ಕುಂದಾಪ್ರ ಡಾಟ್ ಕಾಂ ಸುದ್ದಿ.ರೋ
ಕುಂದಾಪುರ: ರೋಟರಿ ಕ್ಲಬ್ ತೆಕ್ಕಟ್ಟೆ ಹಾಗೂ ರೋಟರಿ ಕ್ಲಬ್ ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಪ್ರೌಢಶಾಲೆ ಹೆಸ್ಕುತ್ತೂರಿನಲ್ಲಿ ಆಷಾಢ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮವು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಶಾಲೆಯ ಮುಖ್ಯೋಪಾಧ್ಯಾಯರು ಅತಿಥಿಗಳನ್ನು ಸ್ವಾಗತಿಸಿದರು. ಶಿಕ್ಷಕರಾದ ರಾಘವೇಂದ್ರ ದೇವಾಡಿಗ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.
ವಿದ್ಯಾರ್ಥಿಗಳು ಕುಂದಾಪ್ರ ಕನ್ನಡದಲ್ಲಿ ಜಾನಪದ ಕಥೆಗಳು, ಗಾದೆಗಳು ಹಾಗೂ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸುವ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿ, ಸ್ಥಳೀಯ ಸಂಸ್ಕೃತಿಯ ಶ್ರೀಮಂತಿಕೆಯನ್ನು ಪರಿಚಯಿಸಿದರು.
ವೇದಿಕೆಯಲ್ಲಿ ರೋಟರಿ (ವಲಯ 2 ) ಸಹಾಯಕ ಗವರ್ನರ್ ಟಿ. ಸುಧಾಕರ್ ಶೆಟ್ಟಿ, ವಲಯ ಸಲಹೆಗಾರ ಪಿಎಚ್‌ಎಫ್ ಗಜೇಂದ್ರ ಶೆಟ್ಟಿ, ವಲಯ ಲರ್ನಿಂಗ್ ಫೆಸಿಲಿಟೇಟರ್ ಸುರೇಶ್ ಬೇಳೂರು, ರೋಟರಿ ಕ್ಲಬ್ ತೆಕ್ಕಟ್ಟೆ ಅಧ್ಯಕ್ಷ ಟಿ. ರಾಜೀವ್ ಶೆಟ್ಟಿ, ರೋಟರಿ ಕ್ಲಬ್ ಕೋಟೇಶ್ವರ ಅಧ್ಯಕ್ಷೆ ಅಕ್ಷತಾ ಗಿರೀಶ್ ಐತಾಳ್, ಕಾರ್ಯದರ್ಶಿ ಅರುಣ್ ದೇವಾಡಿಗ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ರಾಘವೇಂದ್ರ ಶೆಟ್ಟಿ (ಬೆಳೂರು) ಹಾಗೂ ಎಸ್‌ಡಿಎಂಸಿ ಅಧ್ಯಕ್ಷರು ಉಪಸ್ಥಿತರಿದ್ದರು.
ಅತಿಥಿಗಳು ಆಷಾಢಿ ಉತ್ಸವದ ಮಹತ್ವ ಹಾಗೂ ಸಂಪ್ರದಾಯಬದ್ಧ ಹುಂದ್ಕೊಳ್ಹಕ್ಕಿ ದಿಬ್ಬಣದ ವೈಶಿಷ್ಟ್ಯಗಳ ಕುರಿತು ತಮ್ಮ ಅನುಭವ ಹಾಗೂ ಜ್ಞಾನವನ್ನು ಹಂಚಿಕೊಂಡು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಶಾಲೆಯ ಶಿಕ್ಷಕರಾದ ಗೋಪಾಲ ಸೋಮಯಾಜಿ ಅವರು ವಂದನಾರ್ಪಣೆ ಸಲ್ಲಿಸಿದರು.
















