ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಮೇ.2026ರ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಸಾತ್ವಿಕಾ ಶ್ರೀಯಾನ್, ಸಾನಿಕಾ, ವರುಣ್ ಆರ್. ಭಟ್, ಸ್ಪೂರ್ತಿ ಎಸ್., ಪ್ರೀತಲ್ ಬಿ. ದೇವಾಡಿಗ ಹಾಗೂ ನೇಹಾ ಶೆಟ್ಟಿ ಅವರು ಉತ್ತೀರ್ಣರಾಗುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳ ಈ ಗಮನಾರ್ಹ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ವಾಣಿಜ್ಯ ವಿಭಾಗದ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆಗಳನ್ನು ಸಲ್ಲಿಸಿ, ಅವರ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.











