ಮೂಡುಬಗೆ: ಬೈಕಿಗೆ ಟಿಪ್ಪರ್ ಡಿಕ್ಕಿಯಾಗಿ ಯುವಕನ ಸಾವು. ಇನ್ನೊರ್ವ ಗಂಭೀರ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಮೂಡುಬಗೆಯಲ್ಲಿ ಬೈಕ್ ಸವಾರರಿಗೆ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದರೇ ಹಿಂಬದಿಯ ಸವಾರ ಗಂಭೀರ ಗಾಯಗೊಂಡಿದ್ದಾರೆ. ಮೃತರನ್ನು ಹಳ್ಳಿಹೊಳೆ ಶಾಡಬೇರು ನಿವಾಸಿ ಶಿವಕುಮಾರ್ ರಾವ್ (28) ಹಾಗೂ ಗಾಯಾಳುವನ್ನು ಕೊಕ್ಕಡದ ನಿವಾಸಿ ರವಿ (35) ಎಂದು ಗುರುತಿಸಲಾಗಿದೆ.

Call us

ಕುಂದಾಪುರದಿಂದ ಹಳ್ಳಿಹೊಳೆಗೆ ಪಲ್ಸರ್ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಮೂಡುಬಗೆ ರಸ್ತೆಯಲ್ಲಿ ಎದುರಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿತ್ತು. ಅಪಘಾತದ ತೀವ್ರತೆಗೆ ಶಿವಕುಮಾರ್ ಸ್ಥಳದಲ್ಲಿಯೇ ಮೃತಪಟ್ಟಿದ್ದರೇ ರವಿ ಅವರು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಮಣಿಪಾಲದ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಅಪಘಾತ ನಡೆಸಿದ ಟಿಪ್ಪರ್ ನಿಲ್ಲಿಸದೇ ಪರಾರಿಯಾಗಿದ್ದು ಪೊಲೀಸರು ಶೋಧ ನಡೆಸುತ್ತಿದ್ದಾರೆ. ಕುಂದಾಪ್ರ ಡಾಟ್ ಕಾಂ. 

ಶಾಡಬೇರು ನಿವಾಸಿ ಮಂಜುನಾಥ್ ಅವರ ಒಬ್ಬನೇ ಮಗನಾಗಿದ್ದ ಶಿವಕುಮಾರ್ ಬೆಂಗಳೂರಿನಿಂದ ಕೆಲವು ತಿಂಗಳ ಹಿಂದಷ್ಟೇ ಊರಿಗೆ ಮರಳಿ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು. ರವಿ ಶಿವಕುಮಾರ್ ಅವರ ಸಂಬಂಧಿಯಾಗಿದ್ದು ಇಬ್ಬರು ಮಧ್ಯಾಹ್ನ ಕುಂದಾಪುರದಲ್ಲಿ ಕೃಷಿ ಸಲಕರಣೆಗಳನ್ನು ಖರೀದಿಸಿ ಮನೆಗೆ ಹಿಂದಿರುಗುತ್ತಿದ್ದರು ಎನ್ನಲಾಗಿದೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

three × 5 =