Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ತಾಲೂಕು ಆಸ್ಪತ್ರೆ ಮಂಜೂರಾತಿಗಾಗಿ ಆರೋಗ್ಯ ಸಚಿವರಿಗೆ ಮನವಿ ಮಾಡಿದ ಶಾಸಕರು
    ಊರ್ಮನೆ ಸಮಾಚಾರ

    ಬೈಂದೂರು ತಾಲೂಕು ಆಸ್ಪತ್ರೆ ಮಂಜೂರಾತಿಗಾಗಿ ಆರೋಗ್ಯ ಸಚಿವರಿಗೆ ಮನವಿ ಮಾಡಿದ ಶಾಸಕರು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಬೆಂಗಳೂರಿನಲ್ಲಿ ಗುರುವಾರ ನಡೆದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಹರಡುವಿಕೆ ಹಾಗೂ ನಿಯಂತ್ರಣ ಕ್ರಮಗಳು ಕುರಿತು ನಡೆದ ಸಭೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ರಾಜ್ಯದ ಆರೋಗ್ಯ ಸಚಿವರಾದ ಯು. ಟಿ ಖಾದರ್ ಅವರಿಗೆ ತಾಲೂಕು ಆಸ್ಪತ್ರೆಯ ಅವಶ್ಯಕತೆ ಮನವರಿಕೆ ಮಾಡಿ ನೂರು ಹಾಸಿಗೆಗಳ ತಾಲೂಕು ಆಸ್ಪತ್ರೆ ಮಂಜೂರು ಮಾಡಲು ಮನವಿ ಮಾಡಿದರು.

    Click Here

    Call us

    Click Here

    ತಾಲೂಕು ಆಸ್ಪತ್ರೆ ಉದ್ದೇಶಕ್ಕಾಗಿ ಈಗಾಗಲೇ ಜಾಗ ಕಾದಿರಿಸಿ ಈ ಹಿಂದಿನ ಆರೋಗ್ಯ ಸಚಿವರು ಇಲಾಖಾ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಆಗದ ಕ್ರಮಗಳು ಮತ್ತು ಬೈಂದೂರು ತಾಲೂಕಿನಲ್ಲಿ ಆಸ್ಪತ್ರೆಯ ಅಗತ್ಯತೆಯನ್ನು ಅವರು ಸಚಿವರಿಗೆ ಮನವರಿಕೆ ಮಾಡಿದ್ದರು.

    ಎಂಡೊಸಲ್ಫಾನ್ ಪುನರ್ವಸತಿ ಕೇಂದ್ರ ಮಂಜೂರು ಮಾಡಲು ಕೋರಿಕೆ:
    ಉಡುಪಿ ಜಿಲ್ಲೆಯಲ್ಲಿ ಸುಮಾರು 2 ಸಾವಿರ ಮಂದಿ ಎಂಡೊಸಲ್ಫಾನ್ ಪೀಡಿತರಿದ್ದು ಹಾಗೂ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಾಧಿತರು ಇರುವ ಕಾರಣ ಬೈಂದೂರು  ತಾಲೂಕು ಸೇನಾಪುರ ಗ್ರಾಮದಲ್ಲಿ ಪುನರ್ವಸತಿ ಕೇಂದ್ರ ನಿರ್ಮಾಣ ಮಾಡಲು ಈಗಾಗಲೇ 5 ಎಕರೆ ಜಾಗವನ್ನು ಆರೋಗ್ಯ ಇಲಾಖೆಯ ಹೆಸರಿಗೆ ಕಾಯ್ದಿರಿಸಲಾಗಿದ್ದು ಅಲ್ಲಿ ಜಿಲ್ಲಾ ಮಟ್ಟದ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರವನ್ನು ಮಂಜೂರು ಮಾಡಲು ಆರೋಗ್ಯ ಸಚಿವರಿಗೆ ಮನವಿ ಮಾಡಿದರು.

    ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೇಲ್ದರ್ಜೆಗೆ ಮನವಿ:
    ಬೈಂದೂರು ಕ್ಷೇತ್ರದಲ್ಲಿನ ಸಾರ್ವಜನಿಕರ ಆರೋಗ್ಯ ಸುಧಾರಣೆ ದೃಷ್ಟಿಯಿಂದ ಸಿದ್ಧಾಪುರ, ವಂಡ್ಸೆ, ಕಿರೀಮಂಜೇಶ್ವರ, ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲು ಶಾಸಕರು ಇದೇ ಸಂದರ್ಭದಲ್ಲಿ ಸಚಿವರನ್ನು ಭೇಟಿಯಾಗಿ  ಕ್ಷೇತ್ರದ ಸಾರ್ವಜನಿಕರ ಪರವಾಗಿ  ಪತ್ರ ಮುಖೇನ ಮನವಿ ಮಾಡಿದ್ದಾರೆ.ಹಾಗೂ ಜಿಲ್ಲೆಯಲ್ಲಿ ಸಮರ್ಪಕ ಆಂಬುಲೆನ್ಸ್ ಸೇವೆ ಮತ್ತು ವಿವಿಧ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಆರೋಗ್ಯ ಸಿಬ್ಬಂದಿಗಳನ್ನು ನೇಮಕ ಮಾಡಲು ಒತ್ತಾಯಿಸಿದರು. ಶಾಸಕರ ಕೋರಿಕೆಗೆ ಸಚಿವರು ಸಕಾರಾತ್ಮಕ ಸ್ಪಂದಿಸುವುದಾಗಿ ಭರವಸೆ ನೀಡಿದ್ದಾರೆ ಎಂಬುದಾಗಿ ಶಾಸಕರು ಪತ್ರಿಕಾ ಹೇಳಿಕೆ ನೀಡಿದ್ದಾರೆ.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ನುಡಿ ನಮನ ಕಾರ್ಯಕ್ರಮ

    21/07/2026

    ಉಡುಪಿ ಜಿಲ್ಲಾ ಪ.ಪೂ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ – ಅಧ್ಯಕ್ಷರಾಗಿ ಸುಕೇಶ ಶೆಟ್ಟಿ ಹೊಸಮಠ ಆಯ್ಕೆ

    21/07/2026

    ಜುಲೈ 25ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷಸಂಕ್ರಾಂತಿ – ಪೂರ್ಣರಾತ್ರಿ ತಾಳಮದ್ದಳೆ

    21/07/2026
    Leave A Reply Cancel Reply

    17 − nine =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ನುಡಿ ನಮನ ಕಾರ್ಯಕ್ರಮ
    • ಉಡುಪಿ ಜಿಲ್ಲಾ ಪ.ಪೂ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ – ಅಧ್ಯಕ್ಷರಾಗಿ ಸುಕೇಶ ಶೆಟ್ಟಿ ಹೊಸಮಠ ಆಯ್ಕೆ
    • ಜುಲೈ 25ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷಸಂಕ್ರಾಂತಿ – ಪೂರ್ಣರಾತ್ರಿ ತಾಳಮದ್ದಳೆ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ: ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ
    • ಬೈಂದೂರು ತಾಲೂಕು ಆಸ್ಪತ್ರೆ ಮಂಜೂರಾತಿಗಾಗಿ ಆರೋಗ್ಯ ಸಚಿವರಿಗೆ ಮನವಿ ಮಾಡಿದ ಶಾಸಕರು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.