ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯ ಹೆಬ್ರಿಯ ಚಾರಾದಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 2027-28 ನೇ ಶೈಕ್ಷಣಿಕ ಸಾಲಿಗೆ 6 ನೇ ತರಗತಿಯ ಪ್ರವೇಶಾತಿಗಾಗಿ, 5 ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಹಾಗೂ ಸಮೀಪದ ಜವಾಹರ್ ನವೋದಯ ವಿದ್ಯಾಲಯಕ್ಕೆ ಭೇಟಿ ನೀಡಿಯೂ ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತ ವಿದ್ಯಾರ್ಥಿಗಳು ತಾವು ಓದುತ್ತಿರುವ ಶಾಲೆಯ ಮುಖ್ಯೋಪಾಧ್ಯಾಯರಿಂದ ಅವಶ್ಯಕ ದಾಖಲೆಗಳನ್ನು ಪಡೆದು ಜುಲೈ 31 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ನವೆಂಬರ್ 28ರಂದು ಪ್ರವೇಶ ಪರೀಕ್ಷೆಯು ನಡೆಯಲಿದೆ.
ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://navodaya.gov.in ಅಥವಾ ಕಚೇರಿಯ ದೂ.ಸಂಖ್ಯೆ: 08253-251260 ಅನ್ನು ಸಂಪರ್ಕಿಸಬಹುದಾಗಿದೆ ಎಂದು ವಿದ್ಯಾಲಯದ ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.











