Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟದಲ್ಲಿ ಮೊಗವೀರ ಸಂಘಟನೆಯ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
    ಊರ್ಮನೆ ಸಮಾಚಾರ

    ಕೋಟದಲ್ಲಿ ಮೊಗವೀರ ಸಂಘಟನೆಯ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

    Updated:13/07/2026No Comments
    Facebook Twitter Pinterest LinkedIn WhatsApp Reddit Tumblr Email
    ??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ರಕ್ತಕ್ಕೆ ಪರ್ಯಾಯ ವ್ಯವಸ್ಥೆಗಳಿಲ್ಲ. ಈ ದಿಸೆಯಲ್ಲಿ ರಕ್ತದ ಅವಶ್ಯಕತೆ ಅರಿತು ರಕ್ತದಾನ ಮಾಡಬೇಕು. ಇದರಿಂದ ಒಂದಿಷ್ಟು ಜೀವ ಉಳಿಸಲು ಸಾಧ್ಯವಿದೆ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಭಾನುವಾರ ಮಾಂಗಲ್ಯ ಮಂದಿರ ಕೋಟದಲ್ಲಿ ಮೊಗವೀರ ಯುವ ಸಂಘಟನೆ ಕೋಟ ಘಟಕ ಹಾಗೂ ಮಹಿಳಾ ಸಂಘಟನೆ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ, ಗೀತಾನಂದ ಫೌಂಡೇಶನ್ ಮಣೂರು ಪಡುಕರೆ, ರಕ್ತನಿಧಿ ಕೆ.ಎಂ.ಸಿ. ಆಸ್ಪತ್ರೆ ಮಣಿಪಾಲ ಮತ್ತು ಜಿಲ್ಲಾಡಳಿತ ಉಡುಪಿ ಇವರುಗಳ ಜಂಟಿ ಆಶ್ರಯದಲ್ಲಿ ವಿವಿಧ ಸ್ಥಳೀಯ ಸಂಘಟನೆಗಳಾದ ಬಾರಿಕೆರೆ ಯುವಕ ಮಂಡಲ ಕೋಟ, ಅರಮನೆ ವಿಜಯ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಪಡುಕರೆ, ಬಾಳೆಬೆಟ್ಟು ಫ್ರೆಂಡ್ಸ್, ಹರ್ತಟ್ಟು ಯುವಕ ಮಂಡಲ ಕೋಟ ಹಾಗೂ ವಿನಾಯಕ ಫ್ರೆಂಡ್ಸ್ ಕೋಟತಟ್ಟು ಪಡುಕರೆ ಇವರುಗಳ ಸಹಯೋಗದೊಂದಿಗೆ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

    ಮೊಗವೀರ ಯುವ ಸಂಘಟನೆ ರಕ್ತದಾನದಂತ ಸಾಮಾಜಿಕ ಕಾರ್ಯಕ್ರಮಗಳಿಗೆ ವಿಶೇಷ ಮನ್ನಣೆ ಮಾದರಿಯಾಗಿದೆ. ನಾಡೋಜ ಡಾ. ಜಿ. ಶಂಕರ್ ಇವರ ಮಾರ್ಗದರ್ಶನದಲ್ಲಿ ಮೊಗವೀರ ಯುವ ಸಂಘಟನೆ ಬಲಿಷ್ಠವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

    ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ರವೀಶ್ ಶ್ರೀಯಾನ್ ಮಾತನಾಡಿ, ಆರೋಗ್ಯವಂತ ಸಮಾಜಕಟ್ಟಲು ರಕ್ತದಾನದಂತಹ ಕಾರ್ಯಕ್ರಮಗಳು ಮಹತ್ವ ಪಡೆದುಕೊಂಡಿದೆ. ಉಡುಪಿ ಜಿಲ್ಲೆ ರಕ್ತದಾನಿಗಳ ಜಿಲ್ಲೆ ಎಂಬ ಮನ್ನಣೆ ಪಡೆದುಕೊಂಡಿದ್ದು ಡಾ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಮೂಲಕ ಮೊಗವೀರ ಸಂಘಟನೆ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿದೆ ಎಂದರು.

    ರಕ್ತದಾನ ಕುರಿತಾಗಿ ಕೆ.ಎಂ.ಸಿ ರಕ್ತನಿಧಿ ವಿಭಾಗದ ಡಾ. ವಿಶ್ವೇಶ ಸಮಗ್ರ ಮಾಹಿತಿ ನೀಡಿದರು. ಇದೇ ವೇಳೆ ರಕ್ತದಾನಗೈದ ರಕ್ತದಾನಿಗಳನ್ನು ಗುರುತಿಸಿ ಗೌರವಿಸಲಾಯಿತು. ಮೊಗವೀರ ಯುವ ಸಂಘ ಕೋಟ ಘಟಕದ ಅಧ್ಯಕ್ಷ ರಂಜಿತ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

    Click here

    Click here

    Click here

    Call us

    Call us

    ಮುಖ್ಯ ಅಭ್ಯಾಗತರಾಗಿ ಮಾಜಿ ಜಿಲ್ಲಾಧ್ಯಕ್ಷ ಶಿವರಾಮ್ ಕೆ.ಎಂ, ಕೋಟ ಘಟಕದ ಮಾಜಿ ಅಧ್ಯಕ್ಷ ರಮೇಶ್ ವಿ. ಕುಂದರ್, ಬಾರಿಕೆರೆ ಯುವಕ ಮಂಡಲದ ಮಾಜಿ ಅಧ್ಯಕ್ಷ ಸತೀಶ್ ಕುಂದರ್, ಬಾಳೆಬೆಟ್ಟು ಫ್ರೆಂಡ್ಸ್ ಅಧ್ಯಕ್ಷ ರತ್ಮಾಕರ ಪೂಜಾರಿ,ವಿನಾಯಕ ಫ್ರೆಂಡ್ಸ್ ಅಧ್ಯಕ್ಷ ಪ್ರಶಾಂತ್ ಮಟಪಾಡಿ, ಮೊಗವೀರ ಮಹಿಳಾ ಘಟಕದ ಅಧ್ಯಕ್ಷೆ ಲಲಿತಾ ಭಾಸ್ಕರ್, ಕೆ.ಎಂಸಿ ರಕ್ತನಿಧಿ ವಿಭಾಗದ ಡಾ. ಸಹನಾ, ಶೇಖರ್ ತೋಳಾರ್ ಮತ್ತಿತರರು ಉಪಸ್ಥಿತರಿದ್ದರು.

    ಘಟಕದ ರವಿಕಿರಣ್ ಕೋಟ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಂಡ್ಸೆ ನಿರಾಮಯ ಸೊಸೈಟಿ: ಅಬ್ದುಲ್ ನಜೀರ್ ಸಾಬ್ ಸಂಸ್ಥೆಯ ಬೋಧಕರಿಂದ ಅಧ್ಯಯನ

    13/07/2026

    ಶ್ರೀ ಮೂಕಾಂಬಿಕಾ ಪ್ರೌಢಶಾಲೆ ಮಾವಿನಕಟ್ಟೆ: ವಿದ್ಯಾರ್ಥಿ ಸರಕಾರದ ಉದ್ಘಾಟನೆ

    13/07/2026

    ಕುಂದಾಪುರ: ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ – ಐವರು ಬಂಧನ 

    13/07/2026
    Leave A Reply Cancel Reply

    nineteen − 12 =

    Call us

    Click Here

    Call us

    Call us

    Call us
    Highest Viewed Recently
    • ವಂಡ್ಸೆ ನಿರಾಮಯ ಸೊಸೈಟಿ: ಅಬ್ದುಲ್ ನಜೀರ್ ಸಾಬ್ ಸಂಸ್ಥೆಯ ಬೋಧಕರಿಂದ ಅಧ್ಯಯನ
    • ಕೋಟದಲ್ಲಿ ಮೊಗವೀರ ಸಂಘಟನೆಯ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
    • ಶ್ರೀ ಮೂಕಾಂಬಿಕಾ ಪ್ರೌಢಶಾಲೆ ಮಾವಿನಕಟ್ಟೆ: ವಿದ್ಯಾರ್ಥಿ ಸರಕಾರದ ಉದ್ಘಾಟನೆ
    • ಕುಂದಾಪುರ: ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ – ಐವರು ಬಂಧನ 
    • ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆಯ ಬಿಲ್ಲವ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.