ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಅಕೌಂಟೆಂಟ್ಸ್ ನಡೆಸಿದ ಸಿ.ಎಂ.ಎ. ಯುಎಸ್ ಜೂನ್ 2026ರ ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಜಗದೀಶ್ ಮೊಗವೀರ ಹಾಗೂ ಜ್ಯೋತಿ ದಂಪತಿಯ ಪುತ್ರ ಸುಮಂತ್ ಅವರು ಸಿ.ಎಂ.ಎ. ಯುಎಸ್ ಪಾರ್ಟ್ 1 ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗಿ ಕಾಲೇಜಿಗೆ ಹೆಮ್ಮೆಯ ಕೀರ್ತಿಯನ್ನು ತಂದಿದ್ದಾರೆ.
ಸಿಎಂಎ ಯುಎಸ್ ಪರೀಕ್ಷೆಯಲ್ಲಿ ಸಾಧನೆ ಮಾಡಿರುವುದು ವಿದ್ಯಾರ್ಥಿಯ ಪರಿಶ್ರಮ, ಶಿಸ್ತು ಹಾಗೂ ನಿರಂತರ ಅಧ್ಯಯನದ ಪ್ರತೀಕವಾಗಿದೆ. ಅವರ ಈ ಸಾಧನೆಯು ಕಾಲೇಜಿನ ಶೈಕ್ಷಣಿಕ ಪರಂಪರೆಗೆ ಮತ್ತೊಂದು ಗರಿಮೆಯನ್ನು ತಂದುಕೊಟ್ಟಿದ್ದು, ವೃತ್ತಿಪರ ಶಿಕ್ಷಣ ಕ್ಷೇತ್ರದಲ್ಲಿ ಕಾಲೇಜಿನ ಸಾಧನೆಗೆ ಹೊಸ ಮೆರುಗು ನೀಡಿದೆ. ಅಲ್ಲದೆ, ವಾಣಿಜ್ಯ ವಿಭಾಗದ ಇತರ ವಿದ್ಯಾರ್ಥಿಗಳಿಗೆ ಇದು ಸ್ಫೂರ್ತಿದಾಯಕವಾಗಿದೆ.
ವಿದ್ಯಾರ್ಥಿಯ ಈ ಗಮನಾರ್ಹ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಅಧ್ಯಕ್ಷರು, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.











