ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವಿಸುವ ಗುಣ ಮತ್ತು ಸಂಸ್ಕಾರವನ್ನು ರೂಡಿಸಿಕೊಳ್ಳಬೇಕು ಎಂದು ವಿಜಯ ಕರ್ನಾಟಕ ಪತ್ರಿಕೆಯ ಪತ್ರಕರ್ತ ಜಾನ್ ಡಿಸೋಜ ಹೇಳಿದರು
ಅವರು ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಲಲಿತಾ ಕಲಾ ಸಂಘ ಉದ್ಘಾಟನೆ ಮತ್ತು “ಕಲಾ ಕೌಸ್ತುಭ” ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ನುಡಿಗಳನ್ನಾಡಿದರು. ಇತ್ತೀಚೆಗೆ ವಿದ್ಯಾರ್ಥಿಗಳಲ್ಲಿ ಅತಿಯಾಗಿ ಮೊಬೈಲ್ ಬಳಕೆಯ ಪರಿಣಾಮವಾಗಿ ಅವರು ಸಮಯವನ್ನು ಅಲ್ಲೇ ವ್ಯಯ ಮಾಡುತ್ತಾರೆ. ಆದರೆ ನಿಮ್ಮ ಒಳ್ಳೆಯ ವಿಚಾರಗಳಿಗೆ ಮಾತ್ರ ಮೊಬೈಲ್ ಬಳಕೆ ಇರಲಿ. ಭವಿಷ್ಯದಲ್ಲಿ ಉತ್ತಮ ವ್ಯಕ್ತಿತ್ವವಿರುವ ವ್ಯಕ್ತಿಗಳಾಗಿ ಎಂದು ಕರೆ ನೀಡಿದರು.
ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾದ ಕೆ. ಶಾಂತರಾಮ್ ಪ್ರಭು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿ ನಿವೇದಿತಾ ಪ್ರೌಢಶಾಲೆ ಬಸ್ರೂರು ಇಲ್ಲಿನ ಸಹ ಶಿಕ್ಷಕರಾದ ಪ್ರದೀಪ್ ಶೆಟ್ಟಿ ಆಗಮಿಸಿದ್ದರು.
ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಶುಭಕರ ಆಚಾರಿ ಗೌರವ ಉಪಸ್ಥಿತರಾಗಿದ್ದರು. ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ. ಸರೋಜಾ ಎಂ. ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಲಲಿತ ಕಲಾ ಸಂಯೋಜಕಿ ರೇಣುಕಾ ಉಪಸ್ಥಿತರಿದ್ದರು.
ಅತ್ಯಂತ ಕಡಿಮೆ ಸಮಯದಲ್ಲಿ ಅತ್ಯಂತ ಹೆಚ್ಚು ಬಲೂನ್ ಗಳನ್ನು ಬ್ಲಾಸ್ಟ್ ಮಾಡಿ ವಿಶ್ವ ದಾಖಲೆ ಗೈದ ಪ್ರತಿಭಾನ್ವಿತ ವಿದ್ಯಾರ್ಥಿನಿ ಅನ್ವಿತಾ ಎಸ್. ನಾಯಕ್ ಇವರನ್ನು ಗುರುತಿಸಿ ಪ್ರೋತ್ಸಾಹಿಸಲಾಯಿತು. ವಿದ್ಯಾರ್ಥಿನಿ ವೈಷ್ಣವಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ ಕಾರ್ಯಕ್ರಮ ನಿರೂಪಿಸಿದರು. ವರ್ಷ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗ ವಂದನಾರ್ಪಣೆ ಗೈದರು.
















