ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಲ್ಲೂರು ಫ್ಯಾಮಿಲಿ ಟ್ರಸ್ಟ್ ನಡೆಸುತ್ತಿರುವ ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ 2026- 27ನೇ ಶೈಕ್ಷಣಿಕ ವರ್ಷದ ಸಮವಸ್ತ್ರ ವಿತರಣಾ ಕಾರ್ಯಕ್ರಮ ಮತ್ತು ದ್ವಿತೀಯ ಪಾಲಕರ ಸಭೆ ಬುಧವಾರ ನಡೆಯಿತು. ಈ ಸಭೆಯಲ್ಲಿ ಮೊದಲು ವಿದ್ಯಾರ್ಥಿಗಳ ಪ್ರಗತಿಯ ಬಗ್ಗೆ ಪಾಲಕರೊಂದಿಗೆ ಚರ್ಚಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿರುವ ಮಣಿಪಾಲ ಹೌಸಿಂಗ್ ಫೈನಾನ್ಸ್ ಸಿಂಡಿಕೇಟ್ ಲಿಮಿಟೆಡ್ ಇದರ ನಿರ್ದೇಶಕರಾದ ರಾಜಾರಾಮ್ ಭಟ್ ಅವರು ನಮ್ಮ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ವಿತರಿಸಿ ಮಾತನಾಡಿ, ವಿಶೇಷ ಮಕ್ಕಳಿಗಾಗಿ ಸಂಸ್ಥೆಯ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಹಾಗೆಯೇ ಶಾಲಾ ಹಿತೈಷಿ ಹಾಗೂ ದಾನಿಗಳಾಗಿರುವ ಪ್ರಭು ಕೆನಡಿ ಪಿರೇರಾರವರು ಸಿಬ್ಬಂದಿ ವರ್ಗದವರ ಕಾರ್ಯವೈಖರಿಯನ್ನು ಶ್ಲಾಘಿಸುವುದರ ಜೊತೆಗೆ ಸಂಸ್ಥೆಯ ಕಾರ್ಯ ಚಟುವಟಿಕೆಗಳಿಗೆ ಸದಾ ಸಹಾಯ ಹಸ್ತ ನೀಡುವುದಾಗಿ ತಿಳಿಸಿದರು.
ಸಭಾ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರು ಹಾಗೂ ಇಂದಿನ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿರುವ ಶಾಂತಲಾ ಎನ್. ಹೆಗಡೆ ಅವರು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಪಾಲಕರ ಪಾತ್ರ ಬಹಳ ಮುಖ್ಯವಾದದ್ದು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್.ಟಿ, ಪ್ರಭಾತ್ ಶೆಟ್ಟಿ ನಿವೃತ್ತ ಅಸಿಸ್ಟೆಂಟ್ ಕಮಿಷನರ್ ಕಸ್ಟಮ್ಸ್ & ಜಿ.ಎಸ್.ಟಿ , ಹಿತೈಷಿಗಳಾದ ಮಾಧವ ಶ್ಯಾನುಭೋಗ್, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ವಿನಯ್ ಕುಮಾರ್, ಅತಿಥಿ ವರದಾಂಬ ಉಪಸ್ಥಿತರಿದ್ದರು.
ಸಹ ಶಿಕ್ಷಕಿ ಪ್ರತಿಮಾ ಕಾರ್ಯಕ್ರಮ ನಿರೂಪಿಸಿ, ಸಹ ಶಿಕ್ಷಕಿ ರೇಷ್ಮಾ ಸ್ವಾಗತಿಸಿ, ಸಹ ಶಿಕ್ಷಕಿ ದೀಪಾ ವಂದಿಸಿದರು.
















