Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನೀಟ್ ಫಲಿತಾಂಶ: ಆಳ್ವಾಸ್ ವಿದ್ಯಾರ್ಥಿಗಳಿಂದ ಅಭೂತಪೂರ್ವ ಸಾಧನೆ
    alvas nudisiri

    ನೀಟ್ ಫಲಿತಾಂಶ: ಆಳ್ವಾಸ್ ವಿದ್ಯಾರ್ಥಿಗಳಿಂದ ಅಭೂತಪೂರ್ವ ಸಾಧನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು NEET–2026 ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಒಂದೇ ಕ್ಯಾಂಪಸ್‌ನ ಕ್ಲಾಸ್‌ರೂಮ್ ವ್ಯವಸ್ಥೆಯಲ್ಲಿ ವ್ಯಾಸಂಗ ಮಾಡಿದ 21 ವಿದ್ಯಾರ್ಥಿಗಳು 99 ಪರ್ಸಂಟೈಲ್‌ಗಿಂತ ಅಧಿಕ ಅಂಕಗಳನ್ನು ಗಳಿಸುವ ಮೂಲಕ ಸಂಸ್ಥೆಗೆ ಕೀರ್ತಿತಂದಿದ್ದಾರೆ.

    Click Here

    Call us

    Click Here

    ಆಳ್ವಾಸ್‌ನ ಸೂರ್ಯಕಾಂತ್ ಪಾಟೀಲ್ ಕೆಟಗರಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ 97ನೇ ರ‍್ಯಾಂಕ್, ಚೇತನ್ ಯರನಾಳ್ 239ನೇ ರ‍್ಯಾಂಕ್, ಕ್ಲಾರೆನ್ಸ್ ಡಿ’ಸೋಜಾ 724 ರ‍್ಯಾಂಕ್ ಹಾಗೂ ದೀಕ್ಷಿತಾ ಕೆ.ಎಸ್ 951 ರ‍್ಯಾಂಕ್‌ಗಳಿಸಿ ಸಾಧನೆ ಮೆರೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ| ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಆಳ್ವಾಸ್‌ನ 10 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕಗಳನ್ನು, 161 ವಿದ್ಯಾರ್ಥಿಗಳು 500ಕ್ಕೂ ಅಧಿಕ ಅಂಕಗಳನ್ನು ಪಡೆದಿದ್ದಾರೆ. ಒಟ್ಟು 467 ವಿದ್ಯಾರ್ಥಿಗಳು 450ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ್ದು, ಈ ಪೈಕಿ 450ಕ್ಕೂ ಅಧಿಕ ವಿದ್ಯಾರ್ಥಿಗಳು ಸರಕಾರಿ ಕೋಟಾದಡಿ ಎಂಬಿಬಿಎಸ್ ಸೀಟು ಪಡೆಯುವ ಸಾಧ್ಯತೆ ಇದೆ.

    ಅಖಿಲ ಭಾರತ ಮಟ್ಟದ ವೈದ್ಯಕೀಯ ರ‍್ಯಾಂಕ್‌ನಲ್ಲಿ ಆಳ್ವಾಸ್ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮೆರೆದಿದ್ದಾರೆ. ಕೆಟಗರಿ ವಿಭಾಗದಲ್ಲಿ ಟಾಪ್ 500 ರ‍್ಯಾಂಕ್‌ನ ಒಳಗೆ 03 ವಿದ್ಯಾರ್ಥಿಗಳು, ಟಾಪ್ 1000 ರ‍್ಯಾಂಕ್‌ನ ಒಳಗೆ 14 ವಿದ್ಯಾರ್ಥಿಗಳು, ಟಾಪ್ 2000 ರ‍್ಯಾಂಕ್‌ನ ಒಳಗೆ 26 ವಿದ್ಯಾರ್ಥಿಗಳು ಹಾಗೂ ಟಾಪ್ 5000 ರ‍್ಯಾಂಕ್‌ನ ಒಳಗೆ 72 ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದಾರೆ.

    ಸೂರ್ಯಕಾಂತ್ ಪಾಟೀಲ್–653, ಕ್ಲಾರೆನ್ಸ್ ಡಿ’ಸೋಜ–612, ವೈಭವಿ ಎಮ್-611, ಆಯುಶ್ ಕಲ್ಗುಡಿ- 611, ಪರಿಣಿತ್ ಗೌಡ ಬಿ.ಎಲ್- 605, ಲೋಕೆಶ್ ಬಿ.ಎನ್- 605, ದೀಕ್ಷಿತ ಕೆ.ಎಸ್ 604, ಬಶೀರ್ ಅಹಮ್ಮದ್ – 601, ಸುಹರ್ಷ ಎಚ್.ಎಚ್- 600 ಹಾಗೂ ಮಲ್ಲಿಕಾರ್ಜುನ ಎಸ್.ಎಚ್-600 ಅಂಕಗಳನ್ನು ಪಡೆದಿದ್ದಾರೆ.

    ವಿದ್ಯಾರ್ಥಿಗಳಾದ ಸೂರ್ಯಕಾಂತ್ ಪಾಟೀಲ್, ಕ್ಲಾರೆನ್ಸ್ ಡಿ’ಸೋಜ, ವೈಭವಿ ಎಮ್, ಆಯುಶ್ ಕಲ್ಗುಡಿ, ಪರಿಣಿತ್ ಗೌಡ ಬಿ.ಎಲ್, ಲೋಕೆಶ್ ಬಿ.ಎನ್, ದೀಕ್ಷಿತ ಕೆ.ಎಸ್, ಸುಹರ್ಷ ಎಚ್. ಎಚ್, ಮಲ್ಲಿಕಾರ್ಜುನ್ ಎಸ್.ಎಚ್, ಕೀರ್ತನ ವೈ.ಸಿ, ರಾಹುಲ್ ಜಂಬಗಿ, ಸಿದ್ಧರೂಢ ಶ್ರೀಶೈಲ, ತ್ವಿಶಾ ಎಸ್ ಭಂಡಾರಿ, ಕುಶಲ್ ಗೌಡ ಎಮ್.ಎಸ್, ಮಹಮ್ಮದ್ ಅಶೀಮ್, ಸೃಜನ್ ವಿ, ಗೋಕುಲ್ ಎಸ್, ಸಂಕೇತ್ ಎ.ಜಿ, ಯಶಸ್ವಿನಿ ವೈ.ಇ, ಬಶೀರ್ ಅಹಮ್ಮದ್, ದರ್ಶನ್ ಕಲ್ಲಯ್ಯ ಪೂಜಾರ್ – ಈ ವಿದ್ಯಾರ್ಥಿಗಳು 99 ಪರ್ಸಂಟೈಲ್‌ಗಿಂತ ಅಧಿಕ ಅಂಕ ಪಡೆದಿದ್ದಾರೆ.

    ಜನರಲ್ ಕೆಟಗರಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ, ಹೈದ್ರಾಬಾದ್ ಕರ್ನಾಟಕ, ಗ್ರಾಮೀಣ ಕೋಟಾ, ಕನ್ನಡ ಮಾಧ್ಯಮ, ವಿಶಿಷ್ಟ ಚೇತನರು ಹಾಗೂ ಆರ್ಥಿಕ ಹಿಂದುಳಿದ ವರ್ಗದ ಕೋಟಾದಲ್ಲಿ ಸುಮಾರು 450ಕ್ಕೂ ಅಧಿಕ ವಿದ್ಯಾರ್ಥಿಗಳು ಸರಕಾರಿ ಕೋಟಾದಲ್ಲಿ ಎಂಬಿಬಿಎಸ್ ಸೀಟು ಪಡೆಯುವ ನಿರೀಕ್ಷೆ ಇದೆ.

    ಈ ಸಂದರ್ಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ| ಎಂ. ಮೋಹನ ಆಳ್ವ, ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಎಂ. ಸದಾಕತ್ ಹಾಗೂ ಆಡಳಿತಾಧಿಕಾರಿ ಪ್ರದೀಪ ಕುಮಾರ್ ಎಂ. ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನೀಟ್ ಫಲಿತಾಂಶ: ಅಗ್ರಸ್ಥಾನದಲ್ಲಿ ಜನತಾ ಪಿಯು ಕಾಲೇಜ್ ಹೆಮ್ಮಾಡಿ

    18/07/2026

    ನೀಟ್ ಫಲಿತಾಂಶ: ಸುಜ್ಞಾನ ಪಿಯು ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ

    18/07/2026

    ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಪದಗ್ರಹಣ ಸಮಾರಂಭ

    18/07/2026
    Leave A Reply Cancel Reply

    eight − 2 =

    Call us

    Click Here

    Call us

    Call us

    Call us
    Highest Viewed Recently
    • ಬೈಂದೂರು ಸೇವಾ ಸಂಗಮ ಶಿಶು ಮಂದಿರದ ಮಕ್ಕಳಿಗೆ ಆಟಿಕೆ ಹಾಗೂ ಕಲಿಕಾ ಸಾಮಗ್ರಿ ವಿತರಣೆ
    • ಕಲ್ಮಾಡಿ ಅಂಗನವಾಡಿ ಎಲ್‌ಕೆಜಿ, ಯುಕೆಜಿ ಉದ್ಘಾಟನೆ
    • ನೀಟ್ ಫಲಿತಾಂಶ: ಆಳ್ವಾಸ್ ವಿದ್ಯಾರ್ಥಿಗಳಿಂದ ಅಭೂತಪೂರ್ವ ಸಾಧನೆ
    • ನೀಟ್ ಫಲಿತಾಂಶ: ಅಗ್ರಸ್ಥಾನದಲ್ಲಿ ಜನತಾ ಪಿಯು ಕಾಲೇಜ್ ಹೆಮ್ಮಾಡಿ
    • ನೀಟ್ ಫಲಿತಾಂಶ: ಸುಜ್ಞಾನ ಪಿಯು ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.