ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪತ್ರಿಕೋದ್ಯಮದಲ್ಲಿ ಪದವಿ ಪಡೆದ ಪರಿಶಿಷ್ಟ ಜಾತಿ ನಿರುದ್ಯೋಗಿ ಯುವಕ-ಯುವತಿಯರು ಎಲೆಕ್ಟ್ರಾನಿಕ್ಸ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಉದ್ಯಮವನ್ನು ಸ್ಥಾಪಿಸಲು ಘಟಕ ವೆಚ್ಚದ ಶೇ.70 ರಷ್ಟು ಅಥವಾ ಗರಿಷ್ಟ 5 ಲಕ್ಷ ರೂ.ಗಳ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಉಡುಪಿ, ಕಾರ್ಕಳ ಹಾಗೂ ಕುಂದಾಪುರ ಕಚೇರಿಗಳಿಂದ ಪಡೆದು ಭರ್ತಿ ಮಾಡಿ, ದೃಢೀಕೃತ ಅಗತ್ಯ ದಾಖಲೆಗಳೊಂದಿಗೆ ಜುಲೈ 31ರ ಒಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.











