ಎನ್ನೆಸ್ಸೆಸ್: ಸೇವಾ ಮನೋಭಾವನೆಯಿಂದ ನಾಯಕತ್ವ ಬೆಳೆಸಿಕೊಳ್ಳಿ

Call us

Call us

Call us

ಕುಂದಾಪುರ: ವಿದ್ಯಾರ್ಥಿಗಳು ಸೇವಾ ಮನೋಭಾವನೆಯಿಂದ ಸತ್ಕಾರ್ಯದಲ್ಲಿ ತೊಡಗಿಸಿಕೊಂಡಾಗ ಸಾಮಾಜಿಕ ಜವಾಜ್ಬಾರಿ ಮತ್ತು ನಾಯಕತ್ವದ ಗುಣಗಳು ಬೆಳೆಯಲು ಸಾದ್ಯ ಎಂದು ಮಂಜುನಾಥ ಚಡಗ ಹೇಳಿದರು.

Call us

Click Here

ಅವರು ಸಾಸ್ತಾನ ಪಾಂಡೇಶ್ವರ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋಟೇಶ್ವರ ಕಾಳಾವರ ವರದರಾಜ.ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ಗಾಂವಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸೇವೆಯಲ್ಲಿ ಸಕ್ರೀಯರಾದಾಗ ಒತ್ತಡಯುಕ್ತ ಜೀವನದಿಂದ ಮುಕ್ತರಾಗಿ ಪ್ರೀತಿ ಸಹಬಾಳ್ವೆಯಿಂದ ಉತ್ತಮ ಜೀವನ ನಿರ್ವಹಿಸಲು ಸಾದ್ಯ ಎಂದರು. ಮಂಗಳೂರು ವಿ.ವಿ.ರಾಷ್ಟ್ರೀಯ ಸೇವಾ ಯೋಜನೆಯ ಮಾಜಿ ಸಂಯೋಜನಾಧಿಕಾರಿ ಗೋಪಾಲ ಅವರು ದಿಕ್ಸೂಚಿ ಭಾಷಣ ಮಾಡಿ, ಪಠ್ಯೇತರ ಚಟುವಟಿಕೆಗಳಿಂದ ದೈಹಿಕ ಮತ್ತು ಮಾನಸಿಕ ಚಟುವಟಿಕೆಗಳು ವೃದ್ಧಿಗೊಂಡು ಮನೋಬಲ ಸಾಧಿಸುತ್ತದೆ ಎಂದರು. ಸಭೆಯಲ್ಲಿ ಸಾಸ್ತಾನ ಸಿ.ಎ ಬ್ಯಾಂಕಿನ ಅಧ್ಯಕ್ಷ ಪ್ರತಾಪ್ ಶೆಟ್ಟಿ, ಪಾಂಡೇಶ್ವರ ಗ್ರಾಮ ಪಂಚಾಯಿತಿ ಸದಸ್ಯ ಚಂದ್ರಮೋಹನ ಪೂಜಾರಿ, ಯೋಜನಾಧಿಕಾರಿ ಗೀತಾ.ಎಂ ಉಪಸ್ಥಿತರಿದ್ದರು. ಶಿಬಿರಾಧಿಕಾರಿ ರವಿಗೌಡ ಸ್ವಾಗತಿಸಿದರು. ಸಂದೇಶ್ ಕಾರ್ಯಕ್ರಮ ನಿರ್ವಹಿಸಿದರು. ಪ್ರಥ್ವಿನ್ ವಂದಿಸಿದರು.

Leave a Reply