ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಮಳೆಗಾಲದಲ್ಲಿ ಮಲೇರಿಯಾ ಡಂಗ್ಯೂ ಅಂತಹ ಸೊಳ್ಳೆಗಳ ಮೂಲಕ ಹರಡುವ ರೋಗದಿಂಗ ಜಾಗೃತಿ ವಹಿಸಿ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವ ಅಗತ್ಯತೆಗಳನ್ನು ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಘವೇಂದ್ರ ರಾವ್ ಗ್ರಾಮಸ್ಥರಿಗೆ ಕಿವಿಮಾತು ಹೇಳಿದರು.

ಅವರು ಬುಧವಾರ ಪಂಚಾಯತ್ ಸಭಾಂಗಣದಲ್ಲಿ ಪಾಂಡೇಶ್ವರ ಗ್ರಾಮ ಪಂಚಾಯತ್‌ನ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆ ಹಾಗೂ 15ನೇ ಹಣಕಾಸು ಯೋಜನೆಯಡಿ 2025-26ನೇ ಸಾಲಿನ ಸಾಮಾಜಿಕ ಪರಿಶೋಧನೆಗೆ ಸಂಬಂಧಿಸಿದ ವಿಶೇಷ ಗ್ರಾಮ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಪ್ರಸ್ತುತ ಸಾಂಕ್ರಾಮಿಕ ರೋಗಗಳು ನಿಯಂತ್ರಣದಲ್ಲಿದ್ದು ಆಸ್ಪತ್ರೆಗಳ ಸಮ್ಮುಖದಲ್ಲಿ ನಡೆಯುವ ಆರೋಗ್ಯ ಶಿಬಿರಗಳ ಪ್ರಯೋಜನ ಪಡೆಯಿರಿ ಎಂದು ಜನಸಂಖ್ಯಾ ನಿಯಂತ್ರಣ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಬ್ರಹ್ಮಾವರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿಜಯನಾರಾಯಣ ನಾಯ್ಕ್ ಅಧ್ಯಕ್ಷತೆಯನ್ನು ವಹಿಸಿದ್ದರು. ತಾಲೂಕು ಸಂಯೋಜಕ ಹುಸೇನಸಾಬ ಕರನಾಚಿ ವಿ.ಬಿ ರಾಮ್ ಜಿ. ಉದ್ಯೋಗ ಖಾತ್ರಿ ಯೋಜನೆಗಳ ಅನುಷ್ಠಾನ ಹಾಗೂ ಅದರ ಕುರಿತಾಗಿ ಮಾಹಿತಿ ನೀಡಿದರು.
ಪಂಚಾಯತ್‌ನ ಆಡಳಿತಾಧಿಕಾರಿ ಸಾಸ್ತಾನ ಪಶು ಆಸ್ಪತ್ರೆಯ ವೈದ್ಯ ಡಾ.ಸೂರಜ್ ಉಪಸ್ಥಿತರಿದ್ದರು. ಗ್ರಾಮ ಸಂಪನ್ಮೂಲ ವ್ಯಕ್ತಿಗಳಾಗಿ ಕಾವ್ಯ ಪ್ರಭಾಕರ್, ಸವಿತಾ ರವೀಂದ್ರ ಮತ್ತು ಅವರು ಭಾಗಿಯಾದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಂದನಾ ಸ್ವಾಗತಿಸಿದರು.ಕಾರ್ಯದರ್ಶಿ ವಿಜಯ ಭಂಡಾರಿ ನಿರ್ವಹಿಸಿ ವಂದಿಸಿದರು.
















