ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಸಿಎ / ಸಿಎಸ್ ಕಾರ್ಯಾಗಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ತ್ರಿಷಾ ಕಾಲೇಜಿನ ಸಂಸ್ಥಾಪಕರು ಹಾಗೂ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಆಗಿರುವ CA ಗೋಪಾಲ ಕೃಷ್ಣ ಭಟ್ ವಿದ್ಯಾರ್ಥಿಗಳಿಗೆ CA/CS ಕೋರ್ಸ್‌ನ ಹಂತಗಳು, ಅವಧಿ ಮತ್ತು ಅವಕಾಶಗಳನ್ನು ಕುರಿತು ಸಂಪೂರ್ಣ ಮಾಹಿತಿ ನೀಡಿ, CA / CS ಹೊರತುಪಡಿಸಿ ಪಿಯುಸಿ ನಂತರದ ವಿವಿಧ ಕೋರ್ಸ್ ಗಳ ಕುರಿತು ಸವಿವರವಾಗಿ ಮಾಹಿತಿ ನೀಡಿದರು.
ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅರ್ಥಶಾಸ್ತ್ರ ಉಪನ್ಯಾಸಕಿ ಶಿವರಂಜನಿ ಸ್ವಾಗತಿಸಿ, ವಾಣಿಜ್ಯ ಉಪನ್ಯಾಸಕಿಯರಾದ ನಿಧಿ ವಂದಿಸಿ, ವಿನಯಾ ಪರಿಚಯಿಸಿ, ವಾಣಿಜ್ಯ ಉಪನ್ಯಾಸಕ ನಾಗೇಶ್ ಕಾರ್ಯಕ್ರಮ ನಿರೂಪಿಸಿದರು.
















