ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಚಿಕ್ಕಮಗಳೂರಿನ ಸೆಂಟ್ ಮೇರಿಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ನಡೆದ (CISCE)ವಲಯ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.

ಈ ಪಂದ್ಯಾವಳಿಯಲ್ಲಿ ಶಾಲೆಯ 14 ವರ್ಷದ ಬಾಲಕಿಯರ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇವರಲ್ಲಿ ಶ್ರಾವಣಿ ಪಾಟೀಲ್, ವರ್ಷಿಣೀ ಐ ಪಿ, ಸನ್ನಿಧಿ ಬಿ, ಹೆಚ್ ಯಾಮಿನಿ, ಲಕ್ಷ್ಮಿ, ಆಷಾ ಎಸ್. ಎಲ್, ವೇದಶ್ರೀ, ಸಹನ ಎಸ್ ಕೆ, ಆರಾಧ್ಯಾ ಆರ್ ಹೆಚ್ ಎಂಬ ೯ ಜನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
ಹಾಗೆಯೇ, 14 ವರ್ಷದೊಳಗಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದೆ. ಇವರಲ್ಲಿ ವಿಕಾಸ್ ಗೌಡ, ಅಕುಲ್ ಡಿ ಜಿ, ಆಯುಷ್ ಹಿರೇಮಠ ಎಂಬ 3 ಜನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. 17 ವರ್ಷದೊಳಗಿನ ಬಾಲಕರ ತಂಡವು ತೃತೀಯ ಸ್ಥಾನವನ್ನು ಪಡೆದು ಕೊಂಡಿದೆ. ಇವರಲ್ಲಿ ಅಭಿಷೇಕ್ ರಾಜಪುರ್, ಮಯೂರ್ ಪಿ. ಓ ಎಂಬ 2 ಜನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
ಶಾಲೆಯ ಪ್ರಾಂಶುಪಾಲರು ಮತ್ತು ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳೂ ಆದ ಶ್ರೀ ಶರಣ ಕುಮಾರ ಈ ಯಶಸ್ಸಿಗೆ ಕಾರಣರಾದ ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಮತ್ತು ಅವರಿಗೆ ಮಾರ್ಗದರ್ಶನ ನೀಡಿದ ಶಿಕ್ಷಕರು ಹಾಗೂ ತರಬೇತುದಾರರ ಶ್ರಮವನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಮತ್ತು ತರಬೇತುದಾರರು ಹರ್ಷ ವ್ಯಕ್ತಪಡಿಸಿದ್ದಾರೆ.
















