಅಲ್ಲದೆ, ಈ ಅಂಗಾಂಗ ದಾನ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನೆರವೇರಿಸಲು ಶ್ರಮಿಸಿದ ವೈದ್ಯಕೀಯ ತಂಡ, ಅಂಗಾಂಗ ಕಸಿ ಸಂಯೋಜಕರು ಹಾಗೂ ಸಂಬಂಧಿತ ಸಿಬ್ಬಂದಿಯ ಸೇವೆಯನ್ನು ಆಸ್ಪತ್ರೆಯು ಪ್ರಶಂಸಿಸಿದೆ.

    Click here

    Click here

    Click here

    Call us

    Call us

    “ನಾವು ಸಾಮಾನ್ಯವಾಗಿ ಅಂಗಾಂಗ ದಾನವನ್ನು ಯುವಜನರಿಗೆ ಮೀಸಲಾದದ್ದು ಎಂದು ಭಾವಿಸುತ್ತೇವೆ. ಎಪ್ಪತ್ತಾರು ವರ್ಷದ ಪ್ರೀತಿಪಾತ್ರರನ್ನು ಹೊಂದಿರುವ ಈ ಕುಟುಂಬವು ನಮಗೆ ಬೇರೆಯದೇ ಪಾಠ ಕಲಿಸಿದೆ. ತಮ್ಮ ಜೀವನದ ಅತ್ಯಂತ ಕರಾಳ ಸಮಯದಲ್ಲಿ, ಅವರು ಇತರರಿಗೆ ಜೀವ ನೀಡಲು ಆಯ್ಕೆ ಮಾಡಿಕೊಂಡರು. ಕರುಣೆ ಅಥವಾ ದಾನಕ್ಕೆ ವಯಸ್ಸು ಅಡ್ಡಿಯಲ್ಲ. ಅವರ ಸ್ಮರಣೆಯು ಇನ್ನೂ ನೂರು ಕುಟುಂಬಗಳು ಹೌದು ಎಂದು ಹೇಳಲು ಕಾರಣವಾಗಲಿ” ಎಂದು ಹೇಳಿದರು. – ಡಾ. ಸುಧಾಕರ್ ಕಂಟಿಪುಡಿ, ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾ ಅಧಿಕಾರಿ

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

    07/07/2026

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026
    Leave A Reply Cancel Reply

    9 − four =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿಗೆ ಚಾಲನೆ
    • ಪಂಚವರ್ಣದ ವತಿಯಿಂದ ಆಸಾಡಿ ಒಡ್ರ್ ಕಾರ್ಯಕ್ರಮ ಪೋಸ್ಟರ್ ಬಿಡುಗಡೆ
    • ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಲಯ ಮಟ್ಟದ ಕರಾಟೆ ಮತ್ತು ಯೋಗಸ್ಪರ್ಧೆ
    • ಸಿಎಂಎ ಯುಎಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿ
    • ಕೋಟ ಅಮೃತೇಶ್ವರೀ ದೇಗುಲದಲ್ಲಿ ದುರ್ಗಾಹೋಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.