ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಗಂಗನಾಡು ಗ್ರಾಮದ ಒಣಕೊಡ್ಲು ನಿವಾಸಿ ಲಕ್ಷ್ಮೀ (46) ಅವರು ಸೋಮವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಲಕ್ಷ್ಮೀ ಮತ್ತು ಪತಿ ಗೋಪಾಲ್ ನಡುವೆ ಯಾವಾಗಲೂ ಜಗಳ ನಡೆಯುತ್ತಿತ್ತು. ಭಾನುವಾರ ಮನೆಯಲ್ಲಿ ಪರಸ್ಪರ ಜಗಳ ಮಾಡಿಕೊಂಡಿದ್ದು ಮನೆಯ ಕೋಣೆಯಲ್ಲಿ ಕುತ್ತಿಗೆಗೆ ನೈಲಾನ್ ಹಗ್ಗ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪುತ್ರಿ ರಕ್ಷಿತಾ ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











