ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ರಾಜ್ಯ ವಲಯ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಕಂಬೈನ್ಡ್ ಹಾರ್ವೆಸ್ಟರ್ ಹಬ್ ರಚನೆಗೆ ಆಸಕ್ತ ರೈತರಿಂದ ವೈಯಕ್ತಿಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ರೈತರು ಪಹಣಿ, ಆಧಾರ್ ಪ್ರತಿ, ಬ್ಯಾಂಕ್ ಖಾತೆಯ ವಿವರದ ಪ್ರತಿ, ನಿಗಧಿತ ಭಾಷಾ ಕಾಗದದಲ್ಲಿ ಹಬ್ ಪರಬಾರೆ ಮಾಡುವುದಿಲ್ಲ ಎಂದು ಮುಚ್ಚಳಿಕೆ ಪತ್ರ ಇತ್ಯಾದಿ ಅಗತ್ಯ ದಾಖಲಾತಿಗಳೊಂದಿಗೆ ನಿಗಧಿತ ನಮೂನೆಯಲ್ಲಿ ವಿವರ ಭರ್ತಿ ಮಾಡಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸದ್ರಿ ಯೋಜನೆಯಡಿ ಅರ್ಜಿದಾರರು ಕಂಬೈನ್ಡ್ ಹಾರ್ವೆಸ್ಟರ್ ಹಾಗೂ ಬೇಲರ್‌ಗಳನ್ನು ಕಡ್ಡಾಯವಾಗಿ ಖರೀದಿಸಬೇಕಾಗಿದ್ದು, ಇವುಗಳೊಂದಿಗೆ ಹಾರ್ವೆಸ್ಟರ್ ಹಬ್‌ಗೆ ಅನುಮತಿಸಲಾದ ಇತರೆ ಉಪಕರಣಗಳನ್ನು ಸ್ಥಳೀಯ ಅವಶ್ಯಕತೆಗಳಿಗನುಗುಣವಾಗಿ ಖರೀದಿಸಬಹುದಾಗಿದೆ. ವೈಯಕ್ತಿಕ ಫಲಾನುಭವಿಗಳಿಗೆ ಶೇ. 50ರ ಸಹಾಯಧನದಲ್ಲಿ ಗರಿಷ್ಟ ರೂ. 40 ಲಕ್ಷ ಸಹಾಯಧನವನ್ನು ಪ್ರತಿ ಹಾರ್ವೆಸ್ಟರ್ ಹಬ್ ರಚನೆಗೆ ಉಪಕರಣವಾರು ನಿಗದಿಪಡಿಸಿದ ಗರಿಷ್ಟ ಸಹಾಯಧನದ ಮಿತಿಗೆ ಒಳಪಟ್ಟು Credit Linked Back Ended Subsidy ರೂಪದಲ್ಲಿ ಒದಗಿಸಲಾಗುವುದು.
ಅರ್ಜಿ ಸಲ್ಲಿಸಲು ಆಗಸ್ಟ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
















