ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇತ್ತಿಚಿಗೆ ಬೆಂಗಳೂರಿನಲ್ಲಿ ಜರುಗಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕಾರ್ಯಕ್ರಮದಲ್ಲಿ ಕಳೆದ ಇಪ್ಪತ್ತು ವರ್ಷದಿಂದ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕರಾಗಿ ಸೇವೆ ಸಲ್ಲಿಸುತ್ತಿರುವ ಶಿರೂರು ಹಡವಿನಕೋಣೆಯ ರಮಾನಾಥ್ ಸುಬ್ಬಣ್ಣ ಮೇಸ್ತ ಅವರಿಗೆ ಬೆಳ್ಳಿ ಪದಕ ದೊರೆತಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಇವರ ಸಹಯೋಗದೊಂದಿಗೆ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ದ.ಕ.ಜಿಲ್ಲೆಯಿಂದ ಪ್ರತಿಸಿಧಿಸಿದ ಗುಜ್ಜಾಡಿ ಗ್ರಾಮದ ಕಂಚುಗೋಡಿನ ನಿವಾಸಿ, ಶಿಕ್ಷಕ ನಾಗರಾಜ ಖಾರ್ವಿ 4×100 ಮೀ. ಫ್ರೀ ಸ್ಟೈಲ್ ಸ್ವಿಮ್ಮಿಂಗ್ ರಿಲೇಯಲ್ಲಿ ಚಿನ್ನವನ್ನೂ, 4×100 ಮೀ ಮೆಡ್ಲೇ ಸ್ವಿಮ್ಮಿಂಗ್ ರಿಲೇಯಲ್ಲಿ ಬೆಳ್ಳಿ ಪದಕವನ್ನು ಪಡೆದಿರುತ್ತೇನೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್‌ನ ನೂತನ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀನಿವಾಸ ಖಾರ್ವಿ ಮತ್ತು ಪ್ರೇಮಾ ಸಿ.ಎಸ್.ಪೂಜಾರಿ ಅವರನ್ನು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ತಮ್ಮ ಸ್ವಗೃಹದಲ್ಲಿ ಶನಿವಾರ ಅಭಿನಂದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸುಕುಮಾರ ಶೆಟ್ಟಿ, ಗಂಗೊಳ್ಳಿ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು. ಗಂಗೊಳ್ಳಿ-ಕುಂದಾಪುರ ಸೇತುವೆ, ರಿಂಗ್ ರೋಡ್, ಮೀನುಗಾರಿಕಾ ಬಂದರಿನ ಅಭಿವೃದ್ಧಿ ಸಹಿತಿ ಸಾಧ್ಯವಾಗುವ ಎಲ್ಲಾ ಕಾರ್ಯಗಳನ್ನು ಮಾಡುವ ಪ್ರಯತ್ನ ನಡೆಸುತ್ತೇನೆ. ಗಂಗೊಳ್ಳಿ ಗ್ರಾಮ ಪಂಚಾಯತ್‌ನ್ನು ಮೇಲ್ದರ್ಜೆಗೇರಿಸಿ ಪಟ್ಟಣ ಪಂಚಾಯತ್ ಅಥವಾ ಪುರಸಭೆ ಮಾಡಲು ಸರಕಾರದ ಮೇಲೆ ಒತ್ತಡ ಹೇರಲಾಗುವುದು. ಗಂಗೊಳ್ಳಿ ಗ್ರಾಮ ಪಂಚಾಯತ್‌ನ್ನು ಮಾದರಿ ಪಂಚಾಯತ್ ಆಗಿ ಬೆಳೆಸುವ ಪ್ರಯತ್ನ ಗ್ರಾಪಂ ಸದಸ್ಯರ ಮೂಲಕ ನಡೆಯಬೇಕು. ಎಲ್ಲಾ ಸದಸ್ಯರ ಸಹಕಾರ ಬೆಂಬಲ ಪಡೆದು ಜನರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಬೇಕು ಎಂದು ಅವರು ಹೇಳಿದರು. ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಪ್ರಧಾನ ಕಾರ್ಯದರ್ಶಿಗಳಾದ ದೀಪಕಕುಮಾರ್ ಶೆಟ್ಟಿ, ಬಾಲಚಂದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮಾಹಿತಿ ಕಾರ್ಯಾಗಾರ ನಡೆಯಿತು. ಎರೆನಾ ಆನಿಮೇಶನ್ ಸಂಸ್ಥೆಯ ಸಂಜಯ್ ಪಾಟೀಲ್ ವಿದ್ಯಾರ್ಥಿಗಳಿಗೆ ಆನಿಮೇಶನ್ ಕೋರ್ಸ್‌ಗಳನ್ನು ಪರಿಚಯಿಸಿ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿದರು. ಈ ಸಂದರ್ಭ ಎರೆನಾ ಆನಿಮೇಶನ್‌ನ ಪ್ರಜ್ವಲಾ ಶೆಟ್ಟಿ, ಕಾಲೇಜಿನ ನಿರ್ದೇಶಕ ಪ್ರೊ. ದೋಮ ಚಂದ್ರಶೇಖರ್, ಪ್ರಭಾರ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಮಹೇಶ್ ಬಾಬು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಂಟರ ಯಾನೆ ನಾಡವರ ಸಂಘದ ಆಶ್ರಯದಲ್ಲಿ ದಕ್ಷ ಪ್ರಾಮಾಣಿಕ ಐಪಿಎಸ್ ಅಧಿಕಾರಿ ದಿವಂಗತ ಮಧುಕರ ಶೆಟ್ಟಿಯವರಿಗೆ ನುಡಿನಮನ ಹಾಗೂ ರೋಗಿಗಳಿಗೆ ನೆರವು ಕಾರ್ಯಕ್ರಮ ಸಂಘದ ಅಧ್ಯಕ್ಷ ಬಿ. ಜಗನ್ನಾಥ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಹಕ್ಲಾಡಿ ಪ್ರೌಡಶಾಲಾ ಮುಖ್ಯ ಶಿಕ್ಷಕ ಡಾ|| ಕಿಶೋರ ಕುಮಾರ್ ಶೆಟ್ಟಿ ದಿ. ಮಧುಕರ ಶೆಟ್ಟಿಯ ಜೀವನಾದರ್ಶನಗಳನ್ನು ಅಳವಡಿಸಿಕೊಳ್ಳುವಂತೆ ಯುವಕರಿಗೆ ಕg ನೀಡುತ್ತಾ ನುಡಿ ಗೌರವ ಸಲ್ಲಿಸಿದರು. ಕುವೈಟ್ ಬಂಟರ ಸಂಘದ ವತಿಯಿಂದ ಮಧುಕರ ಶೆಟ್ಟಿ ಸಾಮಾಜಿಕ ಕಳಕಳಿ ಆದರ್ಶವಾಗಿರುವ ನಿಟ್ಟಿನಲ್ಲಿ ಉನ್ನತ ವಿದ್ಯಾಬ್ಯಾಸ ಪಡೆಯುತ್ತಿರುವ ಬಡಕುಟುಂಬದ ವಿದಾರ್ಥಿಗಳಿಗೆ ಹಾಗೂ ನೆರವು ಬಯಸಿ ಬಂದ ರೋಗಿಗಳಿಗೆ ರೂ.೭೫,೦೦೦ ಮೊತ್ತದ ಧನ ಸಹಾಯವನ್ನು ಕುವೈಟ್ ಬಂಟರ ಸಂಘದ ಅಧ್ಯಕ್ಷ ಪ್ರೊಪೆಸರ್ ಶೇಖರ ಶೆಟ್ಟಿ ತಂತ್ರಾಡಿ ವಿತರಿಸಿದರು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರುಗಳಾದ ನಾರಾಯಣ ಶೆಟ್ಟಿ ಚುಚ್ಚಿ, ಜಗನ್ನಾಥ ಶೆಟ್ಟಿ ನಾಕಟ್ಟೆ, ಕೆ. ವಿಠ್ಠಲ ಶೆಟ್ಟಿ ಎಚ್. ವಸಂತ ಹೆಗ್ಡೆ ಉದ್ಯಮಿ ಗೋಕಲ್ ಶೆಟ್ಟಿ ಉಪ್ಪುಂದ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪತಂಜಲಿ ಯೋಗ ಪೀಠ ಹರಿದ್ವಾರ, ಪತಂಜಲಿ ಯೋಗ ಸಮಿತಿ ಶಿರೂರು, ಉಡುಪಿ, ಜೆಸಿಐ ಶಿರೂರು ಸಹಭಾಗಿತ್ವದಲ್ಲಿ ರಥ ಸಪ್ತಮಿ ಪ್ರಯುಕ್ತ ಶಿರೂರು ವೆಂಕಟ್ರಮಣ ಸಭಾಭವನದಲ್ಲಿ 108 ಸೂರ್ಯ ನಮಸ್ಕಾರ ನಡೆಯಿತು. ದೀಪ ಪ್ರಜ್ವಲಿಸಿದ ಯೋಗ ಸಹ ಶಿಕ್ಷಕರಾದ ಶ್ರೀನಿವಾಸ್ ಶೆಣೈ ಮಾತನಾಡಿ ಸಕಲ ಜೀವ ರಾಶಿಗಳಿಗೆ ಚೈತನ್ಯವನ್ನು ತುಂಬಿದ ಸೂರ್ಯ ಜಯಂತಿಯನ್ನು ನಾವು ನಿರೋಗಿಗಳಾಗಿ ಬಾಳುವಂತಾಗಲಿ ಎಂದು ಹಾರೈಸಿದರು. ಯೋಗದಿಂದ ಏಕಾಗ್ರತೆ, ಜೊತೆಗೆ ನಮ್ಮಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಈ ಸಮಯದಲ್ಲಿ ಪತಂಜಲಿ ಯೋಗ ಸಮಿತಿ ಅಧ್ಯಕ್ಷ ರಘುರಾಮ್ ಮೆಸ್ತ, ಸಂಚಾಲಕ ಮೋಹನ್ ರೇವಂಕರ್, ಜೆಸಿಐ ಅಧ್ಯಕ್ಷ ನಾಗೇಶ್ ಕೆ, ಪತ್ರಕರ್ತ ಅರುಣಕುಮಾರ್ ಶಿರೂರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ವಿದ್ಯಾರ್ಥಿಗಳಲ್ಲಿ ಅಡಗಿರುವ ಕ್ರೀಡಾ ಪ್ರತಿಭೆಯನ್ನು ಹೊರಹಾಕಲು ಅವಕಾಶಗಳ ಜೊತೆಯಲ್ಲಿ, ಪೂರಕ ಮತ್ತು ಸಮರ್ಪಕ ಪರಿಕರಗಳು ಕೂಡ ಅತೀ ಅವಶ್ಯ, ಆ ನಿಟ್ಟಿನಲ್ಲಿ ನಮ್ಮ ಕಾಲೇಜಿಗೆ ನೀಡಿದ ಕ್ರೀಡಾ ಸಾಮಗ್ರಿಗಳ ಕೋಡುಗೆ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವುದಲ್ಲದೆ, ವಿದ್ಯಾರ್ಥಿಗಳನ್ನು ಉನ್ನತ ವ್ಯಾಸಂಗದತ್ತ ಸೆಳೆಯಲು ಸಹಕಾರಿ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರಿನ ಪ್ರಾಚಾರ್ಯರಾದ ಬಿ ಏ ಮೇಳಿಯವರು ಕಾರ್ಯಕ್ರಮದ ಅಧ್ಯಕ್ಷೀಯ ನುಡಿಯನ್ನು ಆಡಿದರು. ದಿವಂಗತ ವೆಂಕಟೇಶ ಅನಂತ ಪ್ರಭು ಪ್ರಭುಕೇರಿ ನಾಯ್ಕನಕಟ್ಟೆರವರ ಸ್ಮರಣಾರ್ಥ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಸಿ,ಎ.ಎನ್. ರಮಾನಂದ ಪ್ರಭು ಮಸ್ಕತ್ ಇವರು ದೇಣಿಗೆ ನೀಡಿದ ಕ್ರೀಡಾ ಸಾಮಗ್ರಿಗಳ ಸ್ವೀಕಾರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉದ್ಯಮಿಗಳು ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ಮುತ್ತಯ್ಯ ಪೂಜಾರಿ ಕಳವಾಡಿ, ಹಾಗೂ ಹರೀಶ ಬೈಂದೂರು ಅತಿಥಿಗಳ ನೆಲೆಯಲ್ಲಿ ಉಪಸ್ಥಿತರಿದ್ದು, ಕ್ರೀಡಾ ಸಾಮಗ್ರಿಗನ್ನು ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದರು. ಹಾಗೂ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಕ್ರೀಡಾ ಸಂಘದ ಸಂಚಾಲಕರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಷ್ಟ್ರದ ಕುರಿತಾದ ಅಭಿಮಾನ, ವಿವಿಧತೆಯಲ್ಲಿ ಏಕತೆಯನ್ನು ಕಾಪಾಡುವ ಮನಸ್ಥಿತಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಸಂವಿಧಾನ ತಿಳಿಸಿರುವ ಮೂಲಭೂತ ಕರ್ತವ್ಯವನ್ನು ಯುವಜನತೆ ನ್ಯಾಯಯುತವಾಗಿ ಪಾಲಿಸಿದರೆ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಬಿ.ಬಿ.ಹೆಗ್ಡೆ ಕಾಲೇಜು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರವೀಣ್ ಮೊಗವೀರ ಗಂಗೊಳ್ಳಿ ಹೇಳಿದರು. ಕುಂದಾಪುರ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯತೆ ದಿನಾಚರಣೆಯಲ್ಲಿ ಮಾತನಾಡಿ ವೈಯಕ್ತಿಕ ನೆಲೆಯಲ್ಲಿ ರಾಷ್ಟ್ರದ ಕುರಿತಾದ ಸಕರಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳುವುದರ ಜೊತೆಗೆ ಬದುಕನ್ನು ರಾಷ್ಟ್ರಕ್ಕೆ ಸಮರ್ಪಿಸಬೇಕು ಎಂದರು. ಕಾಲೇಜು ನಿರ್ದೇಶಕ ಪ್ರೊ. ದೋಮ ಚಂದ್ರಶೇಖರ್, ಪ್ರಭಾರ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಕಾಲೇಜು ಎನ್.ಎಸ್.ಎಸ್. ಯೋಜನಾಧಿಕಾರಿ ಸತೀಶ್ ಶೆಟ್ಟಿ ಹೆಸ್ಕತ್ತೂರು ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಕೇವಲ ಪರೀಕ್ಷೆಯಲ್ಲಿ ಗಳಿಸುವ ಅಂಕಗಳಷ್ಟೇ ಪ್ರಮುಖವಲ್ಲ ಆದರೆ ಪ್ರತೀ ವಿದ್ಯಾರ್ಥಿಯು ನಮ್ಮ ದೇಶದ ಸಂಸ್ಕೃತಿ ಮತ್ತು ಸನಾತನತೆಯನ್ನು ಕಾಪಾಡುವ ಮುಂದಿನ ಭಾವೀ ಪ್ರಜೆಗಳು ಈ ಮೌಲ್ಯವನ್ನು ವಿದ್ಯಾರ್ಥಿಗಳಲ್ಲಿ ತುಂಬುವಲ್ಲಿ ಶಿಕ್ಷಣ ಸಂಸ್ಥೆ, ಶಿಕ್ಷಕರು ಹಾಗೂ ಪಾಲಕರು ಶ್ರಮ ವಹಿಸಬೇಕು ಎಂದು ಗುರುಕುಲ ವಿದ್ಯಾಸಂಸ್ಥೆಯ ಜಂಟಿ ಕಾರ್ಯನಿರ್ವಾಹಕ ಸುಭಾಶ್ಚಂದ್ರ ಶೆಟ್ಟಿ ತಮ್ಮ ಅಧ್ಯಕ್ಷೀಯ ಮಾತುಗಳನ್ನಾಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಅರವಿಂದ ಮರಳಿಯವರು ವಾರ್ಷಿಕ ಪರೀಕ್ಷೆಯನ್ನು ವಿದ್ಯಾರ್ಥಿಗಳು ಹೇಗೆ ಯಶಸ್ವಿಯಾಗಿ ಬರೆಯಬೇಕು ಮತ್ತು ೨೦೧೯-೨೦ನೇ ಶೈಕ್ಷಣಿಕ ವರ್ಷದಲ್ಲಿ ಪರಿಚಯಿಸುವ ಪುಸ್ತಕದ ಬಗ್ಗೆ ಪಾಲಕರಿಗೆ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಜಂಟಿ. ಕಾರ್ಯನಿರ್ವಾಹಕರಾದ ಅನುಪಮಾ ಎಸ್. ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಥೆಯ ಶಿಕ್ಷಕಿಯರಾದ ಸುಮನ್ ಹಾಗೂ ಬಬಿತ ಕ್ರಮವಾಗಿ ನಿರೂಪಿಸಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ಕೊಲೆ ಆರೋಪಿಗಳಿಗೆ ಸಹಕರಿಸಿದ ಆರೋಪದಲ್ಲಿ, ಜಿಲ್ಲಾ ಪಂಚಾಯ್ತಿ ಸದಸ್ಯ ಸೇರಿದಂತೆ ಡಿಎಆರ್ನ ಇಬ್ಬರು ಪೊಲೀಸ್ ಪೇದೆಗಳನ್ನ ಬಂಧಿಸಲಾಗಿದೆ. ಜಿ.ಪಂ ಸದಸ್ಯ ರಾಘವೇಂದ್ರ ಕಾಂಚನ್, ಪೇದೆಗಳಾದ ಪವನ್ ಅಮೀನ್, ವೀರೇಂದ್ರ ಆಚಾರ್ಯ ಬಂಧಿತರು. ಕಳೆದ ತಿಂಗಳ ಜನವರಿ 27 ರಂದು ಕೋಟದಲ್ಲಿ ಭರತ್ ಹಾಗೂ ಯತೀಶ್ ಎಂಬುವವರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಆರೋಪಿಗಳ ಜೊತೆ ಪೇದೆಗಳು ನಿಕಟ ಸಂಪರ್ಕ ಹೊಂದಿದ್ದರು ಹಾಗೂ ಹೆಬ್ರಿಯ ಕುಚ್ಚೂರಿನಲ್ಲಿರುವ ಪವನ್ ಅಮೀನ್ ಮನೆಯಲ್ಲೇ ಆರೋಪಿಗಳು ತಂಗಿದ್ದರು. ಇನ್ನು ಆರೋಪಿಗಳಿಗೆ ಮೊಬೈಲ್ ಹಾಗೂ ಹೊಸ ಸಿಮ್ ಕಾರ್ಡ್ ಕೊಡಿಸಿದ್ದೂ ಅಲ್ಲದೇ ಕಾನ್ಸ್ಟೇಬಲ್ ವೀರೇಂದ್ರ ಜೊತೆ ಸೇರಿ ಕಾರಿನ ವ್ಯವಸ್ಥೆಯನ್ನು ಪವನ್ ಮಾಡಿಕೊಟ್ಟು, ಆಗುಂಬೆಯಲ್ಲಿರುವ ಸಂಬಂಧಿಕರ ಮನೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದ. ಜಿ.ಪಂ ಸದಸ್ಯ ರಾಘವೇಂದ್ರ ಕಾಂಚನ್ ಕುಮ್ಮಕ್ಕಿನಂತೆ ಕೊಲೆ ನಡೆದಿತ್ತು. ಇದನ್ನೂ ಓದಿ: ► ಕೋಟದಲ್ಲಿ ಯುವಕರಿಬ್ಬರ ಬರ್ಬರ ಕೊಲೆ – https://kundapraa.com/?p=30959 . ► ಕೋಟದಲ್ಲಿ ಸ್ನೇಹಿತರಿಬ್ಬರ ಕೊಲೆ:…
