ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಿಐಎಸ್‌ಸಿಇ ನಡೆಸುತ್ತಿರುವ ಗೇಮ್ಸ್ ಮತ್ತು ಸ್ಪೋರ್ಟ್ಸ್ 202-27ರ ಸ್ಪರ್ಧೆಗಳ ಅಂಗವಾಗಿ ಶಿವಮೊಗ್ಗದ ಸೈಂಟ್ ಜೋಸೆಪ್ಸ್ ಅಕ್ಷರಧಾಮ ಸಿಐಎಸ್‌ಸಿ ನೆಹರೂ ಕ್ರೀಡಾಂಗಣದಲ್ಲಿ ವಲಯಮಟ್ಟದ ಖೋ ಖೋ ಸ್ಪರ್ಧೆಗಳು ನಡೆದಿದ್ದವು. ಈ ಸ್ಪರ್ಧೆಗಳಲ್ಲಿ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು, 18 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

17 ವರ್ಷದೊಳಗಿನ ವಯೋಮಿತಿಯ ಹುಡುಗಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. 14 ವರ್ಷದೊಳಗಿನ ವಯೋಮಿತಿಯ ಹುಡುಗ ಮತ್ತು ಹುಡುಗಿಯರ ವಿಭಾಗದಲ್ಲಿ, 17 ವರ್ಷದೊಳಗಿನ ವಯೋಮಿತಿಯ ಹುಡುಗರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಹರ್ಷವನ್ನು ವ್ಯಕ್ತಪಡಿಸಿ ಮಾತನಾಡಿ, ನಮ್ಮ ಶಾಲೆಯ ದೈಹಿಕ ಶಿಕ್ಷಕರಿಂದ ತರಬೇತಿಗೊಂಡ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದು, ಅವರು ಹೀಗೆ ಉತ್ತಮವಾಗಿ ಸಾಧಿಸಿ ಶಾಲೆಗೂ ಹೆತ್ತವರಿಗೂ ಕೀರ್ತಿತರುವಂತವರಾಗಲಿ ಎಂದು ಹಾರೈಸಿದರು.
ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಆಡಳಿತಾಧಿಕಾರಿಗಳಾದ ವೀಣಾ ರಶ್ಮಿ ಎಮ್., ಉಪಪ್ರಾಂಶುಪಾಲರಾದ ರಾಮ ದೇವಾಡಿಗ, ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳೂ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
















