ಅಲ್ಪೈನ್ ಅಸೋಸಿಯೇಟ್ಸ್‌ನಿಂದ ಮಾಸ್ಕ್, ಪಿಪಿಟಿ ಕಿಟ್ ವಿತರಣೆ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕೊರೊನಾ ವೈರಸ್ ನಿಯಂತ್ರಣದಲ್ಲಿ ಶ್ರಮಿಸುತ್ತಿರುವ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರ ನೆರವಿಗೆ ಧಾವಿಸಿರುವ ಅಲ್ಪೈನ್ ಅಸೋಸಿಯೇಟ್ಸ್‌ ಮಂಗಳೂರು-ಗಂಗೊಳ್ಳಿ ಸಂಸ್ಥೆಯು ಗಂಗೊಳ್ಳಿ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರಿಗೆ ಸರ್ಜಿಕಲ್ ಮಾಸ್ಕ್ ಮತ್ತು ಗ್ಲೌವ್ಸ್‌ಗಳನ್ನು ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ವಿತರಿಸಿದೆ.

Call us

ಅಲ್ಪೈನ್ ಅಸೋಸಿಯೇಟ್ಸ್‌ನಿಂದ ಇತ್ತಿಚಿಗೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ಪಿಪಿಇ ಕಿಟ್, ಶಿರೂರು, ಬೈಂದೂರು ಹಾಗೂ ಗಂಗೊಳ್ಳಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆ ಸಿಬ್ಬಂಧಿಗಳಿಗೆ ಎರಡು ದಿನದ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಿದ್ದರು.

Call us

ಸರ್ಜಿಕಲ್ ಮಾಸ್ಕ್ ಮತ್ತು ಗ್ಲೌವ್ಸ್‌ಗಳನ್ನು ವಿತರಿಸುವ ವೇಳೆ ಅಲ್ಪೈನ್ ಅಸೋಸಿಯೇಟ್ಸ್ ಸಂಸ್ಥೆಯ ಮಹಮ್ಮದ್ ಜಹೀರ್, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಡಾ. ಶಬನಾಜ್, ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

10 + twelve =