ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ: ಉಡುಪಿ ಜಿಲ್ಲಾ ಶಾಲಾ ಕಾಲೇಜಿಗೆ ರಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ, 10:42pm: ಅಯೋಧ್ಯಾ ಪ್ರಕರಣದ ತೀರ್ಪು ನವಂಬರ್ 09 ಶನಿವಾರ ಪ್ರಕಟವಾಗಲಿದೆ. ನಾಳೆ ಬೆಳಿಗ್ಗೆ 10.30ಕ್ಕೆ ಸುಪ್ರೀಂಕೋರ್ಟ್ ನ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಸಾಂವಿಧಾನಿಕ ಪೀಠ ಈ ತೀರ್ಪನ್ನು ಪ್ರಕಟಿಸಲಿದೆ.

ಈ ಹಿನ್ನೆಲೆಯಲ್ಲಿ ದೇಶಾದ್ಯಂತ‌ ಬೀಗು ಬಂದೋವಸ್ತ್ ಏರ್ಪಡಿಸಲಾಗಿದ್ದು, ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೂ ಶನಿವಾರ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿದ್ದು ಅವರಿಗೆ ರಜೆ ನೀಡುವುದನ್ನು ಕುಲಪತಿಗಳ ವಿವೇಚನೆಗೆ ಬಿಡಲಾಗಿದೆ ಎಂದಿದ್ದಾರೆ. (ಈಗ ಕರ್ನಾಟಕ ರಾಜ್ಯ ಸರಕಾರವೇ ರಜೆ ಘೋಷಣೆ ಮಾಡಿದೆ.)

ಕುಂದಾಪ್ರ ಡಾಟ್ ಕಾಂ ಸುದ್ದಿ.

ಶತಮಾನಗಳಿಂದ ವಿವಾದದ ಕೇಂದ್ರ ಬಿಂದುವಾಗಿದ್ದ ರಾಮಜನ್ಮಭೂಮಿ ವಿವಾದಕ್ಕೆ ಈ ತೀರ್ಪಿನ ಮೂಲಕ ತಾರ್ಕಿಕ ಅಂತ್ಯ ಸಿಗಬಹುದೇ ಎಂಬ ನಿರೀಕ್ಷೆಯಲ್ಲಿ ಜನರಿದ್ದಾರೆ. ಐತಿಹಾಸಿಕ ಅಯೋಧ್ಯಾ ತೀರ್ಪು ಪ್ರಕಟವಾಗುತ್ತಿರುವ ಹಿನ್ನಲೆಯಲ್ಲಿ ದೇಶಾದ್ಯಂತ ಬಿಗು ಬಂದೋಬಸ್ತ್ ಏರ್ಪಡಿಸಲಾಗಿದೆ. ವಿವಾದದ ಕೇಂದ್ರಬಿಂದು ಅಯೋಧ್ಯೆಯಲ್ಲಿ ಅಕ್ಷರಶಃ ಭದ್ರತಾ ಚಕ್ರವ್ಯೂಹವನ್ನು ರಚಿಸಲಾಗಿದೆ.

Leave a Reply

Your email address will not be published. Required fields are marked *

sixteen − two =