ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಎಸ್.ಸಿ ಮತ್ತು ಬಿ.ಸಿ.ಎ ವಿದ್ಯಾರ್ಥಿಗಳಿಗೆ ಪರಿಚಯ ಕಾರ್ಯಕ್ರಮ ಸೋಮವಾರ ನಡೆಯಿತು.
ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾದ ಕೆ. ಶಾಂತಾರಾಮ ಪ್ರಭು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಯು.ಎಸ್.ಶೆಣೈ ಮಾತನಾಡಿ, ಕುಂದಾಪುರ ನೆಲೆ ಮತ್ತು ಸಂಸ್ಕೃತಿ ಭಾರತ ದೇಶದಲ್ಲಿಯೇ ವಿಶಿಷ್ಟ ಎನಿಸಿಕೊಂಡಿದೆ. ಅದರಲ್ಲೂ ವಿಶೇಷವಾಗಿ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳು ದೇಶಾದ್ಯಂತ ಎಲ್ಲಾ ಕ್ಷೇತ್ರಗಳಲ್ಲೂ ತಮ್ಮ ಛಾಪನ್ನು ಮೂಡಿಸಿದ್ದಾರೆ. ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳು ಹೋಟೆಲ್, ಸಿನೆಮಾ, ಬ್ಯಾಂಕಿಂಗ್, ತಂತ್ರಜ್ಞಾನ, ವೈದ್ಯಕೀಯ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಸಾಧನೆ ಇಂದಿನ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಲಿ. ಅವರಂತೆ ಕನಸುಗಳನ್ನು ಕಂಡು ಅದರೆಡೆಗೆ ಸತತ ಪ್ರಯತ್ನಪಟ್ಟು ಒಳ್ಳೆಯ ಯಶಸ್ಸು ಪಡೆಯಬೇಕು . ಸಮಾಜದ ಒಳ್ಳೆಯ ನಾಗರಿಕರಾಗಿ ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತ್ಯನಾರಾಯಣ ಸ್ವಾಗತಿಸಿದರು. ಉಪನ್ಯಾಸಕರುಗಳು ಕಾಲೇಜಿನ ವಿವಿಧ ಸೌಲಭ್ಯಗಳನ್ನು ಕುರಿತು ಮಾಹಿತಿ ನೀಡಿದರು. ಇತಿಹಾಸ ಉಪನ್ಯಾಸಕಿ ಸ್ನೇಹ ಕಾರ್ಯಕ್ರಮ ನಿರೂಪಿಸಿ, ಕಂಪ್ಯೂಟರ್ ಉಪನ್ಯಾಸಕ ರಾಮಚಂದ್ರ ಆಚಾರ್ಯ ವಂದಿಸಿದರು.
















