Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದೇವರು, ದೇವಸ್ಥಾನ ಬಗ್ಗೆ ಅಭಿಮಾನವಿರಲಿ: ಸಂಯಮೀಂದ್ರ ತೀರ್ಥ ಶ್ರೀಪಾದರು
    ಊರ್ಮನೆ ಸಮಾಚಾರ

    ದೇವರು, ದೇವಸ್ಥಾನ ಬಗ್ಗೆ ಅಭಿಮಾನವಿರಲಿ: ಸಂಯಮೀಂದ್ರ ತೀರ್ಥ ಶ್ರೀಪಾದರು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಗಂಗೊಳ್ಳಿ: ನಮಗೆ ನಮ್ಮ ದೇಶದ ಬಗ್ಗೆ ಪ್ರೀತಿ ಅಭಿಮಾನ ಇದ್ದಂತೆ ನಮ್ಮ ದೇವರು, ದೇವಸ್ಥಾನ ಹಾಗೂ ಗುರುಪೀಠದ ಬಗ್ಗೆ ಅಭಿಮಾನ ಬೆಳೆಯಬೇಕು. ಇತರ ಸಮಾಜಗಳಿಗೆ ಹೋಲಿಸಿದರೆ ಗೌಡ ಸಾರಸ್ವತ ಸಮಾಜದವರಿಗೆ ಈ ಬಗ್ಗೆ ಹೆಚ್ಚಿನ ಅಭಿಮಾನ ಒಲವು ಇದೆ. ಇದನ್ನು ನಮ್ಮ ಯುವಪೀಳಿಗೆ ಮುಂದುವರಿಸಿಕೊಂಡು ಹೋಗುವಂತಾಗಬೇಕು ಎಂದು ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪಟ್ಟಶಿಷ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ನುಡಿದರು.

    Click Here

    Call us

    Click Here

    ಅವರು ಗಂಗೊಳ್ಳಿಯ ರಾಮ ಪೈ ಮಠ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಚಿತ್ತೈಸಿ ಆಶೀರ್ವಚನ ನೀಡಿ ಮಾತನಾಡಿದರು. ಕಲಿಯುಗದಲ್ಲಿ ದೇವರ ನಾಮಸ್ಮರಣೆಗೆ ಹೆಚ್ಚು ಮಹತ್ವವಿದೆ ಮತ್ತು ಶ್ರೀ ವಿಷ್ಣು ಸಹಸ್ರನಾಮ ಪಠಣ ಶ್ರೇಷ್ಠವಾದುದು. ಆದುದರಿಂದ ಪ್ರತಿನಿತ್ಯ ಶ್ರೀ ವಿಷ್ಣು ಸಹಸ್ರನಾಮ ಪಠಣ ಹಾಗೂ ಭಜನೆ ಸಂಕೀರ್ತನೆ ಮಾಡುತ್ತಾ ದೇವರ ಪ್ರೀತಿಗೆ ಪಾತ್ರರಾಗಲು ಪ್ರಯತ್ನಿಸಬೇಕು. ದೇವರನ್ನು ಭಕ್ತಿಯಿಂದ ಆರಾಧಿಸಿ ಪೂಜಿಸಿದರೆ ನಮ್ಮೆಲ್ಲ ಕಷ್ಟಗಳು ದೂರವಾಗಿ ಜೀವನದಲ್ಲಿ ಸುಖಶಾಂತಿ ನೆಮ್ಮದಿ ನೆಲೆಸುತ್ತದೆ. ಮೇಲ್‌ಗಂಗೊಳ್ಳಿ ಪೈ ಕುಟುಂಬದ ಈ ದೇವಸ್ಥಾನದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು ದೇವರ ದಯೆಯಿಂದ ಶ್ರೀಗಳ ಆಶೀರ್ವಾದದಿಂದ ಯಶಸ್ವಿಯಾಗಿ ನಡೆಯಲಿ ಎಂದು ಅವರು ಆಶೀರ್ವದಿಸಿದರು.

    ಮೇಲ್‌ಗಂಗೊಳ್ಳಿ ಪೈ ಕುಟುಂಬದ ಎಂ.ಜಿ.ಮಾಧವ ಪೈ ಮತ್ತು ಎಂ.ಮಧುಕರ ಪೈ ಅವರು ಸ್ವಾಮೀಜಿಯವರ ಪಾದಪೂಜೆ ನೆರವೇರಿಸಿದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಜಿ.ಅಜಿತ್ ಭಟ್, ವೇದಮೂರ್ತಿ ರಾಧಾಕೃಷ್ಣ ಭಟ್, ಎಂ.ಸುಬ್ರಾಯ ಪೈ, ಎಂ.ಮಾಧವರಾಯ ಪೈ, ಎಂ.ವಿನೋದ ಪೈ, ಎಂ.ರಾಮನಾಥ ಪೈ ಹಾಗೂ ಮೇಲ್‌ಗಂಗೊಳ್ಳಿ ಪೈ ಕುಟುಂಬಸ್ಥರು, ಪುರೋಹಿತರು, ಜಿಎಸ್‌ಬಿ ಸಮಾಜದ ವಿವಿಧ ದೇವಸ್ಥಾನಗಳ ಆಡಳಿತ ಮಂಡಳಿ ಸದಸ್ಯರು, ಊರಿನ ಹತ್ತು ಸಮಸ್ತರು ಹಾಗೂ ಜಿಎಸ್‌ಬಿ ಸಮಾಜ ಬಾಂಧವರು ಉಪಸ್ಥಿತರಿದ್ದರು. ದೇವಳಕ್ಕೆ ಆಗಮಿಸಿ ಶ್ರೀಗಳನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು.
    ಎಂ.ಮುಕುಂದ ಪೈ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    twelve + fourteen =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.