Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕತಾರ್‌ನ ಸ್ಥಳೀಯ ಶಾಲೆಗಳಲ್ಲಿ ಕನ್ನಡ ಭಾಷೆ ಅನುಷ್ಠಾನಕ್ಕೆ ಭಾರತೀಯ ರಾಯಭಾರ ಕಚೇರಿಯ ಸಂಪೂರ್ಣ ಆಡಳಿತಾತ್ಮಕ ಬೆಂಬಲ: ಹರೀಶ್ ಪಾಂಡೆ
    ಗಲ್ಫ್

    ಕತಾರ್‌ನ ಸ್ಥಳೀಯ ಶಾಲೆಗಳಲ್ಲಿ ಕನ್ನಡ ಭಾಷೆ ಅನುಷ್ಠಾನಕ್ಕೆ ಭಾರತೀಯ ರಾಯಭಾರ ಕಚೇರಿಯ ಸಂಪೂರ್ಣ ಆಡಳಿತಾತ್ಮಕ ಬೆಂಬಲ: ಹರೀಶ್ ಪಾಂಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕತಾರ್:
    ಕತಾರ್‌ನಲ್ಲಿರುವ ಕನ್ನಡ ಮಾತನಾಡುವ ಅನಿವಾಸಿ ಭಾರತೀಯರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಆಕಾಂಕ್ಷೆಗಳಿಗೆ ದೊಡ್ಡ ಮಟ್ಟದ ಉತ್ತೇಜನ ಸಿಕ್ಕಂತಾಗಿದೆ. ಕರ್ನಾಟಕ ಸಂಘ ಕತಾರ್ (ಕೆ ಎಸ್ ಕ್ಯೂ) ನೂತನ ವ್ಯವಸ್ಥಾಪನಾ ಸಮಿತಿಯು ಭಾರತೀಯ ರಾಯಭಾರ ಕಚೇರಿಯ ಪ್ರಥಮ ಕಾರ್ಯದರ್ಶಿಗಳಾದ (ಶಿಕ್ಷಣ ಮತ್ತು ಸಾಂಸ್ಕೃತಿಕ) ಮಾನ್ಯ ಹರೀಶ್ ಪಾಂಡೆ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಭಾಷಾ ತರಗತಿಗಳ ಆರಂಭಕ್ಕೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ಮತ್ತು ಐತಿಹಾಸಿಕ ಭರವಸೆ ಲಭಿಸಿದೆ.

    Click Here

    Call us

    Click Here

    ಸಂಘದ ಅಧ್ಯಕ್ಷರಾದ ಮಾನ್ಯ ಸುಬ್ರಮಣ್ಯ ಹೆಬ್ಬಾಗಿಲು ಅವರ ನೇತೃತ್ವದಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ, 2026-28ನೇ ಸಾಲಿನ ನೂತನ ಸಮಿತಿಯು ತನ್ನ ಪದಾಧಿಕಾರಿಗಳನ್ನು ಪರಿಚಯಿಸಿತಲ್ಲದೆ, ಮುಂಬರುವ ಎರಡು ವರ್ಷಗಳ ಅವಧಿಯಲ್ಲಿ ಕೈಗೊಳ್ಳಲಿರುವ ಶೈಕ್ಷಣಿಕ ಯೋಜನೆಗಳು, ವಿದ್ಯಾರ್ಥಿ ಒಕ್ಕೂಟ ಹಾಗೂ ಕನ್ನಡ ಭಾಷಾ ತರಗತಿಗಳ ಚೌಕಟ್ಟಿನ ಕುರಿತು ವಿವರವಾದ ಸುದೀರ್ಘ ಚರ್ಚೆ ನಡೆಸಿತು.

    ಈ ಸಭೆಯು ಕನ್ನಡಿಗರಿಗೆ ಅತ್ಯಂತ ಸಕಾರಾತ್ಮಕ ಫಲಿತಾಂಶವನ್ನು ನೀಡಿದ್ದು, ಮುಂದಿನ ಪೀಳಿಗೆಯ ಮಕ್ಕಳಲ್ಲಿ ಸಾಂಸ್ಕೃತಿಕ ಬೇರುಗಳನ್ನು ಉಳಿಸುವ ಅಗತ್ಯತೆಯನ್ನು ಗುರುತಿಸಿದ ಪ್ರಥಮ ಕಾರ್ಯದರ್ಶಿಗಳಾದ ಮಾನ್ಯ ಶ್ರೀ ಹರೀಶ್ ಪಾಂಡೆ ಅವರು, ಕತಾರ್ನ ಸ್ಥಳೀಯ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಪಠ್ಯಕ್ರಮದ ಭಾಗವಾಗಿ ಅನುಷ್ಠಾನಗೊಳಿಸಲು ಭಾರತೀಯ ರಾಯಭಾರ ಕಚೇರಿಯಿಂದ ಅಗತ್ಯವಿರುವ ಎಲ್ಲಾ ರೀತಿಯ ಆಡಳಿತಾತ್ಮಕ ಮತ್ತು ಸಾಂಸ್ಥಿಕ ಬೆಂಬಲವನ್ನು ನೀಡುವುದಾಗಿ ಅಧಿಕೃತವಾಗಿ ಪ್ರಕಟಿಸಿದರು. ಈ ಪ್ರಮುಖ ನಿರ್ಧಾರದಿಂದಾಗಿ ಅನಿವಾಸಿ ವಿದ್ಯಾರ್ಥಿಗಳಿಗೆ ಶಾಲೆಗಳ ಮುಖ್ಯವಾಹಿನಿಯಲ್ಲೇ ವ್ಯವಸ್ಥಿತವಾಗಿ ಕನ್ನಡ ಕಲಿಯುವ ಉತ್ತಮ ಅವಕಾಶ ಮುಕ್ತವಾಗಲಿದೆ.

    ಇದರೊಂದಿಗೆ, ಮುಂಬರುವ ದಿನಗಳಲ್ಲಿ ಕರ್ನಾಟಕ ಸಂಘ ಕತಾರ್ (ಕೆ ಎಸ್ ಕ್ಯೂ) ಹಮ್ಮಿಕೊಳ್ಳಲಿರುವ ಎಲ್ಲಾ ಶೈಕ್ಷಣಿಕ, ಸಾಮಾಜಿಕ ಹಾಗೂ ಸಮುದಾಯ ಸಮಾಜಮುಖಿ ಕಾರ್ಯಕ್ರಮಗಳಿಗೂ ರಾಯಭಾರ ಕಚೇರಿಯು ಸದಾ ಬೆನ್ನೆಲುಬಾಗಿ ನಿಲ್ಲಲಿದೆ ಎಂದು ಮಾನ್ಯ ಶ್ರೀ ಹರೀಶ್ ಪಾಂಡೆ ಅವರು ಆಶ್ವಾಸನೆ ನೀಡಿದರು. ಭಾರತದ ವೈವಿಧ್ಯಮಯ ಪರಂಪರೆಯನ್ನು ಆಚರಿಸುವ ಇಂತಹ ತಳಮಟ್ಟದ ಸಮುದಾಯದ ಪ್ರಯತ್ನಗಳಿಗೆ ರಾಯಭಾರ ಕಚೇರಿಯು ಸದಾ ಪ್ರೋತ್ಹಾಹ ನೀಡುತ್ತದೆ ಎಂದು ಅವರು ವಿಶೇಷವಾಗಿ ಉಲ್ಲೇಖಿಸಿದರು.

    ರಾಯಭಾರ ಕಚೇರಿಯ ಈ ಸಕಾರಾತ್ಮಕ ಮತ್ತು ಪ್ರಗತಿಪರ ನಿರ್ಧಾರಕ್ಕೆ ಕರ್ನಾಟಕ ಸಂಘದ ಅಧ್ಯಕ್ಷರಾದ ಮಾನ್ಯ ಶ್ರೀ ಸುಬ್ರಮಣ್ಯ ಹೆಬ್ಬಾಗಿಲು ಮತ್ತು ಕಾರ್ಯಕಾರಿ ಸಮಿತಿಯು ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸಿತು. ಅತ್ಯಂತ ಯಶಸ್ವಿಯಾಗಿ ಮೂಡಿಬಂದ ಈ ಮಾತುಕತೆಯ ಕೊನೆಯಲ್ಲಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮಾನ್ಯ ಶ್ರೀ ಹರೀಶ್ ಪಾಂಡೆ ಅವರಿಗೆ ಸಾಂಪ್ರದಾಯಿಕ ಶಲ್ಯ ಹೊದಿಸಿ, ನೆನಪಿನ ಕಾಣಿಕೆ ನೀಡಿ ಹೃತ್ಪೂರ್ವಕವಾಗಿ ಗೌರವಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರ ಮತ್ತು ಸಮನ್ವಯತೆಯ ಮೂಲಕ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್

    06/07/2026

    ಕರ್ನಾಟಕ ಸಂಘ ಶಾರ್ಜಾ: ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಅಧಿಕಾರ ಸ್ವೀಕಾರ

    01/07/2026

    ದುಬೈನಲ್ಲಿ ಅದ್ದೂರಿಯಾಗಿ ಜರುಗಿದ ಅಂತರಾಷ್ಟ್ರೀಯ ಜಾನಪದ ಉತ್ಸವ – 25

    12/09/2025
    Leave A Reply Cancel Reply

    ten + twenty =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಎಸ್‌ಐಆ‌ರ್ ಕಾರ್ಯಕ್ಕೆ ಅಡ್ಡಿ, ಜಾತಿ ನಿಂದನೆಯ ದೂರು, ತಂದೆ – ಮಗ ಬಂಧನ
    • ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ವಿಶ್ವ ಕೌಶಲ್ಯ ದಿನಾಚರಣೆ ಹಾಗೂ ಕೃಷಿ ಉದ್ಯಮಿ ತರಬೇತಿ ಉದ್ಘಾಟನೆ
    • ಕತಾರ್‌ನ ಸ್ಥಳೀಯ ಶಾಲೆಗಳಲ್ಲಿ ಕನ್ನಡ ಭಾಷೆ ಅನುಷ್ಠಾನಕ್ಕೆ ಭಾರತೀಯ ರಾಯಭಾರ ಕಚೇರಿಯ ಸಂಪೂರ್ಣ ಆಡಳಿತಾತ್ಮಕ ಬೆಂಬಲ: ಹರೀಶ್ ಪಾಂಡೆ
    • ಸಾಸ್ತಾನ ರೋಟರಿಯ ಅಧ್ಯಕ್ಷೆಯಾಗಿ ಕುಸುಮಾ ಮನೋಜ್, ಕಾರ್ಯದರ್ಶಿಯಾಗಿ ರಾಜಾರಾಮ್ ಐತಾಳ್ ಅಧಿಕಾರ ಸ್ವೀಕಾರ
    • ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ: ನೋಂದಣಿಗೆ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.