ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಉತ್ತಮ ಕೆಲಸಗಳನ್ನು ಪ್ರೋತ್ಸಾಹಿಸುವ ಮನೋಭಾವ ನಮ್ಮಲ್ಲಿ ಹೆಚ್ಚಾಗಬೇಕು. ಆ ಮೂಲಕ ಒಂದು ಸಮಾಜದ ಅಭಿವೃದ್ಧಿಯಲ್ಲಿ ನಮ್ಮನ್ನು ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಗಂಗೊಳ್ಳಿಯ ಬಿಲ್ಲವರ ಹಿತ ರಕ್ಷಣಾ ವೇದಿಕೆಯ ಅಧ್ಯಕ್ಷ ಜಿ. ಗೋಪಾಲ ಪೂಜಾರಿ ಹೇಳಿದರು.
ಅವರು ಇಲ್ಲಿನ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಬಿಲ್ಲವರ ಹಿತರಕ್ಷಣಾ ವೇದಿಕೆಯ ಆರನೇ ವರ್ಷದ ಬಿಲ್ಲವ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು

ಶ್ರೀ ಸೀತಾಳಿ ನವದುರ್ಗೆ ದೇವಸ್ಥಾನದ ಪಾತ್ರಿ ರಘುನಾಥ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ಉಪಾಧ್ಯಕ್ಷೆ ಮಮತ ಪೂಜಾರಿ ಶುಭಸಂಶನೆ ಗೈದರು. ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ ನಿವೃತ್ತ ಮ್ಯಾನೇಜರ್ ಮುತ್ತ ಕುಂದರ್ ಹಾಗೂ ಮತ್ಸ್ಯ ಉದ್ಯಮಿಗಳಾದ ಲಕ್ಷ್ಮಣ ಬಿಲ್ಲವ ಮತ್ತು ಸಂಜೀವ ಬಿಲ್ಲವ ಉಪಸ್ಥಿತರಿದ್ದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ 70ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. ಸಾಕ್ಷಿ ಮತ್ತು ರಿಶ್ವಿತಾ ಪ್ರಾರ್ಥಿಸಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.
















