Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಸ್‌ಐಆರ್ ಕುರಿತು ಡಿಸಿ ಜೊತೆ ಸಂವಾದ: ಸನ್ಮತಿ ಪತ್ರಿಕೆಯ ಸಂಚಿಕೆ ಬಿಡುಗಡೆ
    ಉಡುಪಿ ಜಿಲ್ಲೆ

    ಎಸ್‌ಐಆರ್ ಕುರಿತು ಡಿಸಿ ಜೊತೆ ಸಂವಾದ: ಸನ್ಮತಿ ಪತ್ರಿಕೆಯ ಸಂಚಿಕೆ ಬಿಡುಗಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಗೆ ಸಂಬಂಧಿಸಿ ಆ.5ರಂದು ಕರಡು ಪಟ್ಟಿಯನ್ನು ಪ್ರಕಟಿಸಲಾಗುವುದು. ಇದರಲ್ಲಿ ಹೆಸರು ಬಿಟ್ಟು ಹೋಗಿದ್ದರೆ ಮಾತ್ರ ಸಂಬಂಧಪಟ್ಟ 11 ದಾಖಲೆಗಳಲ್ಲಿ ಒಂದನ್ನು ಸಲ್ಲಿಸಬೇಕೆ ಹೊರತು ಹೆಸರು ಇದ್ದವರು ಯಾವುದೇ ದಾಖಲೆಗಳನ್ನು ಸಲ್ಲಿಸಬೇಕಾದ ಅಗತ್ಯ ಇರುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.

    Click Here

    Call us

    Click Here

    ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಪತ್ರಿಕಾ ಭವನದಲ್ಲಿ ಶುಕ್ರವಾರ ಆಯೋಜಿಸಲಾದ ಎಸ್‌ಐಆರ್ (ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ) ಕುರಿತು ತಿಂಗಳ ಅಂಗಳ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ಮನೆಮನೆಗೆ ಭೇಟಿ ನೀಡಿ ಫಾರ್ಮ್ ನೀಡಲು ಮತ್ತು ಸಂಗ್ರಹಿಸುವಂತೆ ಬಿಎಲ್‌ಓಗಳಿಗೆ ಹಲವು ಬಾರಿ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ನಿಧನಗತಿಯಲ್ಲಿ ಕಾರ್ಯನಿರ್ವಹಿಸಿದ ಬಿಎಲ್‌ಓಗಳಿಗೆ ಈಗಾಗಲೇ ನೋಟೀಸ್ ಜಾರಿ ಮಾಡಲಾಗಿದೆ. ಸರಿಯಾಗಿ ಕರ್ತವ್ಯ ನಿರ್ವಹಿಸದ ಬಿಎಲ್‌ಓಗಳ ಬಗ್ಗೆ ಗಮನಕ್ಕೆ ತಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

    ಫಾರ್ಮ್ ಸಲ್ಲಿಸಿಯೂ ಕರಡು ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದರೆ ಅವರು ತಮ್ಮಲ್ಲಿರುವ ಇನ್ನೊಂದು ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಸರಿನಲ್ಲಿ ವ್ಯತ್ಯಾಸ ಇದ್ದವರಿಗೆ ನಾವೇ ನೋಟೀಸ್ ನೀಡುತ್ತೇವೆ. ಅವರು ತಮ್ಮ ಪ್ರಸ್ತುತ ಹೆಸರು ಬದಲಾಗಿರುವುದಕ್ಕೆ ಸಂಬಂಧಿಸಿ ದಾಖಲೆಯನ್ನು ಸಲ್ಲಿಸಬೇಕು. ಕರಡು ಪಟ್ಟಿಯಲ್ಲಿ ಇದ್ದವರ ಹೆಸರು ಯಾವುದೇ ಕಾರಣಕ್ಕೂ ಅಂತಿಮ ಪಟ್ಟಿಯಲ್ಲಿ ಬಿಟ್ಟು ಹೋಗುವುದಿಲ್ಲ. ಅ.7ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ಹೇಳಿದರು.

    ಫಾರ್ಮ್‌ಗೆ ಸಂಬಂಧಿಸಿ ಗೊಂದಲದಲ್ಲಿ ನಿವಾರಿಸಲು ಹಾಗೂ ಸಹಾಯ ಮಾಡಲು ತಾಲೂಕು ಮಟ್ಟದಲ್ಲಿ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಬೂತ್‌ನಲ್ಲಿಯೇ ಸ್ವಯಂ ಸೇವಕರನ್ನು ನೇಮಿಸಲಾಗಿದೆ. ಇವರು ರವಿವಾರ ಕೂಡ ಕಾರ್ಯ ನಿರ್ವಹಿಸುತ್ತಾರೆ. ಬಿಎಲ್‌ಓಗಳ ಬಗ್ಗೆ ದೂರುಗಳಿದ್ದರೆ ಸೆಕ್ಟರ್ ಅಧಿಕಾರಿಗಳು ಅಥವಾ ತಹಶೀಲ್ದಾರ್‌ಗೆ ದೂರವಾಣಿ ಕರೆ ಮಾಡಿ ಕೂಡ ತಿಳಿಸಬಹುದು ಎಂದು ಅವರು ಹೇಳಿದರು.

    Click here

    Click here

    Click here

    Call us

    Call us

    ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಂಘದ ‘ಸನ್ಮತಿ’ಪತ್ರಿಕೆಯ ಜೂನ್ ತಿಂಗಳ ಸಂಚಿಕೆ ಬಿಡುಗಡೆಗೊಳಿಸಿದರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ವಹಿಸಿದ್ದರು. ವಾರ್ತಾಧಿಕಾರಿ ಮಂಜುನಾಥ್, ಸಂಘದ ಜಿಲ್ಲಾ ಕೋಶಾಧಿಕಾರಿ ಹರೀಶ್ ಕುಂದರ್, ಪತ್ರಿಕಾ ಭವನ ಸಮಿತಿಯ ಸಹಸಂಚಾಲಕ ಗಣೇಶ್ ಕಲ್ಯಾಣಪುರ ಉಪಸ್ಥಿತರಿದ್ದರು.

    ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ರಾಜ್ಯ ಸಮಿತಿ ಸದಸ್ಯ ಆಸ್ಟ್ರೋ ಮೋಹನ್ ವಂದಿಸಿದರು. ಪತ್ರಕರ್ತ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜವಾಹರ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

    11/07/2026

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    08/07/2026

    ಉಡುಪಿ: ಜುಲೈ 10ರಂದು ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ

    08/07/2026
    Leave A Reply Cancel Reply

    14 − 9 =

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಐಆರ್ ಕುರಿತು ಡಿಸಿ ಜೊತೆ ಸಂವಾದ: ಸನ್ಮತಿ ಪತ್ರಿಕೆಯ ಸಂಚಿಕೆ ಬಿಡುಗಡೆ
    • ಜವಾಹರ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ವಿಶೇಷಚೇತನರಿಗೆ ಸ್ವಾಭಿಮಾನಿ ಬದುಕು ಕಲ್ಪಿಸಬೇಕು: ಜಯಕರ ಶೆಟ್ಟಿ
    • ತಂತ್ರವೇ ಯಶಸ್ಸಿನ ಮೂಲ; ಕೇವಲ ಕಲ್ಪನೆಗಳಿಂದ ಉದ್ಯಮ ಯಶಸ್ವಿಯಾಗುವುದಿಲ್ಲ: ವೇಣು ಶರ್ಮಾ
    • ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.