ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ನೆರಳಕಟ್ಟೆ ಸಮೀಪದ ನಿವಾಸಿ, ವಿಜಯ ಕರ್ನಾಟಕ ಪತ್ರಿಕೆಯ ವರದಿಗಾರ ನಾಗೇಶ್ ಗಾಣಿಗ ಅವರು ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಹೃದಯಾಘಾತಕ್ಕೊಳಗಾಗಿದ್ದ ಅವರನ್ನು ತಕ್ಷಣವೇ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ನಾಗೇಶ್ ಅವರು ಹಲವು ವರ್ಷಗಳಿಂದ ವಿಜಯ ಕರ್ನಾಟಕ ಪತ್ರಿಕೆಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದು, ಸ್ನೇಹಪರ ವ್ಯಕ್ತಿತ್ವ ಹೊಂದಿದ್ದರು.











