ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 623 ಅಂಕ ಗಳಿಸಿ ರಾಜ್ಯಮಟ್ಟದಲ್ಲಿ 3ನೇ ಸ್ಥಾನ ಹಾಗೂ ಶಾಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ಸಾತ್ವಿಕ್ ಎಸ್. ಭಟ್ ನನ್ನು ಶಾಲೆಯ 40ನೇ ಸಂಸ್ಥಾಪನಾ ದಿನದಂದು ಪೋಷಕರೊಂದಿಗೆ ಬೆಳ್ಳಿಯ ಲೋಟವನ್ನು ನೀಡಿ ಸನ್ಮಾನಿಸಲಾಯಿತು.
ಈ ಸಮಾರಂಭವು ಸಂಸ್ಥೆಯ ಅಧ್ಯಕ್ಷರಾದ ಕೆ. ರಾಮಕೃಷ್ಣಕಾಮತ್ ಅವರ ಅಧ್ಯಕ್ಷತೆಯಲ್ಲಿ, ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈಯವರ ಉಪಸ್ಥಿತಿಯಲ್ಲಿ ನಡೆಯಿತು.
ಬೈಂದೂರು ಹಾಗೂ ಕುಂದಾಪುರ ತಾಲೂಕಿನ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ಚಂದ್ರ ನಾಯ್ಕ್ ಹಾಗೂ ಸುಮಾ ಉಮೇಶ್ ಪುತ್ರನ್ ರವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಸಂಸ್ಥೆಯ ಖಂಜಾಂಚಿ ಲಕ್ಷೀನಾರಾಯಣ ಶೆಣೈ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜಿನ ಮುಖ್ಯಸ್ಥರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
















