Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಆಯ್ಕೆ  – ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಆಯ್ಕೆ  – ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

    Updated:14/07/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳು ಒಳಗೊಂಡಂತೆ) 2026-27ನೇ ಶೈಕ್ಷಣಿಕ ಸಾಲಿಗೆ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಅತಿಥಿ ಗ್ರಂಥಪಾಲಕರು ಹಾಗೂ ಅತಿಥಿ ದೈಹಿಕ ಶಿಕ್ಷಣ ನಿರ್ದೇಶಕರು ಒಳಗೊಂಡಂತೆ) ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಅರ್ಹ ಅಭ್ಯರ್ಥಿಗಳು ನಿಗದಿತ ವೇಳಾಪಟ್ಟಿಯೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು / ತಿದ್ದುಪಡಿ (EDIT) ಮಾಡಲು ಪ್ರಾರಂಭದ ದಿನಾಂಕ: 11.07.2026,  ಅರ್ಜಿ ಸಲ್ಲಿಸಲು / ತಿದ್ದುಪಡಿ ಮಾಡಲು ಕೊನೆಯ ದಿನಾಂಕ: 18.07.2026, 

    ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸುವ ದಿನಾಂಕ: 19.07.2026, 

    ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸಿದ ನಂತರ ಅರ್ಜಿಯನ್ನು EDIT ಮಾಡಲು ಅವಕಾಶ: 19.07.2026 ರಿಂದ 22.07.2026,

    ತಾತ್ಕಾಲಿಕ ಕಾರ್ಯಭಾರ (Workload) ಪ್ರಕಟಿಸುವ ದಿನಾಂಕ: 25.07.2026,

    Click here

    Click here

    Click here

    Call us

    Call us

    ಕೌನ್ಸಿಲಿಂಗ್ ಮೆರಿಟ್ ಪಟ್ಟಿ ಹಾಗೂ ಕಾರ್ಯಭಾರ ಪ್ರಕಟಿಸುವ ದಿನಾಂಕ: 26.07.2026,

    ಮೆರಿಟ್ ಪಟ್ಟಿಯನ್ವಯ ಕಾಲೇಜು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ: 28.07.2026.

    ವಿದ್ಯಾರ್ಹತೆ ಮತ್ತು ಆಯ್ಕೆ ಮಾನದಂಡಗಳು:
    ಯುಜಿಸಿ 2018ರ ಮಾರ್ಗಸೂಚಿಗಳನ್ವಯ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯಲ್ಲಿ ಶೇ.55 ಅಂಕಗಳನ್ನು (ಎಸ್‌ಸಿ/ಎಸ್ ಟಿ/ಓಬಿಸಿ/ವಿಶೇಷ ಚೇತನರಿಗೆ ಶೇ.50) ಹೊಂದಿರಬೇಕು. ಇದರೊಂದಿಗೆ ಎನ್‌ಇಟಿ / ಎಸ್‌ಎಲ್‌ಇಟಿ / ಕೆ.ಸೆಟ್ / ಪಿಹೆಚ್.ಡಿ ವಿದ್ಯಾರ್ಹತೆ ಹೊಂದಿರುವುದು ಕಡ್ಡಾಯ. 

    ಮೆರಿಟ್ ಅಂಕಗಳ ಹಂಚಿಕೆ (ಒಟ್ಟು 100 ಅಂಕಗಳು):
    ಸ್ನಾತಕೋತ್ತರ ಪದವಿ ಅಂಕಗಳು: ಅಭ್ಯರ್ಥಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ 25% ಭಾಗವನ್ನು ಪರಿಗಣಿಸಲಾಗುವುದು (ಗರಿಷ್ಠ 25 ಅಂಕಗಳು). 

    ಹೆಚ್ಚುವರಿ ವಿದ್ಯಾರ್ಹತೆ: ಪಿಹೆಚ್.ಡಿ ಹೊಂದಿದ್ದಲ್ಲಿ 12 ಅಂಕಗಳು; ಎನ್‌ಇಟಿ/ಕೆ-ಸೆಟ್/ಎಸ್‌ಎಲ್‌ಇಟಿ ಹೊಂದಿದ್ದಲ್ಲಿ 09 ಅಂಕಗಳು; ಎಂ.ಫಿಲ್ ಹೊಂದಿದ್ದಲ್ಲಿ 06 ಅಂಕಗಳು.

     ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ ಪ್ರತಿ ಶೈಕ್ಷಣಿಕ ವರ್ಷಕ್ಕೆ 3 ಅಂಕಗಳಂತೆ ಗರಿಷ್ಠ 48 ಅಂಕಗಳನ್ನು (ಮಿತಿ 16 ವರ್ಷಗಳು) ನೀಡಲಾಗುವುದು.

     ಅರ್ಹ ವಿಕಲಚೇತನ ಅಭ್ಯರ್ಥಿಗಳಿಗೆ ಹೆಚ್ಚುವರಿಯಾಗಿ 10 ಅಂಕಗಳನ್ನು ನೀಡಲಾಗುವುದು. 

    ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆಗಳು:
    2025-26ನೇ ಸಾಲಿಗೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಆದರೆ, ತಮ್ಮ ಅರ್ಜಿಯಲ್ಲಿನ ಮಾಹಿತಿಯನ್ನು ತಿದ್ದುಪಡಿ ಮಾಡಲು ಅವಕಾಶವಿರುತ್ತದೆ. 

    ಕರ್ನಾಟಕ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸಲ್ಲಿಸಿದ ಸೇವೆಯನ್ನು ಮಾತ್ರ ಪರಿಗಣಿಸಲಾಗುವುದು. ಖಾಸಗಿ ಕಾಲೇಜು ಅಥವಾ ವಿಶ್ವವಿದ್ಯಾಲಯಗಳಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸುವುದಿಲ್ಲ. 

    ಸಾಮಾನ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು- https://emis.karnataka.gov.in/application.aspx ಮತ್ತು ಸರ್ಕಾರಿ ಚಿತ್ರಕಲಾ / ಸಂಸ್ಕೃತ ಕಾಲೇಜುಗಳು –  https://emis.karnataka.gov.in/AppSFC.aspx ಲಿಂಕ್ ಗಳ ಮೂಲಕ  ಅನ್ ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.

    ಅರ್ಜಿಯಲ್ಲಿ ತಪ್ಪು ಮಾಹಿತಿ ನೀಡಿದ್ದಲ್ಲಿ ಅಭ್ಯರ್ಥಿತನವನ್ನು ತಿರಸ್ಕರಿಸಲಾಗುವುದು. ಒಂದು ವೇಳೆ ಹಾಜರುಪಡಿಸಿದ ದಾಖಲೆಗಳು ನಕಲಿ ಎಂದು ಕಂಡುಬಂದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. 

    ಆಯ್ಕೆಯಾಗಿ ಕರ್ತವ್ಯಕ್ಕೆ ಹಾಜರಾದ ನಂತರ ಪ್ರಸೂತಿ ರಜೆ ಮೇಲೆ ತೆರಳುವ ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ 90 ದಿನಗಳ ವೇತನ ಸಹಿತ ಮಾತೃತ್ವ ರಜೆಯ ಸೌಲಭ್ಯವನ್ನು ನೀಡಲಾಗುತ್ತದೆ. 

    ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್ https://dce.karnataka.gov.in ಅನ್ನು ಪ್ರತಿ ನಿತ್ಯ ಗಮನಿಸುವಂತೆ  ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರು, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿನಿಲಯದಲ್ಲಿ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    14/07/2026

    ಎಸ್‌ಐಆರ್ ಕುರಿತು ಡಿಸಿ ಜೊತೆ ಸಂವಾದ: ಸನ್ಮತಿ ಪತ್ರಿಕೆಯ ಸಂಚಿಕೆ ಬಿಡುಗಡೆ

    11/07/2026

    ಜವಾಹರ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

    11/07/2026
    Leave A Reply Cancel Reply

    twenty + 16 =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ವಿದ್ಯಾರ್ಥಿನಿಲಯದಲ್ಲಿ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ರೋಟರಿ ಕ್ಲಬ್ ಕೋಟ: ಬ್ರಿಗೇಡ್‌ನಿಂದ ಆರೋಗ್ಯ ಸಹಾಯಕ ಸಾಧನಗಳ ವಿತರಣೆ
    • ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಆಯ್ಕೆ  – ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ
    • ಸಚಿವ ಯು.ಟಿ. ಖಾದರ್ ಅವರನ್ನು ಭೇಟಿಯಾದ ಬೈಂದೂರು ರೈತರ ಸಂಘದ ನಿಯೋಗ
    • ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ ಹಾಗೂ ಜಾಥಾ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.