Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ ಹಾಗೂ ಜಾಥಾ
    ಊರ್ಮನೆ ಸಮಾಚಾರ

    ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ ಹಾಗೂ ಜಾಥಾ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬ್ರಹ್ಮಾವರ:
    ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆ ಬ್ರಹ್ಮಾವರದಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ ಹಾಗೂ ಜಾಗೃತಿ ಜಾಥಾ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮುಕ್ತಾ ಬಾಯಿ ಮಾತನಾಡಿ, ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಅರಿವು ಮೂಡಿಸಿ, ಮಾದಕ ವಸ್ತು ಮುಕ್ತ ಸಮಾಜ ನಿರ್ಮಿಸುವುದು ಇಂದಿನ ಅಗತ್ಯವಾಗಿದೆ. ಪ್ರತಿಯೊಬ್ಬರೂ ಸ್ವತಃ ಜಾಗೃತರಾಗುವುದರ ಜೊತೆಗೆ ತಮ್ಮ ಸುತ್ತಮುತ್ತಲಿನವರಲ್ಲೂ ಜಾಗೃತಿ ಮೂಡಿಸುವ ಜವಾಬ್ದಾರಿಯನ್ನು ಹೊತ್ತು, ಉತ್ತಮ ನಾಗರಿಕ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

     ಇನ್ನೋರ್ವ ಮುಖ್ಯ ಅತಿಥಿಯಾಗಿದ್ದ ಲೀಡ್ ಡಿಸ್ಟ್ರಿಕ್ಟ್ ಮ್ಯಾನೇಜರ್ ಹರೀಶ್ ಜಿ. ಮಾತನಾಡಿ, ದೇಶದ ಅಭಿವೃದ್ಧಿಗೆ ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವುದು ಅತ್ಯಗತ್ಯವಾಗಿದೆ. ಕಾನೂನು ಜಾರಿಯಲ್ಲಿದ್ದರೂ ಸಮಾಜ ವಿರೋಧಿ ಶಕ್ತಿಗಳು ಯುವಜನರನ್ನು ತಪ್ಪು ದಾರಿಗೆಳೆಯುತ್ತಿರುವುದು ಆತಂಕಕಾರಿ. ಕಾನೂನುಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸಂಬಂಧಪಟ್ಟ ಇಲಾಖೆಗೆ ತಕ್ಷಣ ಮಾಹಿತಿ ನೀಡಿ, ಜಾಗೃತಿ ಮೂಡಿಸುವ ಕಾರ್ಯದಲ್ಲಿ ಎಲ್ಲರೂ ಭಾಗಿಯಾಗಬೇಕು ಎಂದು ಹೇಳಿದರು.

     ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಡಾ. ಬೊಮ್ಮಯ್ಯ ಎಂ. ಮಾತನಾಡಿ, ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಯುವಜನರಲ್ಲಿ ಅರಿವು ಮೂಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಉತ್ತಮ ಚಿಂತನೆ ಹಾಗೂ ಉತ್ತಮ ಜೀವನಶೈಲಿಯ ಮೂಲಕ ವ್ಯಕ್ತಿ ಮತ್ತು ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು ಎಂದು ಶಿಬಿರಾರ್ಥಿಗಳಿಗೆ ಕರೆ ನೀಡಿದರು.

    ಈ ಸಂದರ್ಭದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯ ಪ್ರೊಬೇಷನರಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಶ್ರಿತ ಶೆಟ್ಟಿ ಅವರು ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ಬಳಿಕ ಗಣ್ಯರು, ಸಿಬ್ಬಂದಿ ಹಾಗೂ ಸಂಸ್ಥೆಯ ಶಿಬಿರಾರ್ಥಿಗಳು ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಿಂದ ಕೃಷಿ ವಿಜ್ಞಾನ ಕೇಂದ್ರದವರೆಗೆ ಮಾದಕ ದ್ರವ್ಯ ವಿರೋಧಿ ಜಾಗೃತಿ ಜಾಥಾ ನಡೆಸಿದರು.

    Click here

    Click here

    Click here

    Call us

    Call us

     ಕಾರ್ಯಕ್ರಮವನ್ನು ಉಪನ್ಯಾಸಕಿ ಚೈತ್ರ ಕೆ. ನಿರೂಪಿಸಿ, ಕಚೇರಿ ಸಹಾಯಕ ಶಾಂತಪ್ಪ ಸ್ವಾಗತಿಸಿ, ಹಿರಿಯ ಕಚೇರಿ ಸಹಾಯಕ ರವಿ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಂದಿಗಳ ಸರಣಿ ಸಾವು: ವಿವಿಧ ಇಲಾಖೆಗಳೊಂದಿಗೆ ತುರ್ತು ಸಭೆ ನಡೆಸಿದ ಶಾಸಕ ಗಂಟಿಹೊಳೆ

    13/07/2026

    ವಂಡ್ಸೆ ನಿರಾಮಯ ಸೊಸೈಟಿ: ಅಬ್ದುಲ್ ನಜೀರ್ ಸಾಬ್ ಸಂಸ್ಥೆಯ ಬೋಧಕರಿಂದ ಅಧ್ಯಯನ

    13/07/2026

    ಕೋಟದಲ್ಲಿ ಮೊಗವೀರ ಸಂಘಟನೆಯ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

    13/07/2026
    Leave A Reply Cancel Reply

    five × two =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ ಹಾಗೂ ಜಾಥಾ
    • ಹಂದಿಗಳ ಸರಣಿ ಸಾವು: ವಿವಿಧ ಇಲಾಖೆಗಳೊಂದಿಗೆ ತುರ್ತು ಸಭೆ ನಡೆಸಿದ ಶಾಸಕ ಗಂಟಿಹೊಳೆ
    • ವಂಡ್ಸೆ ನಿರಾಮಯ ಸೊಸೈಟಿ: ಅಬ್ದುಲ್ ನಜೀರ್ ಸಾಬ್ ಸಂಸ್ಥೆಯ ಬೋಧಕರಿಂದ ಅಧ್ಯಯನ
    • ಕೋಟದಲ್ಲಿ ಮೊಗವೀರ ಸಂಘಟನೆಯ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
    • ಶ್ರೀ ಮೂಕಾಂಬಿಕಾ ಪ್ರೌಢಶಾಲೆ ಮಾವಿನಕಟ್ಟೆ: ವಿದ್ಯಾರ್ಥಿ ಸರಕಾರದ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.