ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹಳ್ಳಿಹೊಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ವಿಶೇಷ ಚೇತನರಿಗೆ ಎಪಿಡಿ( ದಿ ಅಸೋಸಿಯೇಶನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ) ಸಂಸ್ಥೆಯಿಂದ ದಿನಸಿ ಕಿಟ್ ವಿತರಣಾ ಕಾರ್ಯಕ್ರಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು.
ಈ ಕಾರ್ಯಕ್ರಮದಲ್ಲಿ ಎಪಿಡಿ ಸಂಸ್ಥೆಯ ನೋಡಲ್ ಅಧಿಕಾರಿಗಳಾದ ಹರೀಶ ಶೆಟ್ಟಿ ಕಿಟ್ ವಿತರಿಸಿ ಮಾತನಾಡಿ, ಎಪಿಡಿ ಸಂಸ್ಥೆಯ ಬಗ್ಗೆ ಮತ್ತು ಜೀವನೋಪಾಯ ಕಾರ್ಯಕ್ರಮದ ತರಬೇತಿ ಬಗ್ಗೆ ಸ್ವವಿಸ್ತಾರವಾದ ಮಾಹಿತಿಯನ್ನು ನೀಡಿದರು,
ಈ ಸಂದರ್ಭ ಹಳ್ಳಿಹೊಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರದೀಪ ಕೊಠಾರಿ, ಉಪಾಧ್ಯಕ್ಷರು, ಸರ್ವ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಮತ್ತು ಗ್ರಾಮದ ಎಲ್ಲಾ ವಿಶೇಷಚೇತನರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಮಾಧವ ದೇವಾಡಿಗರು ಸ್ವಾಗತಿಸಿ, ನಿರೂಪಿಸಿದರು ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಆಕಾಶ್ ಶೆಟ್ಟಿ ವಂದಿಸಿದರು.