Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬ್ರಹ್ಮಾವರ ರುಡ್‌ಸೆಟ್‌ ಸಂಸ್ಥೆಯಲ್ಲಿ ರಕ್ತದಾನ ಶಿಬಿರ
    ಊರ್ಮನೆ ಸಮಾಚಾರ

    ಬ್ರಹ್ಮಾವರ ರುಡ್‌ಸೆಟ್‌ ಸಂಸ್ಥೆಯಲ್ಲಿ ರಕ್ತದಾನ ಶಿಬಿರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಲ್ಲಿ ರುಡ್‌ಸೆಟ್ ಆಸರೆ ಸಂಘಟನೆ, ಮೊಗವೀರ ಯುವ ಸಂಘಟನೆ, ಉಡುಪಿ ಜಿಲ್ಲೆ ಉಪ್ಪೂರು ಘಟಕ ಮತ್ತು ವಿವಿಧ ಸಂಘ-ಸಂಸ್ಥೆಗಳ ಅಡಿಯಲ್ಲಿ ಕೆ.ಎಂ.ಸಿ ರಕ್ತನಿಧಿ, ಮಣಿಪಾಲ ಅವರ ಸಾರಥ್ಯದಲ್ಲಿ ಸೋಮವಾರದಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಸಂಸ್ಥೆಯ ಆವರಣದಲ್ಲಿ ನಡೆಸಲಾಯಿತು. 

    Click Here

    Call us

    Click Here

    ಮಣಿಪಾಲ ಕೆನರಾ ಬ್ಯಾಂಕ್ ವೃತ್ತ ಮಹಾಪ್ರಭಂದಕರಾದ ಗಂಗಾಧರ ಎಚ್.ಕೆ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಕ್ತದಾನದ ಮಹತ್ವವನ್ನು ಮತ್ತು ರಕ್ತದಾನದಿಂದ ನಾವು ಸಮಾಜಕ್ಕೆ ಒಂದು ಕೊಡುಗೆ ನೀಡಿದ ಹಾಗೆ ಎಂದು ತಿಳಿಸಿದರು. ಹಾಗೂ ತಾವುಗಳು ಕೂಡ ಸುಮಾರು 53 ಬಾರಿ ರಕ್ತದಾನ ಮಾಡಿದ್ದಾರೆ ಎಂದು ಹೆಮ್ಮೆಯಿಂದ ತಿಳಿಸಿದರು. ಮತ್ತು ಪ್ರತಿಯೊಬ್ಬರು ಕೂಡ ರಕ್ತದಾನ ಮಾಡಿ ಎಂದು ಶುಭ ಹಾರೈಸಿದರು.

    ಇನ್ನೋರ್ವ ಅತಿಥಿಗಳಾಗಿ ಆಗಮಿಸಿದ್ದ ಉಡುಪಿ ಮೊಗವೀರ ಯುವ ಸಂಘಟನೆ, ಕೊರವಡಿ ಜಿಲ್ಲಾಧ್ಯಕ್ಷ ರವೀಶ್ ಎಸ್. ಮಾತನಾಡಿ, ರುಡ್‌ಸೆಟ್ ಸಂಸ್ಥೆಯ ಆವರಣದಲ್ಲಿ ನಮ್ಮೆಲ್ಲ ಸಂಘಟನೆಗಳು ಕೈ ಜೋಡಿಸಿ ಈ ಒಂದು ಅರ್ಥಪೂರ್ಣವಾದ ಕಾರ್ಯಕ್ರಮವನ್ನು ಸಂಸ್ಥೆಯ ಶಿಭಿರಾರ್ಥಿಗಳು ರಕ್ತದಾನ ಮಾಡುವುದರ ಮೂಲಕ ರಕ್ತದಾನ ಮಹಾದಾನ ಎಂಬ ಮಾತಿಗೆ ಅರ್ಥವನ್ನು ನೀಡಿದ್ದೀರಿ ಎಂದು ಶುಭಕೊರಿದರು.

    ಅದೇ ರೀತಿಯಲ್ಲಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಡಾ.ಬೊಮ್ಮಯ್ಯ ಎಂ. ಅವರು ಮಾತನಾಡಿ, ಪ್ರತಿಯೊಬ್ಬ ಯೋಧನು ದೇಶದ ಗಡಿಯನ್ನು ಕಾಯುವ ಶಕ್ತಿಯಾಗಿದ್ದರೆ, ಪ್ರತಿಯೊಬ್ಬ ರಕ್ತದಾನಿಯು ಆರೋಗ್ಯಕರ ಸಮಾಜವನ್ನು ನಿರ್ಮೀಸುವ ಯೋಧರಾಗಿದ್ದಾರೆ ಎಂದು ತಿಳಿಸಿದರು. ಮತ್ತು ನಮ್ಮ ರುಡ್‌ಸೆಟ್ ಸಂಸ್ಥೆಯಲ್ಲಿ ಈ ಒಂದು ರಕ್ತದಾನ ಶಿಬಿರದಲ್ಲಿ ಸಾಕಷ್ಟು ಹಳೆಯ ಮತ್ತು ಪ್ರಸ್ತುತ ತರಬೇತಿ ಪಡೆಯುತ್ತಿರುವ ಶಿಭಿರಾರ್ಥಿಗಳು ರಕ್ತದಾನವನ್ನು ಮಾಡಿ ಶಿಬಿರವನ್ನು ಯಶಸ್ವಿಗೊಳಿಸಿದ ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸಿದರು.

    ಉಡುಪಿ ಕೆನರಾ ಬ್ಯಾಂಕ್ ಪ್ರಾದೇಶಿಕ ಕಛೇರಿ-2 ಸಹಾಯಕ ಮಹಾಪ್ರಬಂಧಕರಾದ ಟಿ.ಎಸ್.ಎನ್ ಪೂರ್ಣಾನಂದ ಅವರು ಕೋವಿಡ್-19 ಸಮಯದಲ್ಲಿ ಆದ ಘಟನೆಯನ್ನು ಸ್ವ-ಅನುಭವದ ಆಧಾರದಲ್ಲಿ ರಕ್ತದಾನದ ಮಹತ್ವವನ್ನು ತಿಳಿಸಿದರು.

    Click here

    Click here

    Click here

    Call us

    Call us

    ಇನ್ನೂಳಿದಂತೆ ಉಡುಪಿ ಜಿಲ್ಲಾ ಬ್ಯಾಂಕ್‌ಗಳ ಮಾರ್ಗದರ್ಶಿ ಕಛೇರಿ ಮುಖ್ಯ ಪ್ರಬಂಧಕರಾದ ಹರೀಶ ಜಿ. ಮೊಗವೀರ ಯುವ ಸಂಘಟನೆ ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಜಯಂತ್ ಅಮೀನ್ ಕೋಡಿ, ಮೊಗವೀರ ಯುವ ಸಂಘಟನೆ ಅಧ್ಯಕ್ಷ  ಶರತ್ ಕುಂದರ್ ಬ್ರಹ್ಮಾವರ ರುಡ್‌ಸೆಟ್ ಆಸರೆ ಸಂಘಟನೆ ಅಧ್ಯಕ್ಷ ಶ್ರೀ ರಾಮಚಂದ್ರ ಆಚಾರ್, ಗೌರವಾಧ್ಯಕ್ಷ ರಾಜೇಶ್ ದೇವಾಡಿಗ, ಮಣಿಪಾಲ.ಎಂ.ಸಿ ರಕ್ತನಿಧಿ ಡಾ. ಶಮ್ಮಿ ಶರ್ಮಾ ಎಲ್ಲ ಅತಿಥಿಗಳು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

    ಈ ಸಂದರ್ಭದಲ್ಲಿ ರುಡ್‌ಸೆಟ್ ಆಸರೆ ಸಂಘಟನೆ ಮಾಜಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳಾ ಕೆ.ಸಿ ಅಮೀನ್ ಅವರು ಕಾರ್ಯಕ್ರಮದ ಪ್ರಸ್ತಾವಣೆಯನ್ನು ಸಲ್ಲಿಸಿದರು. ಚೈತ್ರ ಕೆ. ಅವರು ಪ್ರಮಾಣ ಪತ್ರ ವಿತರಣೆಯನ್ನು ತಿಳಿಸಿದರು. ಬ್ರಹ್ಮಾವರ ರುಡ್‌ಸೆಟ್ ಆಸರೆ ಸಂಘಟನೆ ಖಜಾಂಜಿ ವೆಂಕಟೇಶ್ ನಾಯಕ್ ನಿರೂಪಿಸಿ, ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆ ಉಪನ್ಯಾಸಕ ಸಂತೋಷ ಶೆಟ್ಟಿ ಸ್ವಾಗತಿಸಿ, ಕಛೇರಿ ಸಹಾಯಕರಾದ ಶಾಂತಪ್ಪ ಎನ್. ಧನ್ಯವಾದವನ್ನು ತಿಳಿಸಿದರು.

    ಈ ಒಂದು ಕಾರ್ಯಕ್ರಮದಲ್ಲಿ ರುಡ್‌ಸೆಟ್ ಆಸರೆ ಸಂಘಟನೆ, ಬ್ರಹ್ಮಾವರ, ಮೊಗವೀರ ಯುವ ಸಂಘಟನೆ ಉಪ್ಪೂರು ಘಟಕ ಮತ್ತು ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸರ್ವಸದಸ್ಯರು, ಕೆ.ಎಂ.ಸಿ ರಕ್ತನಿಧಿ, ಮಣಿಪಾಲ ಇದರ ಡಾಕ್ಟರ್‌ಗಳು ಮತ್ತು ರುಡ್‌ಸೆಟ್‌ಯ ಸಿಬ್ಬಂದಿಗಳು, ಅತಿಥಿ ಉಪನ್ಯಾಸಕರು ಹಾಗೂ ಸಂಸ್ಥೆಯ ಪ್ರಸ್ತುತ ಮತ್ತು ಹಳೆಯ ಸಿಬಿರಾರ್ಥಿಗಳು ಇದ್ದರು.                   

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ನುಡಿ ನಮನ ಕಾರ್ಯಕ್ರಮ

    21/07/2026

    ಉಡುಪಿ ಜಿಲ್ಲಾ ಪ.ಪೂ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ – ಅಧ್ಯಕ್ಷರಾಗಿ ಸುಕೇಶ ಶೆಟ್ಟಿ ಹೊಸಮಠ ಆಯ್ಕೆ

    21/07/2026

    ಜುಲೈ 25ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷಸಂಕ್ರಾಂತಿ – ಪೂರ್ಣರಾತ್ರಿ ತಾಳಮದ್ದಳೆ

    21/07/2026
    Leave A Reply Cancel Reply

    three × 2 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ನುಡಿ ನಮನ ಕಾರ್ಯಕ್ರಮ
    • ಉಡುಪಿ ಜಿಲ್ಲಾ ಪ.ಪೂ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ – ಅಧ್ಯಕ್ಷರಾಗಿ ಸುಕೇಶ ಶೆಟ್ಟಿ ಹೊಸಮಠ ಆಯ್ಕೆ
    • ಜುಲೈ 25ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷಸಂಕ್ರಾಂತಿ – ಪೂರ್ಣರಾತ್ರಿ ತಾಳಮದ್ದಳೆ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ: ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ
    • ಬೈಂದೂರು ತಾಲೂಕು ಆಸ್ಪತ್ರೆ ಮಂಜೂರಾತಿಗಾಗಿ ಆರೋಗ್ಯ ಸಚಿವರಿಗೆ ಮನವಿ ಮಾಡಿದ ಶಾಸಕರು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.