ಪ್ರಸಿದ್ಧ ನಟ ರಮೇಶ್ ಭಟ್‌ಗೆ ಬಿಂದಶ್ರೀ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ವಿವಿಧ ಕ್ಷೇತ್ರದ ಸಾಧಕರಿಗೆ ‘ಸುರಭಿ ರಿ. ಬೈಂದೂರು’’ ಸಂಸ್ಥೆಯು ಪ್ರತಿವರ್ಷ ಕೊಡಮಾಡುತ್ತಿರುವ ‘ಬಿಂದಶ್ರೀ’ ಪ್ರಶಸ್ತಿಗೆ ಈ ಭಾರಿ ಪ್ರಸಿದ್ಧ ರಂಗಭೂಮಿ ಮತ್ತು ಚಲನಚಿತ್ರ ಕಲಾವಿದ ರಮೇಶ್ ಭಟ್ ಆಯ್ಕೆಯಾಗಿದ್ದು ಜ.೨೪ರಂದು ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು ಹತ್ತು ಸಾವಿರ ರೂ. ನಗದು ಚಿನ್ನದ ಪದಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.

ಜನವರಿ 24ರ ಗುರುವಾರ ಸಂಜೆ 6 ಗಂಟೆಗೆ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದ್ದು, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಬೈಂದೂರು ಶಾಸಕ ಬಿ. ಎಂ ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಜಿ.ಪಂ ಸದಸ್ಯ ಶಂಕರ ಪೂಜಾರಿ ಶುಭಶಂಸನೆಗೈಯಲಿದ್ದಾರೆ. ಕೊಲ್ಲೂರು ದೇವಳದ ಮಾಜಿ ಧರ್ಮದರ್ಶಿ ಜಯಾನಂದ ಹೋಬಳಿದಾರ್ ಮೊದಲಾದವರು ಉಪಸ್ಥಿತರಿರಲಿದ್ದಾರೆ.

ಇದನ್ನೂ ಓದಿ:

► ಸುರಭಿ ಜೈಸಿರಿ ಆಮಂತ್ರಣ ಪತ್ರಿಕೆ ಬಿಡುಗಡೆ – https://kundapraa.com/?p=30847 .

► ಜ.23ರಿಂದ ಸುರಭಿ ಜೈಸಿರಿ – ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ – https://kundapraa.com/?p=30841 .

Leave a Reply

Your email address will not be published. Required fields are marked *

two × 3 =