Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪ್ರಥಮ ವರ್ಷದ ಬಿ.ಇ. ವಿದ್ಯಾರ್ಥಿಗಳ ಇಂಡಕ್ಷನ್‌ ಕಾರ್ಯಕ್ರಮ  
    ಊರ್ಮನೆ ಸಮಾಚಾರ

    ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪ್ರಥಮ ವರ್ಷದ ಬಿ.ಇ. ವಿದ್ಯಾರ್ಥಿಗಳ ಇಂಡಕ್ಷನ್‌ ಕಾರ್ಯಕ್ರಮ  

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MITK) ಇಂಜಿನಿಯರಿಂಗ್ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಬಿ.ಇ. ವಿದ್ಯಾರ್ಥಿಗಳ ದಿಕ್ಸೂಚಿ ಕಾರ್ಯಕ್ರಮ (Student Induction Programme) ಬುಧವಾರದಂದು ವಿಜೃಂಭಣೆಯಿಂದ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮದ ಉದ್ಘಾಟಕರಾಗಿ ಭಾಗವಹಿಸಿ ಮಾತನಾಡಿದ ಆರಾಕಲ್ (Oracle) ಸಂಸ್ಥೆಯ ಹೆಚ್.ಆರ್. ಅಲೆಕ್ಸಾಂಡರ್ ಆರ್, “ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದಿಂದ ಉದ್ಯೋಗಗಳು ನಷ್ಟವಾಗುವುದಿಲ್ಲ. ಬದಲಿಗೆ ಅದನ್ನು ಸರಿಯಾಗಿ ಬಳಸಿಕೊಳ್ಳಲು ತಿಳಿದಿರುವವರು ಭವಿಷ್ಯದಲ್ಲಿ ಉದ್ಯೋಗಾವಕಾಶಗಳನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಕೇವಲ ಸಂವಹನ ನಡೆಸುವುದಷ್ಟೇ ಅಲ್ಲದೆ, ಉತ್ತಮ ಬಾಂಧವ್ಯ ಬೆಳೆಸಿಕೊಳ್ಳುವ ಕೌಶಲ್ಯ ಹಾಗೂ ನಿರಂತರ ಕಲಿಕೆಯ ಮನೋಭಾವವನ್ನು ಬೆಳೆಸಿಕೊಳ್ಳಬೇಕು” ಎಂದು ಕರೆ ನೀಡಿದರು.

    ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗ್ಡೆ ಅವರು ಸಂಸ್ಥೆಯ ಧ್ಯೇಯೋದ್ದೇಶಗಳನ್ನು ವಿವರಿಸಿ, “ಸಮಾಜದಲ್ಲಿರುವ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಇಂಜಿನಿಯರಿಂಗ್ ಶಿಕ್ಷಣ ಅತ್ಯಗತ್ಯ. ವಿದ್ಯಾರ್ಥಿಗಳು ಉತ್ತಮ ಇಂಜಿನಿಯರ್ ಆಗಿ ಹೊರಹೊಮ್ಮಿ ಸಮಾಜಕ್ಕೆ ಸಕಾರಾತ್ಮಕ ಕೊಡುಗೆ ನೀಡಬೇಕು” ಎಂದರು.

    ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ವಹಿಸಿದ IMJ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ. ಎಸ್.ಎನ್. ಭಟ್ ಮಾತನಾಡಿ, ನೀವು ಯಾವ ವಿಭಾಗ ಆಯ್ಕೆ ಮಾಡಿದ್ದೀರಿ ಅದರ ಜ್ಞಾನದ ಜೊತೆಗೆ ಇತರ ಕ್ಷೇತ್ರಗಳ ಜ್ಞಾನವನ್ನೂ ಮೈಗೂಡಿಸಿಕೊಂಡು ಸಂಸ್ಥೆಗೆ ಕೀರ್ತಿ ತರಲು ಪ್ರಯತ್ನಿಸಿ, ಅದಕ್ಕೆ ಪೂರಕವಾದ ವಾತಾವರಣ ಇಲ್ಲಿದೆ ಎಂದು ವಿವರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಂಸ್ಥೆಯ ಸಂಶೋಧನಾ ಡೀನ್ ಡಾ. ವಿನೋದ್ ಕುಮಾರ್ ಮಾತನಾಡಿ, ಮುಂದಿನ ನಾಲ್ಕು ವರ್ಷಗಳ ಇಂಜಿನಿಯರಿಂಗ್ ಅಭ್ಯಾಸವನ್ನು ಶ್ರದ್ಧೆಯಿಂದ ನಿರ್ವಹಿಸಿದರೆ ಭವಿಷ್ಯದ ಜೀವನ ಸುಂದರವಾಗಲಿದೆ ಎಂದು ಕಿವಿಮಾತು ಹೇಳಿದರು.

    ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು, ಪೋಷಕರು ಹಾಗೂ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಸಂಯೋಜಕರಾದ ಸೂಕ್ಷ್ಮ ಅಡಿಗ ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರನ್ನು ಹಾಗೂ ಪೋಷಕರನ್ನು ಸ್ವಾಗತಿಸಿದರು. IQAC ಸಂಯೋಜಕರಾದ ಡಾ. ನಿಖಿಲ ಪೈ ವಂದಿಸಿದರು. ವಿದ್ಯಾರ್ಥಿನಿ ಅಲಿಶಾ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮಾದಕ ದ್ರವ್ಯಗಳಿಂದ ದೂರವಿದ್ದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ: ಅಬ್ದುಲ್ ರಹೀಮ್ ಹುಸೇನ್ ಶೇಖ್

    23/07/2026

    ಪಾಂಡೇಶ್ವರ: ನರೇಗಾ ಮತ್ತು 15ನೇ ಹಣಕಾಸು ಯೋಜನೆ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ

    23/07/2026

    ಗಂಗೊಳ್ಳಿ: ಅಂಗನವಾಡಿ ಕೇಂದ್ರಕ್ಕೆ ಸೀಲಿಂಗ್ ಫ್ಯಾನ್ ಮತ್ತು ಕಲಿಕಾ ಪರಿಕರಗಳ ಕೊಡುಗೆ 

    23/07/2026
    Leave A Reply Cancel Reply

    3 × 2 =

    Call us

    Click Here

    Call us

    Call us

    Call us
    Highest Viewed Recently
    • ಮಾದಕ ದ್ರವ್ಯಗಳಿಂದ ದೂರವಿದ್ದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ: ಅಬ್ದುಲ್ ರಹೀಮ್ ಹುಸೇನ್ ಶೇಖ್
    • ಪಾಂಡೇಶ್ವರ: ನರೇಗಾ ಮತ್ತು 15ನೇ ಹಣಕಾಸು ಯೋಜನೆ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ
    • ಗಂಗೊಳ್ಳಿ: ಅಂಗನವಾಡಿ ಕೇಂದ್ರಕ್ಕೆ ಸೀಲಿಂಗ್ ಫ್ಯಾನ್ ಮತ್ತು ಕಲಿಕಾ ಪರಿಕರಗಳ ಕೊಡುಗೆ 
    • ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪ್ರಥಮ ವರ್ಷದ ಬಿ.ಇ. ವಿದ್ಯಾರ್ಥಿಗಳ ಇಂಡಕ್ಷನ್‌ ಕಾರ್ಯಕ್ರಮ  
    • ಆ.7 ಮತ್ತು 8ರಂದು ಆಳ್ವಾಸ್ ಪ್ರಗತಿ – 2026: ಬ್ರಹತ್‌ ಉದ್ಯೋಗ ಮೇಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.