ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸ್ತಕ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ಕೃಷಿ ಪಂಡಿತ ಪ್ರಶಸ್ತಿಗೆ ಭಾಗವಹಿಸಲು ಇಚ್ಚಿಸುವವರು ಉಡುಪಿ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ದಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು.

ಭಾಗವಹಿಸುವವರ ಸಂಶೋಧನೆ /ಸಾಧನೆಗಳು ಮೂಲ ಸ್ವರೂಪದ್ದಾಗಿದ್ದು ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು. ಹಾಗೂ ವ್ಯಾಪಕವಾಗಿ ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು.ಅರ್ಜಿಯನ್ನು ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಿಂದ ಪಡೆದು ಸೆಪ್ಟೆಂಬರ್ 7 ರ ಒಳಗೆ ಸಲ್ಲಿಸಬಹುದು ಎಂದು ಉಡುಪಿ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:
ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ – https://kundapraa.com/?p=40294 .

 

Leave a Reply

Your email address will not be published. Required fields are marked *

12 − seven =