ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳ ಪ್ರವೇಶಾತಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಸಾಮಾನ್ಯ ಪದವಿ ಮಟ್ಟದ ಕೋರ್ಸಿನಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಮಾತ್ರ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು ಮಂಜೂರಾತಿ ಸೀಟುಗಳಲ್ಲಿ ಶೇ.75 ಅಲ್ಪಸಂಖ್ಯಾತರು ಮತ್ತು ಶೇ.25 ಇತರೆ ವರ್ಗದ ವಿದ್ಯಾರ್ಥಿಗಳಿಗೆ ಅವಕಾಶವಿದ್ದು, ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 2.50 ಲಕ್ಷಗಳ ಒಳಗಿರುವ ವಿದ್ಯಾರ್ಥಿಯು ಅರ್ಜಿ ನಮೂನೆಯ ಜೊತೆಗೆ ವಿದ್ಯಾರ್ಥಿಯ ಜಾತಿ/ಆದಾಯ ಪ್ರಮಾಣ ಪತ್ರ, ಕಳೆದ ಸಾಲಿನ ವಾರ್ಷಿಕ ಪರೀಕ್ಷೆಯ ಅಂಕಪಟ್ಟಿ, ಪಡಿತರ ಚೀಟಿ, ಆಧಾರ್ ಕಾರ್ಡ್, ವರ್ಗಾವಣೆ ಪ್ರಮಾಣ ಪತ್ರದ ದೃಢೀಕೃತ ಪ್ರತಿ, ವಾಸಸ್ಥಳದಿಂದ ಪ್ರವೇಶ ಕೋರಿರುವ ಕಾಲೇಜಿಗೆ ಇರುವ ದೂರದ ಬಗ್ಗೆ ದೂರದ ಪ್ರಮಾಣ ಪತ್ರ, ಫೋಟೋಗಳೊಂದಿಗೆ ಅರ್ಜಿಯನ್ನು https://shp.karnataka.gov.in ತಂತ್ರಾಂಶದ ಮೂಲಕ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಛೇರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574596 ಅಥವಾ ಸಹಾಯವಾಣಿ ಸಂಖ್ಯೆ 8277799990, ಜಿಲ್ಲಾ ಅಲ್ಪ ಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂಖ್ಯೆ: 0820-2574596 ಹಾಗೂ ಕಾರ್ಕಳ (ದೂ.ಸಂಖ್ಯೆ: 08258-231101) ಮತ್ತು ಕುಂದಾಪುರ (ದೂ.ಸಂಖ್ಯೆ: 08254-230370) ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ವಾರಸುದಾರರಿಗೆ ಸೂಚನೆ
















