Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ಗುರುನರಸಿಂಹ ವಿವಿದೋದ್ಧೇಶ ಸೌಹಾರ್ದ ಸಹಕಾರಿ ಸಂಘ ಸಾಲಿಗ್ರಾಮ – ವಾರ್ಷಿಕ ಸಾಮಾನ್ಯ ಸಭೆ
    ಊರ್ಮನೆ ಸಮಾಚಾರ

    ಶ್ರೀ ಗುರುನರಸಿಂಹ ವಿವಿದೋದ್ಧೇಶ ಸೌಹಾರ್ದ ಸಹಕಾರಿ ಸಂಘ ಸಾಲಿಗ್ರಾಮ – ವಾರ್ಷಿಕ ಸಾಮಾನ್ಯ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಶ್ರೀ ಗುರುನರಸಿಂಹ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಸಾಲಿಗ್ರಾಮ ಇದರ 16ನೇಯ ವಾರ್ಷಿಕ ಸಾಮಾನ್ಯ ಸಭೆಯು ಇತ್ತೀಚೆಗೆ ಸಾಲಿಗ್ರಾಮದ ಗಿರಿಜಾ ಕಲ್ಯಾಣ ಮಂಟಪದಲ್ಲಿ ಸಂಘದ ಅಧ್ಯಕ್ಷ ಆನಂದ ಸಿ. ಕುಂದರ್ ಅಧ್ಯಕ್ಷತೆಯಲ್ಲಿ ಜರುಗಿತು.

    Click Here

    Call us

    Click Here

    ಗತ ವರ್ಷದಲ್ಲಿ ಸದಸ್ಯರಿಂದ ರೂ. 18.೦೦ ಕೋಟಿಗೂ ಮಿಕ್ಕಿ ಠೇವಣಿ ಸಂಗ್ರಹಿಸಿ ರೂ. 14.೦೦ ಕೋಟಿಗೂ ಅಧಿಕ ಸಾಲ ವಿತರಿಸಿದೆ. ಸದಸ್ಯರ ಮನ ಒಲಿಸೂವುದರ ಮೂಲಕ ಶೇ. 99.75 ರ ವಸೂಲಿ ಸಾಧಿಸಿದೆ. 2025-26ನೇ ಶೈಕ್ಷಣಿಕ ವರ್ಷದಲ್ಲಿ ಪಿ.ಯು.ಸಿ ಮತ್ತು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಶಾಲಾವಾರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಮತ್ತು ಸದಸ್ಯರ ಮಕ್ಕಳನ್ನು ಪುರಸ್ಕರಿಸಿ ಅಭಿನಂದಿಸಲಾಯಿತು.

    ಪಿ.ಯು.ಸಿ. ಅಂತಿಮ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ಹಾಗೂ ಜಿಲ್ಲೆಗೆ 3ನೇ ರಾಂಕ್ ಗಳಿಸಿದ ಸಂಘದ ಸದಸ್ಯರೋರ್ವರ ಪುತ್ರಿ ವಿದ್ಯಾರ್ಥಿನಿ ಸಾತ್ವಿಕ ಶ್ರೀಯಾನ್ ಅವರಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು.

    ಇತ್ತೀಚಿಗೆ ನಿಧನರಾದ ಸಂಘದ ಸದಸ್ಯರೋರ್ವರು ಅವರ ಉತ್ತರಾಧಿಕಾರಿಗೆ ಸಂಘದಿಂದ ಲಭ್ಯವಿರುವ ರೂ.10,000/- ಮರಣನಿಧಿ ಮೊತ್ತವನ್ನು ಹಸ್ತಾಂತರಿಸಿ ಮೃತರ ಆತ್ಮಕ್ಕೆ ಗೌರವ ಸೂಚಿಸಲಾಯಿತು. ಸಂಘದ ಕಾರ್ಯ ಕ್ಷೇತ್ರದಲ್ಲಿ ಫಲಾಪೇಕ್ಷೆ ಇಲ್ಲದೇ ನಿಸ್ವಾರ್ಥ ಪ್ರಶಂಸನೀಯ ಸೇವೆ ಸಲ್ಲಿಸುತ್ತಿರುವ ಹಿರಿಯ ನಾಗರಿಕರುಗಳನ್ನು ಗೌರವಿಸಿ ಅಭಿನಂದಿಸಲಾಯಿತು.

    ಕಳೆದ ಸಾಲಿನಲ್ಲಿ ಗಳಿಸಿದ ನಿವ್ವಳ ಲಾಭ ರೂ.38.80 ಲಕ್ಷವನ್ನು ಉಪವಿಧಿಯಲ್ಲಿನ ಅವಕಾಶದಂತೆ ವಿಂಗಡಿಸಿ ಸದಸ್ಯರಿಗೆ ಶೇ. 25ರ ಪಾಲು ಲಾಭವನ್ನು ನೀಡಲಾಯಿತು. ಕಳೆದ 11 ವರ್ಷಗಳಿಂದ ಶೇ. 25ರ ಗರಿಷ್ಟ ಪಾಲು ಲಾಭ ನೀಡಿದ ಪ್ರಾಥಮಿಕ ರಂಗದಲ್ಲಿ ದಾಖಲೆ ನಿರ್ಮಿಸಿದ ಬಗ್ಗೆ ಸಭೆಯಲ್ಲಿ ಉಲ್ಲೇಖಿಸಲಾಯಿತು.

    Click here

    Click here

    Click here

    Call us

    Call us

    ಸಂಘದ ಅಧ್ಯಕ್ಷ ಆನಂದ್ ಸಿ ಕುಂದರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು ಆರಂಭದಿಂದಲೂ ಪ್ರಜ್ಞಾವಂತ ಸದಸ್ಯರ ಸಕ್ರಿಯ ಪಾಲ್ಗೊಳ್ಳುವಿಕೆ, ದಕ್ಷ ಆಡಳಿತ ಮಂಡಳಿಯ ಮಾರ್ಗದರ್ಶನ ಮತ್ತು ನಿಷ್ಟಾವಂತ ಸಿಬಂದಿಯವರ ಪ್ರಾಮಾಣಿಕ ಸೇವೆಯಿಂದ ಲಾಭದಲ್ಲಿ ಮುನ್ನಡೆಯುತ್ತಿರುವುದರ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಪ್ರಸ್ತುತ ಸಾಲಿನಲ್ಲಿ ಸಂಘಕ್ಕೆ ಸುಸ್ಸಜ್ಜಿತ ಕಟ್ಟಡ ನಿರ್ಮಿಸಿ ಮುಂದಿನ ಸಾಲಿನಿಂದ ವಾರ್ಷಿಕ ಸಾಮಾನ್ಯ ಸಭೆಯನ್ನು ಸಂಘದ ಕಟ್ಟಡದಲ್ಲಿಯೇ ಜರುಗಿಸುವ ಉದ್ದೇಶ ಹೊಂದಿರುವುದಾಗಿ ತಿಳಿಸಿದರು. ಸಂಘದ ವಿವಿಧ ಸೇವೆಗಳ ಸದುಪಯೋಗ ಪಡೆಯುವಂತೆ ಕರೆಯಿತ್ತರು.

    ಸಭೆಯಲ್ಲಿ ಸಂಘದ ಎಲ್ಲಾ ನಿರ್ದೇಶಕರುಗಳಾದ  ಸಂಜೀವ ಜಿ, ಮಂಜುನಾಥ ಎಸ್.ಕೆ, ಡಾ. ಕೆ. ಕೃಷ್ಣ ಕಾಂಚನ್,  ಕೆ. ಶಂಕರ ಬಂಗೇರ, ವಸಂತ ಶೆಟ್ಟಿ, ವೈ ಕೃಷ್ಣಮೂರ್ತಿ ಐತಾಳ, ಸವಿತಾ ಎಸ್. ಪೂಜಾರಿ ಶಾಂತಾ ಭಟ್ಟ, ನಾಗರತ್ನ ಬಾಯರಿ, ಉಪಸ್ಥಿತರಿದ್ದರು.

    ಸಂಘದ ಮುಖ್ಯ ಕಾರ್ಯನಿರ್ವಾಹಕ  ಜಿ.ಎಸ್. ಸೋಮಯಾಜಿ ಗತ ವರ್ಷದ ವರದಿ ಮಂಡಿಸಿದರು. ನಿರ್ದೇಶಕಿ ಶಾಂತಾ ಭಟ್ಟ ವಂದನಾರ್ಪಣೆ ಗೈದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆನ್ಸ್ ಕ್ಲಬ್ ಕೋಟ ಬ್ರಿಗೇಡ್ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

    22/07/2026

    ಕುಂದಾಪುರ ಆರ್. ಎನ್. ಶೆಟ್ಟಿ ಸಂಯುಕ್ತ ಪ.ಪೂ ಕಾಲೇಜಿನಲ್ಲಿ ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ

    22/07/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

    22/07/2026
    Leave A Reply Cancel Reply

    5 × 5 =

    Call us

    Click Here

    Call us

    Call us

    Call us
    Highest Viewed Recently
    • ಆನ್ಸ್ ಕ್ಲಬ್ ಕೋಟ ಬ್ರಿಗೇಡ್ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ
    • ಶ್ರೀ ಗುರುನರಸಿಂಹ ವಿವಿದೋದ್ಧೇಶ ಸೌಹಾರ್ದ ಸಹಕಾರಿ ಸಂಘ ಸಾಲಿಗ್ರಾಮ – ವಾರ್ಷಿಕ ಸಾಮಾನ್ಯ ಸಭೆ
    • ಕುಂದಾಪುರ ಆರ್. ಎನ್. ಶೆಟ್ಟಿ ಸಂಯುಕ್ತ ಪ.ಪೂ ಕಾಲೇಜಿನಲ್ಲಿ ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ
    • ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ದೇಶದ ಮೊದಲ ಐಬಿಎಂ ಎಐ ಲ್ಯಾಬ್ ಲೋಕರ್ಪಾಣೆ
    • ರೋಟರಿ ಕ್ಲಬ್ ಗಂಗೊಳ್ಳಿ ಇದರ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.