Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭೂಹೀನ ಕೊರಗ ಕುಟುಂಬಗಳಿಗೆ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ: ಜಿಲ್ಲಾಧಿಕಾರಿ
    ಊರ್ಮನೆ ಸಮಾಚಾರ

    ಭೂಹೀನ ಕೊರಗ ಕುಟುಂಬಗಳಿಗೆ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ತಾಲೂಕಿನ ಆಲೂರು ಹಾಗೂ ಹರ್ಕೂರು ಗ್ರಾಮದ ಭೂಹೀನ ಕೊರಗ (ಪರಿಶಿಷ್ಟ ಪಂಗಡ) ಕುಟುಂಬಗಳಿಗೆ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ, ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಸೋಮವಾರ ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶಾಂತಿಯುತ ಧರಣಿ ಸತ್ಯಾಗ್ರಹ ಹಾಗೂ ಹಕ್ಕೊತ್ತಾಯ ನಡೆಯಿತು.

    Click Here

    Call us

    Click Here

    ಧರಣಿಯಲ್ಲಿ ಕೊರಗ ಸಮುದಾಯದ ನೂರಾರು ಸದಸ್ಯರು, ವಿವಿಧ ಜನಪರ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿ, ಸುಮಾರು ಹತ್ತು ವರ್ಷಗಳಿಂದ ಬಾಕಿ ಉಳಿದಿರುವ ಭೂಮಿ ಮಂಜೂರಾತಿ ಪ್ರಕ್ರಿಯೆಯನ್ನು ಕೂಡಲೇ ಪೂರ್ಣಗೊಳಿಸುವಂತೆ ಒತ್ತಾಯಿಸಿದರು.

    ಧರಣಿ ನಡೆಯುತ್ತಿರುವ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿಗಳು ಧರಣಿ ನಿರತ ನಿಯೋಗವನ್ನು ತಮ್ಮ ಕಚೇರಿಗೆ ಆಹ್ವಾನಿಸಿ, ಪ್ರಕರಣದ ಕುರಿತು ವಿವರವಾದ ಚರ್ಚೆ ನಡೆಸಿದರು. ಸಂಘಟನೆಯಿಂದ ಸಲ್ಲಿಸಲಾದ ಹಕ್ಕೊತ್ತಾಯ ಮನವಿಯನ್ನು ಸ್ವೀಕರಿಸಿದ ಜಿಲ್ಲಾಧಿಕಾರಿಗಳು, ಆಲೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ ಪ್ರಕರಣದ ಕುರಿತು ತನಗೆ ಸಂಪೂರ್ಣ ಮಾಹಿತಿ ಇದೆ. ಸಂಘಟನೆಯು ಈ ಹಿಂದೆ ಸಲ್ಲಿಸಿರುವ ದಾಖಲೆಗಳು ಹಾಗೂ ವಿವಿಧ ಇಲಾಖೆಗಳ ವರದಿಗಳು ಜಿಲ್ಲಾಡಳಿತದ ಬಳಿ ಲಭ್ಯವಿದ್ದು, ಸಂಬಂಧಿಸಿದ ಎಲ್ಲಾ ಇಲಾಖೆಗಳ ಸಭೆಯನ್ನು ಶೀಘ್ರ ದಲ್ಲಿಯೇ ತಮ್ಮ ಅಧ್ಯಕ್ಷತೆಯಲ್ಲಿ ನಡೆಸಿ ಪ್ರಕರಣದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು.

    ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾದ ಮನವಿಯಲ್ಲಿ ಆಲೂರು ಗ್ರಾಮದ ಸರ್ವೇ ನಂ.153, 154, 148/3 ಹಾಗೂ 148/4 ಮತ್ತು ಹರ್ಕೂರು ಗ್ರಾಮದ ಸರ್ವೇ ನಂ.144/1, 150/3ರಲ್ಲಿ ಗುರುತಿಸಲಾದ ಒಟ್ಟು 10.67 ಎಕರೆ ಭೂಮಿಯನ್ನು 13 ಭೂಹೀನ ಕೊರಗ ಕುಟುಂಬಗಳಿಗೆ ಕೂಡಲೇ ಮಂಜೂರು ಮಾಡಬೇಕು ಎಂದು ಆಗ್ರಹಿಸಲಾಯಿತು.

    ಜೊತೆಗೆ, ಹರ್ಕೂರು ಗ್ರಾಮದ ಸರ್ವೇ ನಂ.135ರಲ್ಲಿ 1984-85ರಲ್ಲೇ ಮಂಜೂರಾಗಿರುವ ಭೂಮಿಯ ಸ್ವಾಧೀನವನ್ನು ಮೂಲ ಫಲಾನುಭವಿಗಳಿಗೆ ತಕ್ಷಣ ಒದಗಿಸುವಂತೆ ಒತ್ತಾಯಿಸಲಾಯಿತು. ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಸಲ್ಲಿಸಿರುವ ಆಧಾರರಹಿತ ಆಕ್ಷೇಪಣೆಯನ್ನು ತಿರಸ್ಕರಿಸಿ, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಂಬಂಧಿಸಿದ ಎಲ್ಲಾ ಇಲಾಖೆಗಳ ಉನ್ನತ ಮಟ್ಟದ ಸಭೆಯನ್ನು ಶೀಘ್ರದಲ್ಲಿ ನಡೆಸಿ, ಜಿಲ್ಲಾ ಮಟ್ಟದಲ್ಲಿಯೇ ಪ್ರಕರಣ ವನ್ನು ಅಂತಿಮವಾಗಿ ಇತ್ಯರ್ಥಪಡಿಸಿ ಕೊರಗ ಕುಟುಂಬಗಳಿಗೆ ನ್ಯಾಯ ಒದಗಿಸಬೇಕೆಂದು ಸಂಘಟನೆ ಒತ್ತಾಯಿಸಿತು.

    Click here

    Click here

    Click here

    Call us

    Call us

    ಧರಣಿ ಸತ್ಯಾಗ್ರಹದಲ್ಲಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಜಿಲ್ಲಾ ಸಂಚಾಲಕರಾದ ಶ್ರೀಧರ ನಾಡ, ರಾಜ್ಯ ಸಮಿತಿ ಸದಸ್ಯರಾದ ಕೃಷ್ಣ ಇನ್ನಾ ಹಾಗೂ ಗಣೇಶ ಆಲೂರು, ರೇವತಿ ಆಲೂರು, ಕೊರಗ ನಾರ್ಕಳಿ, ಪಡುಬಿದ್ರಿ ಘಟಕದ ಕಾರ್ಯದರ್ಶಿ ತುಳಸಿ, ರೇಷ್ಮಾ ನಾಡ, ಮಾಲತಿ ಆಲೂರು, ಶೇಖರ ನಾರ್ಕಳಿ, ಕೊರಗ ಸಮುದಾಯದ ಸಾಹಿತಿಗಳಾದ ಬಾಬು ಪಾಂಗಾಳ, ಕುಡುಪ ಕೊರಗ, ವಸಂತ ಕೊರಗ (ಉಡುಪಿ), ಕಾರ್ಮಿಕ ಮುಖಂಡರಾದ ಸುರೇಶ್ ಕಲ್ಲಗಾರ, ಚಂದ್ರಶೇಖರ, ಹೆಚ್. ನರಸಿಂಹ ಸೇರಿದಂತೆ ವಿವಿಧ ಜನಪರ ಸಂಘಟನೆಗಳ ಮುಖಂಡರು, ಹಾಗೂ ಕೊರಗ ಸಮುದಾಯದವರು ಭಾಗವಹಿಸಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗನಾಡು: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

    14/07/2026

    ಮೂಡುಗಿಳಿಯಾರು: ರೋಟರಿ ಸಮುದಾಯದಳ ನೇತೃತ್ವದಲ್ಲಿ ಹಸಿರೇ ಉಸಿರು ಗಿಡ ನೆಡುವ ಕಾರ್ಯಕ್ರಮ

    14/07/2026

    ಉಪ್ಪುಂದ ಅಳಿವೆಕೋಡಿಯ ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ

    14/07/2026
    Leave A Reply Cancel Reply

    7 − 7 =

    Call us

    Click Here

    Call us

    Call us

    Call us
    Highest Viewed Recently
    • ಗಂಗನಾಡು: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ
    • ಮೂಡುಗಿಳಿಯಾರು: ರೋಟರಿ ಸಮುದಾಯದಳ ನೇತೃತ್ವದಲ್ಲಿ ಹಸಿರೇ ಉಸಿರು ಗಿಡ ನೆಡುವ ಕಾರ್ಯಕ್ರಮ
    • ಉಪ್ಪುಂದ ಅಳಿವೆಕೋಡಿಯ ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ
    • ಭೂಹೀನ ಕೊರಗ ಕುಟುಂಬಗಳಿಗೆ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ: ಜಿಲ್ಲಾಧಿಕಾರಿ
    • ಉಡುಪಿ: ವಿದ್ಯಾರ್ಥಿನಿಲಯದಲ್ಲಿ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.