ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಶನಿವಾರ ಭೇಟಿ ನೀಡಿ, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಶುಕ್ರವಾರ ರಾತ್ರಿಯೇ ಆಗಮಿಸಿದ್ದ ಅವರು ಶನಿವಾರ ಬೆಳಗಿನ ಜಾವವೇ ಗಣಹೋಮದಲ್ಲಿ ಭಾಗಿಯಾದರು. ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿರುವುದು ವಿಶೇಷವಾಗಿದೆ.
ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ Z-ಪ್ಲಸ್ ಭದ್ರತೆ ಕಲ್ಪಿಸಲಾಗಿತ್ತು, ಕ್ಷೇತ್ರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಯಾವುದೇ ರೀತಿಯಲ್ಲಿ ಭಕ್ತರಿಗೆ ಅಡ್ಡಿಪಡಿಸಲಾಗಿಲ್ಲ.
ಪೂಜೆ ಬಳಿಕ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಮುಖ್ಯಮಂತ್ರಿ ಸತೀಶನ್ ಅವರಿಗೆ, ಸಮ್ಮಾನಿಸಿ ಗೌರವ ಸಲ್ಲಿಸಲಾಯಿತು.
















