Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಸ್‍.ಐ.ಆರ್ ಅರ್ಜಿಗಳನ್ನು ಸಾರ್ವಜನಿಕರು ತ್ವರಿತವಾಗಿ ಮತಗಟ್ಟೆ ಅಧಿಕಾರಿಗಳಿಗ ನೀಡಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಎಸ್‍.ಐ.ಆರ್ ಅರ್ಜಿಗಳನ್ನು ಸಾರ್ವಜನಿಕರು ತ್ವರಿತವಾಗಿ ಮತಗಟ್ಟೆ ಅಧಿಕಾರಿಗಳಿಗ ನೀಡಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ಈಗಾಗಲೇ ಬಹುತೇಕ ಮನೆ ಮನೆಗಳಿಗೆ ತೆರಳಿ ಗಣತಿ ನಮೂನೆಗಳನ್ನು ಮತದಾರರಿಗೆ ವಿತರಿಸಲಾಗಿದ್ದು ಅವುಗಳನ್ನು ಭರ್ತಿ ಮಾಡಿ ತ್ವರಿತವಾಗಿ ಮತಗಟ್ಟೆ ಅಧಿಕಾರಿಗಳಿಗೆ ಸಾರ್ವಜನಿಕರು ಹಿಂದಿರುಗಿಸಬೇಕೆಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.  ಕರೆ ನೀಡಿದರು.

    Click Here

    Call us

    Click Here

    ಅವರು ಮಂಗಳವಾರ ತಮ್ಮ ಕಚೇರಿ ಸಭಾಂಗಣದಲ್ಲಿ  ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‍.ಐ.ಆರ್) ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ  ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಮತದಾರರ ಪಟ್ಟಿಯ ನಿಖರತೆ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸಕಾರಾತ್ಮಕವಾಗಿ ಸಹಕರಿಸಬೇಕು.ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಗಣತಿ ನಮೂನೆಗಳ ವಿತರಣೆಯ ಕಾರ್ಯವು ಈಗಾಗಲೇ ಶೇ.99.97ರಷ್ಟು ಪೂರ್ಣಗೊಂಡಿದೆ. ಸಾರ್ವಜನಿಕರು ಗಣತಿ ನಮೂನೆಗಳನ್ನು ಭರ್ತಿ ಮಾಡಿ ತ್ವರಿತವಾಗಿ ಬಿ.ಎಲ್.ಓ ಗಳಿಗೆ ನೀಡಬೇಕೆಂದರು.

    ಗಣತಿ ನಮೂನೆಗಳನ್ನು ಭರ್ತಿ ಮಾಡಿ ನೀಡಿದಲ್ಲಿ ಅವುಗಳ ಡಿಜಿಟಲೀಕರಣ ಕಾರ್ಯ ಕೈಗೊಳ್ಳಲು ಬಿ ಎಲ್ ಓ ಗಳಿಗೆ ಅನುಕೂಲವಾಗಲಿದೆ. ಕೊನೆಗಳಿಗೆಯಲ್ಲಿ ನೀಡಿದಲ್ಲಿ ಗೊಂದಲಗಳು ಉಂಟಾಗುವ ಸಾಧ್ಯತೆಗಳು ಇರುತ್ತದೆ. ಆದಷ್ಟು ಬೇಗ ಗಣತಿ ನಮೂನೆಗಳನ್ನು ನೀಡಬೇಕು ಎಂದರು.

    ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR-2026) ಪ್ರಕ್ರಿಯೆಯು ವ್ಯವಸ್ಥಿತವಾಗಿ ನಡೆಯುತ್ತಿದ್ದು, ಇಂದು (ಜುಲೈ 14) ರ ವರೆಗೆ ಜಿಲ್ಲೆಯಲ್ಲಿ ಒಟ್ಟು 10,63,876 ಮತದಾರರಲ್ಲಿ 1063451 ಮತದಾರರಿಗೆ ಎನ್ಯೂಮರೇಶನ್ ಫಾರ್ಮ್‌ಗಳನ್ನು ವಿತರಿಸಿ, ಶೇ.99.97% ಪ್ರಗತಿಯನ್ನು ಸಾಧಿಸಲಾಗಿರುತ್ತದೆ ಎಂದ ಅವರು 3,22,027 ಗಣತಿ ನಮೂನೆಯನ್ನು ಡಿಜಿಟಲೀಕರಣಗೊಳಿಸಿ ಶೇ. 30.27 ರಷ್ಟು ಪ್ರಗತಿಯಾಗಿರುತ್ತದೆ. 1647 ಮತದಾರರು ಮೃತಪಟ್ಟಿರುವುದು ಮನೆ ಭೇಟಿಯ ವೇಳೆ ಕಂಡುಬAದಿರುತ್ತದೆ. 1166 ಮತದಾರರು ಖಾಯಂ ಆಗಿ ಬೇರೆ ಕಡೆಗೆ ವರ್ಗಾವಣೆಗೊಂಡಿದ್ದು, 396 ಮತದಾರರು ತಮ್ಮ ದಾಖಲಾತಿ ಮಾಡಿರುತ್ತಾರೆ ಎಂದು ಸಭೆಗೆ ಮಾಹಿತಿ ನೀಡಿದರು.

    Click here

    Click here

    Click here

    Call us

    Call us

    ಜಿಲ್ಲೆಯಲ್ಲಿ ಈವರೆಗೆ  118-ಬೈಂದೂರು , 119-ಕುಂದಾಪುರ,121-ಕಾಪು  ಹಾಗೂ 122-ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ  ಶೇಕಡಾ ನೂರರಷ್ಟು ಮತದಾರರಿಗೆ ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಲಾಗಿರುತ್ತದೆ.120-ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 425 ಎನ್ಯುಮರೇಷನ್ ಫಾರ್ಮ್ ಗಳ ವಿತರಣೆಗೆ ಬಾಕಿ ಇದ್ದು, ಇದು ಪ್ರತೀಶತ ನೂರರಷ್ಟು ಪೂರ್ಣಗೊಳುವಂತೆ ಮಾಡುವುದು ಬಿ.ಎಲ್. ಓ ಹಾಗೂ ಬಿ. ಎಲ್ಎ. ಗಳ ಜವಾಬ್ದಾರಿಯಾಗಿದೆ ಎಂದರು.

    ಭಾರತ ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವು ಸಂಪೂರ್ಣ ಪಾರದರ್ಶಕತೆಯಿಂದ ಕೂಡಿದ್ದು, ಇದರಲ್ಲಿ ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳ ಸಹಭಾಗಿತ್ವವೂ ಅತ್ಯಗತ್ಯವಾಗಿದೆ ಎಂದರು

    ಗಣತಿ ನಮೂನೆಗಳನ್ನು ಭರ್ತಿ ಮಾಡುವಾಗ ಸಾರ್ವಜನಿಕರಲ್ಲಿ ಉಂಟಾಗುವ ಗೊಂದಲಗಳ ತಪ್ಪಿಸಲು ವ್ಯಾಪಕ ಜಾಗೃತಿ ಮೂಡಿಸಲಾಗುತ್ತಿದೆ. ಫಾರ್ಮ್‍ಗಳಲ್ಲಿನ ಮೊದಲ ಭಾಗ ಹಾಗೂ ಎರಡನೇ ಭಾಗಗಳನ್ನು ಭರ್ತಿ ಮಾಡುವಾಗ ಆಗುವ ಸಾಮಾನ್ಯ ತಪ್ಪುಗಳನ್ನು ತಪ್ಪಿಸಲು ಬಿಎಲ್‍ಒ ಮತ್ತು ಬಿಎಲ್‍ಎಗಳಿಗೆ ವಿಶೇಷ ತರಬೇತಿ ನೀಡಲಾಗಿದೆ. ರಾಜಕೀಯ ಪಕ್ಷಗಳು ನೇಮಕ ಮಾಡಿರುವ ಬೂತ್ ಮಟ್ಟದ ಏಜೆಂಟರುಗಳು ಈ ಕಾರ್ಯದಲ್ಲಿ ಸಂಪೂರ್ಣ  ಸಹಕರಿಸಬೇಕು ಎಂದರು

    ಜಿಲ್ಲೆಯಲ್ಲಿ ಅತ್ಯಂತ ಪಾರದರ್ಶಕ ಹಾಗೂ ದೋಷಮುಕ್ತ ಮತದಾರರ ಪಟ್ಟಿ ಸಿದ್ಧಪಡಿಸಲು ಎಲ್ಲಾ ರಾಜಕೀಯ ಪಕ್ಷಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ , ಜಿಲ್ಲಾ ಚುನಾವಣಾಧಿಕಾರಿ ಕಚೇರಿ ಅಧಿಕಾರಿ- ಸಿಬ್ಬಂದಿ ಹಾಗೂ ಜಿಲ್ಲೆಯ ಎಲ್ಲಾ ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ಪ್ರಾದೇಶಿಕ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿನಿಲಯದಲ್ಲಿ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    14/07/2026

    ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಆಯ್ಕೆ  – ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

    14/07/2026

    ಎಸ್‌ಐಆರ್ ಕುರಿತು ಡಿಸಿ ಜೊತೆ ಸಂವಾದ: ಸನ್ಮತಿ ಪತ್ರಿಕೆಯ ಸಂಚಿಕೆ ಬಿಡುಗಡೆ

    11/07/2026
    Leave A Reply Cancel Reply

    3 × four =

    Call us

    Click Here

    Call us

    Call us

    Call us
    Highest Viewed Recently
    • ಎಸ್‍.ಐ.ಆರ್ ಅರ್ಜಿಗಳನ್ನು ಸಾರ್ವಜನಿಕರು ತ್ವರಿತವಾಗಿ ಮತಗಟ್ಟೆ ಅಧಿಕಾರಿಗಳಿಗ ನೀಡಿ: ಜಿಲ್ಲಾಧಿಕಾರಿ
    • ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನ ವ್ಯವಸ್ಥಾಪಕರಾಗಿದ್ದ ಎಚ್. ನಾಗರಾಜ ಹಂದೆ ನಿಧನ
    • ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 40ನೇ ಸಂಸ್ಥಾಪನಾ ದಿನಾಚರಣೆ
    • ಸಿ.ಎಂ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ
    • ಮಹಿಳೆಯರ ಸಬಲೀಕರಣದಿಂದಲೇ ಕುಟುಂಬ ಮತ್ತು ಸಮಾಜದ ಅಭಿವೃದ್ಧಿ ಸಾಧ್ಯ: ಪ್ರಣಮ್ಯ ಭಟ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.