ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯ ಕುಂದಾಪುರ ವಿಧಾನಸಭಾ ಕ್ಷೇತ್ರದ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕೆದೂರು ಸದಾನಂದ ಶೆಟ್ಟಿ ಅವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬಿ.,ಕೆ. ಹರಿಪ್ರಸಾದ್ ಆದೇಶಿದ್ದಾರೆ.
ಕೆದೂರು ಸದಾನಂದ ಶೆಟ್ಟಿ ಅವರು ತಕ್ಷಣ ಕುಂದಾಪುರ ಬ್ಲಾಕ್ ಕಾಂಗ್ರೆಸಿನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖವಾಗಬೇಕೆಂದು ರಾಜ್ಯಧ್ಯಕ್ಷರು ಸೂಚಿಸಿದ್ದಾರೆ.
ಕುಂದಾಪುರ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಕೆದೂರು ಸದಾನಂದ ಶೆಟ್ಟಿ ಅವರು, ಕುಂದಾಪುರ ತಾಲೂಕು ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಮಂಡಲ ಪಂಚಾಯತ್‌ನಲ್ಲೂ ಕಾರ್ಯ ನಿರ್ವಹಿಸಿದ್ದರು. ಪಂಚಾಯತ್ ರಾಜ್ ವಿಷಯದಲ್ಲಿ ಅಧಿಕಾರಯುತವಾಗಿ ತಾಲೂಕು ಪಂಚಾಯತ್ ಸಭೆಗಳಲ್ಲಿ ಮಾತನಾಡುವ ಮೂಲಕ ಗಮನ ಸಳೆದಿದ್ದರು. ಪ್ರಸ್ತುತ ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆದೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದ ವಿವಿಧ ಮಹತ್ವದ ಜವಬ್ದಾರಿಗಳನ್ನು ನಿಭಾಯಿಸುತ್ತಾ ಬಂದಿದ್ದಾರೆ.
















