ಹೆಮ್ಮಾಡಿ ಜನತಾ ಪಿಯು ಕಾಲೇಜು: ಆಜಾದಿ-ಕಾ ಅಮೃತಮಹೋತ್ಸವದ ಅಂಗವಾಗಿ ಉಪನ್ಯಾಸ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಆಜಾದಿ-ಕಾ ಅಮೃತಮಹೋತ್ಸವದ ಅಂಗವಾಗಿ “ದೇಶದ ಸ್ವಾತಂತ್ರ್ಯ ಸಂಗ್ರಾಮ ಒಂದು ನೆನಪು” ಈ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.

Call us

Call us

ಸರ್ಕಾರಿ ಪ್ರೌಢಶಾಲೆ ಹೆಸ್ಕುತ್ತೂರಿನ ಮುಖ್ಯ ಶಿಕ್ಷಕರಾದ ಅಬ್ದುಲ್ ರವೂಫ್ ಅವರು ದೇಶದ ಸ್ವಾತಂತ್ರ್ಯ ಸಂಗ್ರಾಮ ಒಂದು ನೆನಪು ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.

Call us

Call us

ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾಗಿರುವ ಗಣೇಶ ಮೊಗವೀರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ರಾಷ್ಟ್ರಭಕ್ತಿಯನ್ನು ಮೈಗೂಡಿಸಿಕೊಳ್ಳುತ್ತಾ ಸಾಧಕ ವಿದ್ಯಾರ್ಥಿಗಳಾಗಿ ದೇಶಕ್ಕೆ ಮಾದರಿ ಪ್ರಜೆಯಾಗುವಂತೆ ಕರೆ ನೀಡಿದರು.

ಸಮಾರಂಭದಲ್ಲಿ ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಕಾಳವಾರ,ಕಾಲೇಜಿನ ಉಪಪ್ರಾಂಶುಪಾಲರಾಗಿರುವ ರಮೇಶ್ ಪೂಜಾರಿ ಉಪಸ್ಥಿತರಿದ್ದರು. ಆಂಗ್ಲಭಾಷಾ ಉಪನ್ಯಾಸಕಿಯಾಗಿರುವ ಪ್ರಿಯಾಂಕ ಅತಿಥಿಗಳನ್ನು ಪರಿಚಯಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕರಾಗಿರುವ ಅಭಿಜಿತ್ ಬಹುಮಾನ ವಿಜೇತರ ಯಾದಿಯನ್ನು ವಾಚಿಸಿ, ಕನ್ನಡ ಉಪನ್ಯಾಸಕರಾದ ಉದಯ್ ನಾಯ್ಕ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Leave a Reply

Your email address will not be published. Required fields are marked *

16 − seven =