Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ವಿಶ್ವ ಕೌಶಲ್ಯ ದಿನಾಚರಣೆ ಹಾಗೂ ಕೃಷಿ ಉದ್ಯಮಿ ತರಬೇತಿ ಉದ್ಘಾಟನೆ
    ಊರ್ಮನೆ ಸಮಾಚಾರ

    ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ವಿಶ್ವ ಕೌಶಲ್ಯ ದಿನಾಚರಣೆ ಹಾಗೂ ಕೃಷಿ ಉದ್ಯಮಿ ತರಬೇತಿ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬ್ರಹ್ಮಾವರ
    : ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ಸೆಟ್) ಸಂಸ್ಥೆ ಬ್ರಹ್ಮಾವರ ವತಿಯಿಂದ ವಿಶ್ವ ಕೌಶಲ್ಯ ದಿನಾಚರಣೆ ಹಾಗೂ ಕೃಷಿ ಉದ್ಯಮಿ ತರಬೇತಿ ಉದ್ಘಾಟನಾ ಸಮಾರಂಭ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮವನ್ನು ಉಡುಪಿ ಲೀಡ್ ಡಿಸ್ಟ್ರಿಕ್ಟ್ ಮ್ಯಾನೇಜರ್ ಹರೀಶ್ ಜಿ. ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಮಾತನಾಡಿ, ಯುವಜನತೆಗೆ ಉದ್ಯೋಗ ಮತ್ತು ಸ್ವಾವಲಂಬಿ ಬದುಕಿಗೆ ಅಗತ್ಯವಾದ ಕೌಶಲ್ಯಗಳನ್ನು ತರಬೇತಿಯ ಮೂಲಕ ನೀಡುವುದು ವಿಶ್ವ ಕೌಶಲ್ಯ ದಿನದ ಪ್ರಮುಖ ಉದ್ದೇಶವಾಗಿದೆ. ಪ್ರತಿ ವರ್ಷ ಜುಲೈ 15ರಂದು ಆಚರಿಸುವ ಈ ದಿನವು ಯುವಕರಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದರು.

    ದೇಶದಲ್ಲಿ ಬಡತನ ನಿರ್ಮೂಲನೆಗೆ ಆರ್ಥಿಕ ಸ್ವಾವಲಂಬನೆ ಅಗತ್ಯವಾಗಿದ್ದು, ಯುವಕರು ಉದ್ಯೋಗ ಅಥವಾ ಸ್ವಂತ ಉದ್ಯಮದಲ್ಲಿ ತೊಡಗಿಸಿಕೊಂಡಾಗ ಮಾತ್ರ ಅದು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ರುಡ್‌ಸೆಟ್‌ ಸಂಸ್ಥೆ ಕೌಶಲ್ಯಾಧಾರಿತ ತರಬೇತಿಗಳನ್ನು ನೀಡಿ ಯುವಕರನ್ನು ಸ್ವ ಉದ್ಯೋಗದತ್ತ ಪ್ರೇರೇಪಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಅವರು ಹೇಳಿದರು. ತರಬೇತಿಯನ್ನು ಸಮರ್ಪಕವಾಗಿ ಬಳಸಿಕೊಂಡು ಸ್ವ ಉದ್ಯೋಗ ಆರಂಭಿಸಿ ದೇಶದ ಆರ್ಥಿಕ ಬೆಳವಣಿಗೆಗೆ ಕೈಜೋಡಿಸುವಂತೆ ಕರೆ ನೀಡಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕ ಡಾ. ಬೊಮ್ಮಯ್ಯ ಎಂ. ಮಾತನಾಡಿ, ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ರೀತಿಯ ಕೌಶಲ್ಯ ಅಡಗಿದ್ದು, ಅದನ್ನು ಗುರುತಿಸಿ ಸೂಕ್ತ ತರಬೇತಿ ಪಡೆದು ಉದ್ಯಮ ಆರಂಭಿಸಿದರೆ ಸ್ವಾವಲಂಬಿ ಜೀವನ ನಡೆಸಲು ಸಾಧ್ಯ ಎಂದು ತಿಳಿಸಿದರು. ಸನ್ಮಾನಿತ ಉದ್ಯಮಿಗಳು ಹಾಗೂ ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

    ಇದೇ ಸಂದರ್ಭದಲ್ಲಿ ರುಡ್‌ಸೆಟ್‌ನಲ್ಲಿ ತರಬೇತಿ ಪಡೆದು ವಿವಿಧ ಕ್ಷೇತ್ರಗಳಲ್ಲಿ ಯಶಸ್ವಿ ಉದ್ಯಮಿಗಳಾಗಿ ಗುರುತಿಸಿಕೊಂಡವರನ್ನು ಸನ್ಮಾನಿಸಿ ಗೌರವಿಸಲಾಯಿತು.

    Click here

    Click here

    Click here

    Call us

    Call us

    ರುಡ್‌ಸೆಟ್‌ನಲ್ಲಿ ತರಬೇತಿ ಪಡೆದು ಯಶಸ್ವಿ ಉದ್ಯಮಿಗಳಾಗಿ ಗುರುತಿಸಿಕೊಂಡ ಪೇತ್ರಿಯ ಜೆ & ಹೆಚ್ ಫಾರ್ಮ್ನ ಮಾಲಕರಾದ ಹರ್ಷ ಮತ್ತು ಜಾಹ್ನವಿ, ಬಜಗೋಳಿಯ ಸಕಲಂ ಫುಡ್ ಪ್ರಾಡಕ್ಟ್ಸ್‌ನ ಮಾಲಕರಾದ ಪೂರ್ಣೇಶ್, ಉಪ್ಪೂರಿನ ವರ ಪ್ರಾಡಕ್ಟ್ಸ್‌ನ ಮಾಲಕರಾದ ಲಲಿತ ಹಾಗೂ ಬಾರ್ಕೂರಿನ ಶ್ಯಾಡೋ ಡಿಸೈನ್ನ ಮಾಲಕರಾದ ದೀಪ್ತಿ ಅವರನ್ನು ಸನ್ಮಾನಿಸಲಾಯಿತು. ಸನ್ಮಾನಿತರು ತಮ್ಮ ಯಶೋಗಾಥೆ ಮತ್ತು ಅನುಭವಗಳನ್ನು ಹಂಚಿಕೊಂಡರು.ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿಗಳು, ಅತಿಥಿ ಉಪನ್ಯಾಸಕರು, ಅಕೌಂಟಿಂಗ್, ಎಂಬ್ರಾಯ್ಡರಿ, ಫೋಟೋಗ್ರಫಿ ಹಾಗೂ ಕೃಷಿ ಉದ್ಯಮಿ ತರಬೇತಿಯ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

    ಉಪನ್ಯಾಸಕಿ ಚೈತ್ರ ಕೆ. ಕಾರ್ಯಕ್ರಮ ನಿರೂಪಿಸಿ, ಹಿರಿಯ ಉಪನ್ಯಾಸಕ ಸಂತೋಷ್ ಶೆಟ್ಟಿ ಸ್ವಾಗತಿಸಿ, ಕಚೇರಿ ಸಹಾಯಕ ಶಾಂತಪ್ಪ ವಂದಿಸಿದರು.   

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಎಸ್‌ಐಆ‌ರ್ ಕಾರ್ಯಕ್ಕೆ ಅಡ್ಡಿ, ಜಾತಿ ನಿಂದನೆಯ ದೂರು, ತಂದೆ – ಮಗ ಬಂಧನ

    17/07/2026

    ಸಾಸ್ತಾನ ರೋಟರಿಯ ಅಧ್ಯಕ್ಷೆಯಾಗಿ ಕುಸುಮಾ ಮನೋಜ್, ಕಾರ್ಯದರ್ಶಿಯಾಗಿ ರಾಜಾರಾಮ್ ಐತಾಳ್ ಅಧಿಕಾರ ಸ್ವೀಕಾರ

    17/07/2026

    ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರ ನೇತೃತ್ವದಲ್ಲಿ ಜನ ಸಂಪರ್ಕ ಸಭೆ

    17/07/2026
    Leave A Reply Cancel Reply

    8 − seven =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಎಸ್‌ಐಆ‌ರ್ ಕಾರ್ಯಕ್ಕೆ ಅಡ್ಡಿ, ಜಾತಿ ನಿಂದನೆಯ ದೂರು, ತಂದೆ – ಮಗ ಬಂಧನ
    • ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ವಿಶ್ವ ಕೌಶಲ್ಯ ದಿನಾಚರಣೆ ಹಾಗೂ ಕೃಷಿ ಉದ್ಯಮಿ ತರಬೇತಿ ಉದ್ಘಾಟನೆ
    • ಕತಾರ್‌ನ ಸ್ಥಳೀಯ ಶಾಲೆಗಳಲ್ಲಿ ಕನ್ನಡ ಭಾಷೆ ಅನುಷ್ಠಾನಕ್ಕೆ ಭಾರತೀಯ ರಾಯಭಾರ ಕಚೇರಿಯ ಸಂಪೂರ್ಣ ಆಡಳಿತಾತ್ಮಕ ಬೆಂಬಲ: ಹರೀಶ್ ಪಾಂಡೆ
    • ಸಾಸ್ತಾನ ರೋಟರಿಯ ಅಧ್ಯಕ್ಷೆಯಾಗಿ ಕುಸುಮಾ ಮನೋಜ್, ಕಾರ್ಯದರ್ಶಿಯಾಗಿ ರಾಜಾರಾಮ್ ಐತಾಳ್ ಅಧಿಕಾರ ಸ್ವೀಕಾರ
    • ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ: ನೋಂದಣಿಗೆ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.