Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಪದಗ್ರಹಣ ಸಮಾರಂಭ
    ಊರ್ಮನೆ ಸಮಾಚಾರ

    ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಪದಗ್ರಹಣ ಸಮಾರಂಭ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ನೂತನ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭವು ಅದ್ದೂರಿಯಾಗಿ ನಡೆಯಿತು.

    Click Here

    Call us

    Click Here

    ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಹೆಮ್ಮಾಡಿಯ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಜಗದೀಶ ಶೆಟ್ಟಿ ಅವರು ವಿದ್ಯಾರ್ಥಿ ನಾಯಕರುಗಳನ್ನುದ್ದೇಶಿಸಿ ಮಾತನಾಡಿ, “ವಿದ್ಯಾರ್ಥಿಗಳಿಗೆ ಪ್ರಾಢಶಾಲೆಯ ಹಂತದಲ್ಲೇ ನಾಯಕತ್ವದ ಜವಾಬ್ದಾರಿಯನ್ನು ವಹಿಸುವ ಮೂಲಕ ಅವರಲ್ಲಿ ವಿವಿಧ ಕೌಶಲ್ಯಗಳನ್ನು ಉತ್ತೇಜಿಸಲು ಅನುಕೂಲವಾಗುತ್ತದೆ. ಶಿಸ್ತು, ಸಹಕಾರ, ತಾಳ್ಮೆ, ಪರೋಪಕಾರದ ಗುಣಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಲು ಇದು ಅತ್ಯುತ್ತಮ ಅವಕಾಶವಾಗಿದೆ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳಾಗಿರುವುದರಿಂದ ಅವರಿಗೆ ಕಲಿಕೆಯ ಹೆಚ್ಚಿನ ಅವಕಾಶಗಳನ್ನು ಶಾಲೆ ಒದಗಿಸಬೇಕು” ಎಂದು ತಿಳಿಸಿದರು.

    ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರು ಹಾಗೂ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರು ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ “ನಮ್ಮ ದೇಶವು ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ವಿದ್ಯಾರ್ಥಿಗಳಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳ ಬಗ್ಗೆ ಜಾಗೃತಿಯನ್ನು ಮೂಡಿಸುವುದು ನಮ್ಮ ಧ್ಯೇಯವಾಗಿದೆ. ಚುನಾವಣಾ ವಿಧಾನದ ಮೂಲಕ ವಿದ್ಯಾರ್ಥಿ ನಾಯಕರುಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ನಾಯಕರಲ್ಲಿ ಇರಬೇಕಾದ ಗುಣಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಗಿದೆ. ವಿದ್ಯಾರ್ಥಿಗಳು ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳದೆ, ಅದನ್ನು ಸೇವಾ ಮನೋಭಾವದಿಂದ ನಿರ್ವಹಿಸಬೇಕು” ಎಂದು ಕರೆಕೊಟ್ಟರು.

    9ನೇ ತರಗತಿಯ ಪ್ರಥಮ್ ವಿದ್ಯಾರ್ಥಿ ನಾಯಕನಾಗಿ, 9ನೇ ತರಗತಿಯ ನವ್ಯಾ ಆಚಾರ್ಯ ವಿದ್ಯಾರ್ಥಿ ನಾಯಕಿಯಾಗಿ, 9ನೇ ತರಗತಿಯ ಆರ್ಯನ್ ಕ್ರೀಡಾ ಮಂತ್ರಿಯಾಗಿ, 9ನೇ ತರಗತಿಯ ಪ್ರೀತಮ್ ಶಿಸ್ತು ಮತ್ತು ಸ್ವಚ್ಛತಾ ಮಂತ್ರಿಯಾಗಿ, 8ನೇ ತರಗತಿಯ ಕುಮಾರಿ ಉತ್ಸವಿ ಸಾಂಸ್ಕೃತಿಕ ಮಂತ್ರಿಯಾಗಿ, 8ನೇ ತರಗತಿಯ ಸಚೀತ್ ಆಹಾರ ನಿರ್ವಹಣಾ ಮಂತ್ರಿಯಾಗಿ ಆಯ್ಕೆಗೊಂಡರು.

    ಶಾಲಾ ಸಂಯೋಜಕರಾದ ಸುಬ್ರಮಣ್ಯ ಮಾರಾಟಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಜನತಾ ಸಮೂಹ ಸಂಸ್ಥೆಗಳ ಕಾರ್ಯದರ್ಶಿಗಳಾದ ಶ್ಯಾಮಲಾ ಗಣೇಶ ಮೊಗವೀರ  ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಸ್ವಾಗತಿಸಿ, ಶಾಲಾ ಸಾಂಸ್ಕೃತಿಕ ವಿಭಾಗದ ಸಂಯೋಜಕರಾದ ರಾಘವೇಂದ್ರ ದುರ್ಗಾ ಬಿಲ್ಲವ ವಂದಿಸಿದರು. ಸಹಶಿಕ್ಷಕಿ ವನಿತಾ ಕಾರ್ಯಕ್ರಮ ನಿರ್ವಹಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನೀಟ್ ಫಲಿತಾಂಶ: ಆಳ್ವಾಸ್ ವಿದ್ಯಾರ್ಥಿಗಳಿಂದ ಅಭೂತಪೂರ್ವ ಸಾಧನೆ

    18/07/2026

    ನೀಟ್ ಫಲಿತಾಂಶ: ಅಗ್ರಸ್ಥಾನದಲ್ಲಿ ಜನತಾ ಪಿಯು ಕಾಲೇಜ್ ಹೆಮ್ಮಾಡಿ

    18/07/2026

    ನೀಟ್ ಫಲಿತಾಂಶ: ಸುಜ್ಞಾನ ಪಿಯು ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ

    18/07/2026
    Leave A Reply Cancel Reply

    fifteen + eight =

    Call us

    Click Here

    Call us

    Call us

    Call us
    Highest Viewed Recently
    • ನೀಟ್ ಫಲಿತಾಂಶ: ಆಳ್ವಾಸ್ ವಿದ್ಯಾರ್ಥಿಗಳಿಂದ ಅಭೂತಪೂರ್ವ ಸಾಧನೆ
    • ನೀಟ್ ಫಲಿತಾಂಶ: ಅಗ್ರಸ್ಥಾನದಲ್ಲಿ ಜನತಾ ಪಿಯು ಕಾಲೇಜ್ ಹೆಮ್ಮಾಡಿ
    • ನೀಟ್ ಫಲಿತಾಂಶ: ಸುಜ್ಞಾನ ಪಿಯು ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ
    • ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಪದಗ್ರಹಣ ಸಮಾರಂಭ
    • ರೈಲ್ವೆ ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಲು ಲಿಫ್ಟ್ ವ್ಯವಸ್ಥೆ ಜಾರಿ: ಕೋಟ ಶ್ರೀನಿವಾಸ ಪೂಜಾರಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.