ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಮಿಡ್‌ಟೌನ್ ಇದರ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಚಿನ್ ಕುಮಾರ್ ಶೆಟ್ಟಿ ಹುಂಚನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಕಾರ್ಯದರ್ಶಿಯಾಗಿ ಪ್ರವೀಣ್ ಶೆಟ್ಟಿ ಅಂಪಾರು ಆಯ್ಕೆಯಾಗಿದ್ದು, ನೂತನ ಕೋಶಾಧಿಕಾರಿಯಾಗಿ ಪ್ರಕಾಶ್ ಶೆಟ್ಟಿ ಶಾನಾಡಿ ಆಯ್ಕೆಗೊಂಡಿದ್ದಾರೆ.
ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಕೋಟೇಶ್ವರ ಅಂಕದಕಟ್ಟೆಯ ಸಹನಾ ಕನ್ವೆನ್ಸನ್ ಹಾಲ್‌ನಲ್ಲಿ ಜು. 11ರಂದು ಸಂಜೆ 7.00ರಿಂದ ಜರುಗಲಿದ್ದು, ವಲಯ-1ರ ಅಸಿಸ್ಟೆಂಟ್ ಗವರ್ನರ್ ಪಿಹೆಚ್‌ಎಫ್ ಜೆ. ಶ್ರೀನಾಥ್ ರಾವ್ ಪದಗ್ರಹಣ ನೆರವೇರಿಸಲಿದ್ದಾರೆ.
ಸಮಾರಂಭದ ಮುಖ್ಯ ಅತಿಥಿಯಾಗಿ ಕಾರ್ಕಳದ ಅಜೆಕಾರು ಪದ್ಮಗೋಪಾಲ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ಉಪಸ್ಥಿತರಿರಲಿದ್ದಾರೆ ಎಂದು ರೋಟರಿ ಕ್ಲಬ್‌ನ ಸುದ್ದಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.











